ಬೆಂಗಳೂರು: ಮಂಡ್ಯದಲ್ಲಿ ಮೆಗಾ ಡೈರಿ (Mega Dairy at Mandya) ಉದ್ಘಾಟನೆ ಮಾಡಿದ ಬಳಿಕ ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರು ಅಮುಲ್ ಜೊತೆ ಕೆಎಂಎಫ್ ವಿಲೀನ ಕುರಿತಂತೆ ನೀಡಿದ್ದ ಹೇಳಿಕೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai), ಅಮೂಲ್ (Amul) ಜೊತೆ ಕೆಎಂಫ್ (KMF) ವಿಲೀನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿರೋಧ ಪಕ್ಷಗಳ ಟೀಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಅಮುಲ್ ಜೊತೆ ನಂದಿನಿ ವಿಲೀನವಾಗಲಿದೆ ಎಂಬುವುದು ಬಹಳ ತಪ್ಪು ಕಲ್ಪನೆ. ಊಹೆ ಮಾಡಿ ಟೀಕೆ ಮಾಡೋರಿಗೆ ಏನು ಹೇಳೋದು ಅಂತ ಸಿಎಂ ಪ್ರಶ್ನಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ಹೋಗಬೇಕು. ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು. ಹಾಗಂತ ಮರ್ಜ್ ಮಾಡೋದಾಗಲಿ ಇನ್ನೊಂದು ಮಾಡೋದಾಗಲಿ ಅಲ್ಲ. ನಂದಿನ ಅಸ್ತಿತ್ವ ಇದ್ದೇ ಇರುತ್ತೆ, ಇನ್ನೂ 100 ವರ್ಷ ಆದ್ರು ಇದ್ದೇ ಇರುತ್ತೆ ಎಂದಿದ್ದಾರೆ.c
ಇದನ್ನೂ ಓದಿ: KMF-Amul Cooperation: ಅಮುಲ್ ಜೊತೆ ವಿಲೀನವಾಗುತ್ತಾ ನಂದಿನಿ? ಅಮಿತ್ ಶಾ ಪ್ರಸ್ತಾಪಕ್ಕೆ ಕನ್ನಡಿಗರು ಕಿಡಿಕಿಡಿ
ಅಮುಲ್ ಅವರದ್ದು ಅವರಿಗೆ ಇರುತ್ತೆ ನಮ್ಮ ನಂದಿನ ನಮಗೆ ಇರುತ್ತೆ. ಕೆಲವು ಏರಿಯಾಗಳಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡಿದರೆ ಲಾಭ ಇರುತ್ತೆ. ಕೆಲ ಭಾಗದಲ್ಲಿ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಅಮಿತ್ ಶಾ ಹೇಳಿದ್ದಾರೆ. ಇದನ್ನ ದೊಡ್ಡ ಸುದ್ದಿ ಮಾಡಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಅವಿತ್ ಶಾ ಸಹ ಹೇಳಿದ್ದಾರೆ. ನಂದಿನಿ ಶಾಶ್ವತವಾಗಿ ಪ್ರತ್ಯೇಕವಾಗಿಯೇ ಇರುತ್ತೆ, ತನ್ನ ಗುರುತನ್ನು ಮುಂದುವರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಮಿತ್ ಶಾ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ
ಇನ್ನು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಂದಿನಿ ಮತ್ತು ಅಮೂಲ್ ಒಟ್ಟಿಗೆ ಮಾರ್ಕೆಟಿಂಗ್ ಮಾಡುವ ಬಗ್ಗೆ ಅಮಿತ್ ಶಾ ಹೇಳಿದ್ದಾರೆ. ಎರಡನ್ನೂ ವಿಲೀನ ಮಾಡುವ ಬಗ್ಗೆ ಹೇಳಿಲ್ಲ. ನಂದಿನಿ ತನ್ನ ಅಸ್ತಿತ್ವವನ್ನು ಸರ್ಕಾರದ ಮಾರ್ಗದರ್ಶನದಲ್ಲಿ ಗಟ್ಟಿಯಾಗಿ ಉಳಿಸಿಕೊಳ್ಳಲಿದೆ ಎಂದಿದ್ದಾರೆ.
ಇದನ್ನೂ ಓದಿ: Gandhada Gudi-KMF: ನಂದಿನಿ ಹಾಲಿನ ಪ್ಯಾಕೇಟ್ನಲ್ಲಿ ಗಂಧದಗುಡಿ ಹೆಸರು; ಅಪ್ಪುಗೆ ಕೆಎಂಎಫ್ನಿಂದ ವಿಶೇಷ ಗೌರವ!
ಕೆಎಂಎಫ್ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ
ಹೆಚ್ಡಿ ಕುಮಾರಸ್ವಾಮಿ ಮಾತನಾಡಿ, ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ.
ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ. ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಕಿಡಿಕಾರಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ