HOME » NEWS » State » KODAGU POLICE HIGH ALERT ON DRUGS AND CANNABIS MAFIA ZP

ಡ್ರಗ್ಸ್ ಮತ್ತು ಗಾಂಜಾ ದಂಧೆ ಮಟ್ಟಹಾಕಲು ಕೊಡಗು ಪೊಲೀಸ್ ಹೈ ಅಲರ್ಟ್..!

ಬೆಂಗಳೂರಿನಲ್ಲಿ ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರವಾಸಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಎಲ್ಲಡೆ ಹದ್ದಿನ ಕಣ್ಣಿಟ್ಟು ಸರ್ಚ್ ಮಾಡುತ್ತಿರುವ ಪೊಲೀಸರು ಅಕ್ರಮ ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

news18-kannada
Updated:September 17, 2020, 5:21 PM IST
ಡ್ರಗ್ಸ್ ಮತ್ತು ಗಾಂಜಾ ದಂಧೆ ಮಟ್ಟಹಾಕಲು ಕೊಡಗು ಪೊಲೀಸ್ ಹೈ ಅಲರ್ಟ್..!
Kodagu police
  • Share this:
ಮಡಿಕೇರಿ (ಸೆ.17): ರಾಜ್ಯದಲ್ಲಿ  ಸ್ಯಾಂಡಲ್ ವುಡ್ ಡ್ರಗ್ಸ್  ದಂಧೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇದರ ಬೆನ್ನಲ್ಲೇ ಕೊಡಗು ಜಿಲ್ಲಾ ಪೊಲೀಸರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಪ್ರವಾಸೋದ್ಯಮಕ್ಕೆ ಫೇಮಸ್ ಆಗಿರುವ ಜಿಲ್ಲೆಯಲ್ಲಿ ಸಾವಿರಾರು ಹೋಂಸ್ಟೇ, ರೆಸಾರ್ಟ್‍ಗಳಿದ್ದು, ಹೊರಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಸಾವಿರಾರು ಪ್ರವಾಸಿಗರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದೆ. ಏಕೆಂದರೆ ಕೊಡಗಿನಲ್ಲಿ ಗಾಂಜಾ ಡ್ರಗ್ಸ್ ಗಳ ಮಾರಾಟ ಮತ್ತು ಸೇವನೆಯನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಹೊರತಾಗಿ ಹೊರ ಜಿಲ್ಲೆಗಳಿಂದ ಡ್ರಗ್ಸ್ ಹಾಗೂ ಗಾಂಜಾ ಜಿಲ್ಲೆಗೆ ಪ್ರವೇಶಿದಂತೆ ತಡೆಯಲು ಕಾರ್ಯ ಪ್ರವೃತರಾಗಿದ್ದಾರೆ.

ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಪ್ರಕರಣ ಸದ್ದು ಮಾಡುತ್ತಿದ್ದಂತೆ ಕೊಡಗು ಎಸ್ ಪಿ ಕ್ಷಮಾ ಮಿಶ್ರಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಬೇಕು ಎಂದಿದ್ದಾರೆ. ಅಲ್ಲದೆ ಬೀಟ್ ಗಳಲ್ಲಿ ಎಚ್ಚರವಹಿಸಿ ಡ್ರಗ್ಸ್ ಇರಲಿ, ಗಾಂಜಾ ಸಾಗಾಟಕ್ಕೂ ಅವಕಾಶ ಆಗದಂತೆ ಅಲರ್ಟ್ ಆಗಿರುವಂತೆ ಸೂಚಿಸಿದ್ದಾರೆ. ಹೀಗಾಗಿಯೇ ಅಂತರ್ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜಿಲ್ಲೆಗೆ ಬರುವ ಎಲ್ಲಾ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.

ಕೊಡಗು ಎಸ್ ಪಿ ಕ್ಷಮಾ ಮಿಶ್ರಾ


ಇನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೂ ಸೂಚನೆ ನೀಡಿರುವ ಎಸ್‍ಪಿ ಹಗಲು ರಾತ್ರಿ ಕೂಡ ರೌಂಡ್ಸ್ ಹಾಕಲಾಗುತ್ತಿದೆ. ಹೋಂಸ್ಟೇ ಮತ್ತು ರೆಸಾರ್ಟ್‍ಗಳ ಮಾಲೀಕರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಒಂದು ವೇಳೆ ಇಂತಹ ಯಾವುದೇ ಅಕ್ರಮ ಚಟುವಟಿಕೆಗಳ ನಡೆದರೆ ಹೋಂಸ್ಟೇ ಮತ್ತು ರೆಸಾರ್ಟ್ ಮಾಲೀಕರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಕೊಡಗು ಪ್ರವಾಸಿ ಜಿಲ್ಲೆಯಾಗಿದ್ದು, ಇಲ್ಲಿಗೆ ನಿತ್ಯ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ. ಇಲ್ಲಿರುವ ಸಾವಿರಾರು ಹೋಂಸ್ಟೇ ರೆಸಾರ್ಟ್‍ಗಳಲ್ಲಿ, ಅಪಾರ ಸಂಖ್ಯೆಯ ಪ್ರವಾಸಿಗರು ತಂಗುತ್ತಾರೆ. ಆದರೆ ಯಾವ ಪ್ರವಾಸಿ ಹೇಗೆ ಎನ್ನೋದು ಮಾತ್ರ ಯಾರಿಗೂ ಗೊತ್ತಿಲ್ಲ. ಹಿಂದೆಯೂ ಕೊಡಗಿನಲ್ಲಿ ಪ್ರವಾಸಿಗರ ಸೋಗಿನಲ್ಲಿ ಬಂದು ರೇವಾ ಪಾರ್ಟಿಗಳನ್ನು ನಡೆಸಿ ಸಿಕ್ಕಿಬಿದ್ದಿರುವ ಪ್ರಕರಣಗಳು ಇವೆ.

ಇನ್ನು ಸ್ಯಾಂಡಲ್ ವುಡ್‍ನ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ಜಿಲ್ಲೆಯ ಕುಶಾಲನಗರ ಸಮೀಪದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ತಂಡವನ್ನು ಕೊಡಗು ಡಿಸಿಐಬಿ ಪೊಲೀಸರು ಬಂಧಿಸಿತ್ತು. ಜೊತೆಗೆ ಇತ್ತೀಚೆಗೆ ಸಾಕಷ್ಟು ಗಾಂಜಾ ಪ್ರಕರಣಗಳು ಕೂಡ ಬೆಳಕಿಗೆ ಬಂದಿವೆ. ಇವೆಲ್ಲವೂ ಕೊಡಗಿನಲ್ಲೂ ಗಾಂಜಾ ಮತ್ತು ಡ್ರಗ್ಸ್ ದಂಧೆ ಪ್ರಕರಣಗಳು ಇರಬಹುದಾ ಎನ್ನೋ ಅನುಮಾನ ಮೂಡಿದೆ. ಹೀಗಾಗಿ ಸಾರ್ವಜನಿಕರು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಒಟ್ಟಿನಲ್ಲಿ ಬೆಂಗಳೂರಿನಲ್ಲಿ ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರವಾಸಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಎಲ್ಲಡೆ ಹದ್ದಿನ ಕಣ್ಣಿಟ್ಟು ಸರ್ಚ್ ಮಾಡುತ್ತಿರುವ ಪೊಲೀಸರು ಅಕ್ರಮ ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
Published by: zahir
First published: September 17, 2020, 5:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories