ಸರ್ಕಾರಿ ನೌಕರಿ: ಕೊಡಗು ಜಿಲ್ಲಾ ಕಂದಾಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ಅಥವಾ 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

zahir | news18
Updated:February 12, 2019, 3:04 PM IST
ಸರ್ಕಾರಿ ನೌಕರಿ: ಕೊಡಗು ಜಿಲ್ಲಾ ಕಂದಾಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
zahir | news18
Updated: February 12, 2019, 3:04 PM IST
ರಾಜ್ಯ ಸರ್ಕಾರ ಜಿಲ್ಲಾ ಕಂದಾಯ ಇಲಾಖೆ ಇಲಾಖೆಯ ಅಧೀನದ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇದರಲ್ಲಿ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ 16 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ಫೆಬ್ರವರಿ 15 ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಇನ್ನಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ವಿವರ:
ಖಾಲಿ ಇರುವ ಹೊಸ ಹುದ್ದೆಗಳು-14
ಬ್ಯಾಕ್ ಲಾಗ್ ಹುದ್ದೆಗಳು-2

ಒಟ್ಟು ಹುದ್ದೆಗಳು = 16

ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪಿಯುಸಿ ಅಥವಾ 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಅದರೊಂದಿಗೆ ಕಂಪ್ಯೂಟರ್ ಕುರಿತಾದ ಜ್ಞಾನ ಪಡೆದಿರಬೇಕಾಗುತ್ತದೆ.
Loading...

ವಯೋಮಿತಿ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗದ ಅಭ್ಯರ್ಥಿಗಳ ವಯಸ್ಸು 18 ರಿಂದ 40 ವರ್ಷದೊಳಗಿರಬೇಕು.
ಪ್ರವರ್ಗ-2A,2B,3A,3B ವರ್ಗದ ಅಭ್ಯರ್ಥಿಗಳ ವಯಸ್ಸು 18 ರಿಂದ 38 ವರ್ಷದೊಳಗಿರಬೇಕಾಗುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಯೋಮಾನ 18 ರಿಂದ 35 ವರ್ಷದ ಒಳಗಿರಬೇಕು.

ವೇತನದ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400 ರಿಂದ 42,000 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪಿಯುಸಿ ಪರೀಕ್ಷೆ ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ನಡೆಯಲಿದೆ.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ- 250 ರೂ.
ಸಾಮಾನ್ಯ ವರ್ಗ,2A,2B,3A,3B ವರ್ಗದ ಅಭ್ಯರ್ಥಿಗಳಿಗೆ- 500 ರೂ.

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗಾಗಿ ಆನ್​​ಲೈನ್​ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದಾಗಿದೆ. ಈ  ಕುರಿತಾದ ಹೆಚ್ಚಿನ ಮಾಹಿತಿಗಾಗಿ ಕೊಡಗು ಕಂದಾಯ ಇಲಾಖೆಯ ಅಧಿಕೃತ ವೆಬ್​ಸೈಟ್​ http://kodagu-va.kar.nic.in/ ಭೇಟಿ ನೀಡಿ ಪರಿಶೀಲಿಸಬಹುದು.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15, 2019 . ಅರ್ಜಿದಾರರು ಸಂಜೆ 5:30ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
First published:February 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ