Kodimath Swamiji: ಮತ್ತೆ ಸುನಾಮಿ ಬಂದೀತು ಹುಷಾರ್! ಭಯಾನಕ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಕೋಡಿಮಠದ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ, ಸುನಾಮಿ ಸಹ ಬರುವ ಸಾಧ್ಯತೆ ಇದೆ ಎಂದಿದ್ದಾರೆ. ಇನ್ನು ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ಕೇಳಿ ಬಂದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಬಧಿಸಿದಂತೆ ಕೋಡಿಮಠದ ಶ್ರೀಗಳು ಮಾರ್ಮಿಕವಾಗಿ ಉತ್ತರಿಸಿದ್ದಾರೆ.

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

  • Share this:
ಮಂಡ್ಯ: ರಾಜ್ಯ, ದೇಶ, ವಿದೇಶದ ಆರ್ಥಿಕ, ರಾಜಕೀಯ, ಆರೋಗ್ಯ ಕ್ಷೇತ್ರ, ರೋಗ ರುಜಿನ, ಮಳೆ, ಬೆಳೆ ಇತ್ಯಾದಿಗಳ ಬಗ್ಗೆ ಭವಿಷ್ಯ (Predictions) ನುಡಿಯುವ ಕೋಡಿಮಠದ (Kodimath) ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು (Shivannda Shivayogi Rajendra Swamiji) ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಮಂಡ್ಯದ (Mandya) ಬೂಕನಕೆರೆಗೆ ಆಗಮಿಸಿದ್ದ ಸ್ವಾಮೀಜಿ, ದೇಶದ ಹವಾಮಾನ (Weather) ಹಾಗೂ ರಾಜ್ಯ ರಾಜಕೀಯದ (State Politics) ಕುರಿತಂತೆ ಮಾತನಾಡಿದ್ದಾರೆ. ಮತ್ತೊಂದೆಡೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಹೊತ್ತಿ, ತನಿಖೆ ಎದುರಿಸುತ್ತಿರುವ ಮುರುಘಾ ಮಠದ (Murugha Math) ಶಿವಮೂರ್ತಿ ಸ್ವಾಮಿ (Shivamurthy Swami) ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ.

“ಮತ್ತೆ ಜಲಪ್ರಳಯ, ಸುನಾಮಿ ಬರುವ ಆತಂಕ”

ಮಂಡ್ಯದ ಬೂಕನಕೆರೆಗೆ ಆಗಮಿಸಿದ್ದ ಕೋಡಿಮಠ ಶ್ರೀಗಳು, ಮಳೆ ಅನಾಹುತ ಇನ್ನೂ ಮುಂದುವರಿಯಲಿದೆ ಎಂದಿದ್ದಾರೆ. ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ, ಸುನಾಮಿ ಸಹ ಬರುವ ಸಾಧ್ಯತೆಯೂ ಇದೆ ಅಂತ ಎಚ್ಚರಿಕೆ ನೀಡಿದ್ದಾರೆ.



“ಜನರು ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ!”

ಭೂಮಿಯಿಂದ ಹೊಸ ಹೊಸ ವಿಷಜಂತುಗಳು ಉದ್ಭವಿಸಲಿದೆ ಅಂತ ಕೋಡಿಮಠ ಸ್ವಾಮೀಜಿ ಹೇಳಿದ್ದಾರೆ. ಜನರು ಮನೆಯಿಂದ ಹೊರಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ ಎಂದಿದ್ದಾರೆ. ಕೊರೋನಾ ಬಗ್ಗೆ ಈ ಹಿಂದೆಯೇ ನಾನು ಹೇಳಿದ್ದೆ, ಅಲ್ಲದೇ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ. ಇದೀಗ ನಾನು ಹೇಳಿದ ಎಲ್ಲಾ ಮಾತುಗಳು, ಭವಿಷ್ಯಗಳು ನಿಜವಾಗಿದೆ ಅಂತ ಹೇಳಿದ್ದಾರೆ.

ಇದನ್ನೂ ಓದಿ: Murugha Mutt Case: ಜೈಲಿನಲ್ಲಿ ಮುರುಘಾ ಸ್ವಾಮೀಜಿ, ಅರೆಸ್ಟ್​ ಮಾಡಲು ಪೊಲೀಸರಿಗೆ ಅಡ್ಡಿಯಾಗಿದ್ದೇನು?

“ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ”

ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ ಅಂತ ಎಚ್ಚರಿಸಿರುವ ಶ್ರೀಗಳು, ಇದಕ್ಕೆಲ್ಲಾ ಪರಿಹಾರ ದೇವರನ್ನು  ಪೂಜಿಸುವುದು ಒಂದೇ ಪರಿಹಾರ ಎಂದಿದ್ದಾರೆ. ಇತ್ತೀಚಿಗೆ ಭಗವಂತನ ಪೂಜೆ ಆಡಂಬರವಾಗಿದೆ ಅಂತ ಬೇಸರಿಸಿದ್ದಾರೆ. ಯೋಗ್ಯ ಸಾಧುಗಳಿದ್ದಾರೆ, ಸ್ವಾಮೀಜಿಗಳ ಗದ್ದುಗೆಗಳಿವೆ. ಎಲ್ಲರೂ ಸೇರಿ ಪ್ರಾರ್ಥಿಸಿದ್ರೆ ಜಗತ್ತು ಉಳಿಯುತ್ತದೆ ಅಂತ ಶ್ರೀಗಳು ಸಲಹೆ ನೀಡಿದ್ದಾರೆ.

“ನೀಚಂಗೆ ದೊರೆತನ, ಹೇಡಿಂಗೆ ಹಿರಿತನ”

ಇನ್ನು ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ಕೇಳಿ ಬಂದಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಬಧಿಸಿದಂತೆ ಕೋಡಿಮಠದ ಶ್ರೀಗಳು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ನೀಚಂಗೆ ದೊರೆತನವು, ಹೇಡಿಂಗೆ ಹಿರಿತನವೂ, ಮೂಡಂಗೆ ಗುರುತನವೂ ಸಿಕ್ಕಿರುವುದು ಈ ಪರಿಸ್ಥಿತಿ ಉದ್ಭವಿಸಿದೆ. ಇಂತಹ ಆರೋಪಗಳು ಮುಂದೆ ಮತ್ತಷ್ಟು ಹೆಚ್ಚಾಗಲಿದೆ ಅಂತ ಶ್ರೀಗಳು ಎಚ್ಚರಿಸಿದ್ದಾರೆ. ಇನ್ನು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಲು ಕೋಡಿಮಠ ಶ್ರೀಗಳು ನಿರಾಕರಿಸಿದ್ದಾರೆ.

“ಶುಭಕೃತ್ ಸಂವತ್ಸರದಲ್ಲಿ ಎಲ್ಲಾ ಅಶುಭ” ಎಂದಿದ್ದ ಸ್ವಾಮೀಜಿ

"ಗಾಳಿ ಮಳೆ ಹೆಚ್ಚಾಗಲಿದೆ, ವಿಪರೀತ ಮಿಂಚು ಬರಲಿದೆ, ಸಾವುನೋವು ಹೆಚ್ಚಾಗಲಿದೆ, ಜಲಾಶಯಗಳು ತುಂಬಿ ಹರಿಯುತ್ತವೆ. ಮಲೆನಾಡು ಬಯಲು ಸೀಮೆಯಾದೀತು. ಮಲೆನಾಡಿನವರಿಗೆ ಮಳೆ ಕಮ್ಮಿಯಾದರೆ ಸಾಕು ಎನ್ನುವ ಮನೋಭಾವನೆಯಿದೆ. ಪ್ರಕೃತಿ ಅಲ್ಲೋಲಕಲ್ಲೋಲವಾಗಲಿದೆ" ಎಂದು ಈ ಹಿಂದೆ ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದರು. ಅಲ್ಲದೇ “ಶುಭಕೃತ್ ಸಂವತ್ಸರದಲ್ಲಿ ಎಲ್ಲಾ ಅಶುಭ” ಅಂತ ಹೇಳಿದ್ದರು.

ಇದನ್ನೂ ಓದಿ: Basavashree Award: ಮುರುಘಾ ಮಠದಿಂದ ಕೊಡಲ್ಪಡುತ್ತಿದ್ದ ಬಸವಶ್ರೀ ಪ್ರಶಸ್ತಿಯ ಮಹತ್ವವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

“ಅಶ್ವೀಜದಲ್ಲಿ ದೇಶಕ್ಕೆ ಕಷ್ಟ ನಷ್ಟ”

ಈ ಹಿಂದೆ ಭವಿಷ್ಯ ನುಡಿದಿದ್ದ ಸ್ವಾಮೀಜಿ, "ಅಶ್ವೀಜ ಕಾರ್ತಿಕದಲ್ಲಿ ದೇಶಕ್ಕೆ ಕಷ್ಟ, ಭಂಗ, ನೋವಿದೆ. ರೋಗರುಜಿನ, ಕಳ್ಳಕಾಕರರ ಕಾಟ ಹೆಚ್ಚಾಗಲಿದೆ. ಅಪಮೃತ್ಯು, ಕೊಲೆಗಳು, ಮತೀಯ ಗಲಭೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಕೋಪಕ್ಕೆ ತುತ್ತಾಗಲಿದೆ. ರಾಜಕೀಯದಲ್ಲಿ ತಲ್ಲಣ, ಗುಂಪುಗಳು ಆಗಲಿವೆ. ಮಳೆ ಬಂದರೆ ಬೆಳೆ ಸಿಗುವುದಿಲ್ಲ, ಈ ಸಂವತ್ಸರದ ಫಲ ಅಶುಭ" ಅಂತ ಹೇಳಿದ್ದರು.
Published by:Annappa Achari
First published: