HOME » NEWS » State » KODAGU RAIN UPDATES HEAVY RAIN AT KODAGU DISTRICT FROM LAST THREE DAYS AND LANDSLIDE FEAR LG

Kodagu Rain: ಕೊಡಗಿನಲ್ಲಿ ಮುಂದುವರೆದ ಮಳೆ; ನದಿ ತೀರದ ಜನರಿಗೆ ಪ್ರವಾಹದ ಭೀತಿ 

ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಮಾದಾಪುರ, ಗಾಳಿಬೀಡು ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ.  ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

news18-kannada
Updated:September 13, 2020, 2:23 PM IST
Kodagu Rain: ಕೊಡಗಿನಲ್ಲಿ ಮುಂದುವರೆದ ಮಳೆ; ನದಿ ತೀರದ ಜನರಿಗೆ ಪ್ರವಾಹದ ಭೀತಿ 
ಕೊಡಗಿನ ಮಳೆ
  • Share this:
ಕೊಡಗು(ಸೆ.13): ಕೊಡಗು ಜಿಲ್ಲೆಯಾದ್ಯಂತ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದೆ. ಇದು ನದಿ ತೀರದ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಮೂಡಿಸಿದೆ.  ಭಾಗಮಂಡಲ ಮತ್ತು ಕೊಡಗಿನ ಕಾವೇರಿ ಉಗಮ ಸ್ಥಾನ ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇನ್ನು, ಮಡಿಕೇರಿ, ನಾಪೋಕ್ಲು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ಭಾಗಮಂಡಲದ ಸುತ್ತಲೂ ಭಾರೀ ಮಳೆ ಸುರಿಯುತ್ತಿರುವುದರಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ನೀರಿನ ಹರಿಯುವಿಕೆಯಲ್ಲಿ ಭಾರೀ ಏರಿಕೆಯಾಗಿದೆ. ಜೊತೆಗೆ ತ್ರಿವೇಣಿ ಸಂಗಮ ಭರ್ತಿಯಾಗಲು ಇನ್ನೆರಡು ಅಡಿಗಳು ಮಾತ್ರವೇ ಬಾಕಿ ಇದೆ. ಒಂದು ವೇಳೆ ಮಳೆ ಹೀಗೆ ಮುಂದುವರೆದಲ್ಲಿ ತ್ರಿವೇಣಿ ಸಂಗಮ ಭರ್ತಿಯಾಗುವ ಸಾಧ್ಯತೆ ಇದ್ದು, ಮುಳುಗಡೆಯಾಗಿ ತಲಕಾವೇರಿ ನಾಪೋಕ್ಲು ಮತ್ತು ಮಡಿಕೇರಿ ನಡುವಿನ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.



ಇನ್ನು ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಮಾದಾಪುರ, ಗಾಳಿಬೀಡು ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ.  ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಇಡೀ ಜಿಲ್ಲೆಯಲ್ಲಿ ಶೀತಗಾಳಿಯು ಬೀಸುತ್ತಿದ್ದು ಜನರು ನೀಡುವಂತೆ ಮಾಡಿದೆ. ಮಳೆ ಈಗಾಗಲೇ ಸಾಕಷ್ಟು ಸುರಿಯುತ್ತಿರುವುದರಿಂದ ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಕೊಡಗಿನ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಇನ್ನು ಬೆಟ್ಟ ಗುಡ್ಡಗಳಿಂದಲೇ ಕೂಡಿರುವ ಕೊಡಗಿನಲ್ಲಿ ಭೂಕುಸಿತದ ಭೀತಿಯೂ ಎದುರಾಗಿದೆ.

Coronavirus India Updates: ಶನಿವಾರ ಭಾರತದಲ್ಲಿ 94,372 ಕೊರೋನಾ ಪ್ರಕರಣಗಳು ಪತ್ತೆ



ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಬಿಟ್ಟುಬಿಡದೆ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ಬೆಳಿಗ್ಗೆ ಕೊಂಚ ಬಿಡುವು ನೀಡಿದ್ದ ವರುಣ ಮಧ್ಯಾಹ್ನದ ಬಳಿಕ ಬಿಟ್ಟುಬಿಡದೆ ಎಡಬಿಡದೆ ಜಿಟಿಜಿಟಿ ಅಂತಾ ಸುರಿಯುತ್ತಲೇ ಇದೆ. ಮಳೆ ಜೊತೆಗೆ ಭಾರೀ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ. ತಲಕಾವೇರಿ, ಭಾಗಮಂಡಲ ಸುತ್ತಮುತ್ತಲಿನ ಬೆಟ್ಟ ಪ್ರದೇಶದಲ್ಲೆಲ್ಲಾ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಜಾಸ್ತಿಯಾಗಿದೆ.
ಭಾಗಮಂಡಲ ತ್ರಿವೇಣಿ ಸಂಗ್ರಮದಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡಲ್ಲಿ ಜಿಲ್ಲೆಯಲ್ಲಿ ಮತ್ತೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿಯೇ ಮೂರು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕಾವೇರಿ ನದಿ ಪಾತ್ರದ ಜನರು ಮತ್ತು ಬೆಟ್ಟ ಪ್ರದೇಶದ ಜನರು ಆತಂಕ ಎದುರಿಸುವಂತೆ ಆಗಿದೆ.
Published by: Latha CG
First published: September 13, 2020, 2:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories