ಕೊಡಗು (ಆ. 8): ಕೊಡಗಿನಲ್ಲಿ ಸುರಿದ ಭಾರೀ ಮಳೆಯಿಂದ ಭಾಗಮಂಡಲ ಬಳಿಯ ಬ್ರಹ್ಮಗಿರಿ ಬೆಟ್ಟ ಕುಸಿದು ತಲಕಾವೇರಿ ಅರ್ಚಕ ನಾರಾಯಣ ಆಚಾರ್ಯ ಸೇರಿದಂತೆ ಅವರ ಕುಟುಂಬದ ಐವರು ಕೊಚ್ಚಿಹೋಗಿದ್ದರು. ನಿನ್ನೆ ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆ ಸಾಧ್ಯವಾಗಿರಲಿಲ್ಲ. ಇಂದು ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆಯಿದೆ.
ಭಾಗಮಂಡಲ ಬಳಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದವರ ಶೋಧ ಕಾರ್ಯದ ಕಾರ್ಯಚರಣೆಯನ್ನು ನಿನ್ನೆ ಸ್ಥಗಿತಗೊಳಿಸಲಾಗಿತ್ತು. ನಿರಂತರ ಮಳೆಯಿಂದ ಕಾರ್ಯಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ, ಇಂದು ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆಯಿದೆ. ತಲಕಾವೇರಿ ಅರ್ಚಕ ನಾರಾಯಣ ಆಚಾರ್ಯ ಅವರ ಕುಟುಂಬ ಗುಡ್ಡದ ಮಣ್ಣಿನಡಿ ಸಿಲುಕಿ 2 ದಿನಗಳು ಕಳೆದಿವೆ. ಹೀಗಾಗಿ, ಅವರು ಬದಕುಇರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ 170 ಮಿಲಿ ಮೀಟರ್ ಮಳೆ ಸುರಿಯುತ್ತಿದ್ದಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿತ್ತು. ಆದರೆ, ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹೇಳಿದರೂ ಕೇಳದ ನಾರಾಯಣ ಆಚಾರ್ಯರು ಅಲ್ಲೇ ಉಳಿದುಕೊಂಡಿದ್ದರು. ಗುರುವಾರ ಮುಂಜಾನೆ ಬೆಟ್ಟ ಕುಸಿದು ತಲಕಾವೇರಿಯ ಪ್ರಧಾನ ಅರ್ಚಕರಾದ ನಾರಾಯಣ ಆಚಾರ್ಯ ಮತ್ತು ಅವರ ಕುಟುಂಬದ ಐವರು ಕೊಚ್ಚಿಹೋಗಿದ್ದರು.
ಇದನ್ನೂ ಓದಿ: Kodagu Flood: ಕೊಡಗಿನ ಬ್ರಹ್ಮಗಿರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸ್ಥಗಿತ; ಅರ್ಚಕರ ಕುಟುಂಬ ಬದುಕಿರುವುದು ಅನುಮಾನ
ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಭಾಗಮಂಡಲದಲ್ಲಿ ಗುಡ್ಡ ಕುಸಿದಿತ್ತು. ಗುಡ್ಡದ ಮಣ್ಣಿನಡಿ ತಲಕಾವೇರಿ ದೇವಾಲಯದ ಅರ್ಚಕ ನಾರಾಯಣ ಆಚಾರ್ಯ ಅವರ ಕುಟುಂಬ, ಮನೆ, ಹಸುಗಳು ಹುದುಗಿಹೋಗಿತ್ತು. ಈ ಘಟನೆ ನಡೆದು 2 ದಿನಗಳಾದರೂ ಇನ್ನೂ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ, ಅವರು ಹಾಗೂ ಅವರ ಮನೆಯವರು ಬದುಕಿರುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಕೊಡಗಿನಲ್ಲಿ ಪ್ರವಾಹದಿಂದಾಗಿ ಪ್ರತಿಕೂಲ ವಾತಾವರಣ ಇರುವುದರಿಂದ ನಿನ್ನೆ ರಕ್ಷಣಾ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.
ಇಂದು ಅರ್ಚಕರ ಕುಟುಂಬಸ್ಥರ ಪತ್ತೆಗೆ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆಯಿದೆ. ಕಾರ್ಯಾಚರಣೆಗೆ NDRF ತಂಡ ಸಜ್ಜಾಗಿದೆ. ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ಯ ಸೇರಿ 5 ಮಂದಿಗಾಗಿ ಹುಡುಕಾಟ ನಡೆಸಲಾಗುತ್ತದೆ. ಆಚಾರ್ಯರ ಕುಟುಂಬದ ಸದಸ್ಯರ ಪತ್ತೆ ಬಹುತೇಕ ಅನುಮಾನ ಎನ್ನಲಾಗಿದೆ. ಸುಮಾರು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆಗೆ ಸಿದ್ದತೆ ನಡೆದಿದೆ.
ಇದನ್ನೂ ಓದಿ: Kodagu Rains: ಕೊಡಗಿನಲ್ಲಿ ನಿಲ್ಲದ ಪ್ರವಾಹ; ಆ. 11ರವರೆಗೆ ಆರೆಂಜ್ ಅಲರ್ಟ್ ಘೋಷಣೆ
ಇಂದು ಕೊಡಗಿನಲ್ಲಿ ಮಳೆ ಕೊಂಚ ಕಡಿಮೆಯಾಗಿರುವುದರಿಂದ ಬ್ರಹ್ಮಗಿರಿಯ ಬೆಟ್ಟದ ಬಳಿ ತೆರಳಿ ಮಣ್ಣಿನಲ್ಲಿ ಹುದುಗಿರುವವರ ಪತ್ತೆ ನಡೆಸಲಾಗುವುದು. ಬ್ರಹ್ಮಗಿರಿ ಬೆಟ್ಟಕ್ಕೆ ಜೆಸಿಬಿಗಳನ್ನು ತೆಗೆದುಕೊಂಡು ಹೋಗುವುದೇ ದೊಡ್ಡ ಹರಸಾಹಸವಾಗಿದೆ. ಜೆಸಿಬಿ ತೆರಳಿದರೆ ಮಾತ್ರ ಕಾರ್ಯಚರಣೆ ಆರಂಭಿಸಲು ಸಾಧ್ಯ ಎನ್ನಲಾಗಿದೆ. ಆದರೆ, ಜೆಸಿಬಿ ತೆಗೆದುಕೊಂಡು ಹೋದರೆ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತಷ್ಟು ಬೆಟ್ಟ ಕುಸಿಯುವ ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ