HOME » NEWS » State » KOPPAL CONGRESS MLA AMAREGOWDA BAYYAPUR LASHES OUT AT BJP OVER PRIVATIZATION BKTV SCT

ಬಿಜೆಪಿ ದೇಶವನ್ನೇ ಮಾರಾಟ ಮಾಡಲು ಹೊರಟಿದೆ; ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಆರೋಪ

ಸಚಿವ ಸ್ಥಾನ ನೀಡಬೇಕಾದರೆ ಪಕ್ಷಕ್ಕೆ ದುಡಿದ ಬಗೆ, ಜನಪರ ಕೆಲಸ ಮಾಡಿದ ರೀತಿ, ಜಾತಿ ನೋಡಿ ಸಚಿವ ಸ್ಥಾನ ನೀಡುವ ಪರಿಪಾಠ ಕಾಂಗ್ರೆಸ್‌‌ನಲ್ಲಿದ್ದರೆ, ಬಿಜೆಪಿಯಲ್ಲಿ ಯಾವ ಶಾಸಕ ಎಷ್ಟು ಕೋಟಿ ಹಣ ಪಕ್ಷಕ್ಕೆ ಕೊಡುತ್ತಾರೆ ಎಂಬುದರ ಮೇಲೆ ಮಂತ್ರಿ ಸ್ಥಾನ ನಿರ್ಧಾರ ಆಗುತ್ತದೆ ಎಂದು ಅಮರೇಗೌಡ ಬಯ್ಯಾಪುರ ಆರೋಪಿಸಿದ್ದಾರೆ.

news18-kannada
Updated:January 4, 2021, 2:36 PM IST
ಬಿಜೆಪಿ ದೇಶವನ್ನೇ ಮಾರಾಟ ಮಾಡಲು ಹೊರಟಿದೆ; ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಆರೋಪ
ಅಮರೇಗೌಡ ಬಯ್ಯಾಪುರ
  • Share this:
ಕೊಪ್ಪಳ (ಜ. 4): ಇಷ್ಟು ವರ್ಷ ಅಧಿಕಾರ ನಡೆಸಿದ ಬಿಜೆಪಿ ಸಾಧಿಸಿದ್ದೇನೆಂದರೆ BSNL, ರೈಲ್ವೆ ವ್ಯವಸ್ಥೆಯನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದು. ಹೀಗೇ ಬಿಟ್ಟರೆ ವಿಮಾನ ವ್ಯವಸ್ಥೆಯನ್ನು ಮಾರಾಟ ಮಾಡುತ್ತಾರೆ, ಮುಂದೆ ದೇಶವನ್ನೇ ಮಾರಾಟ ಮಾಡುತ್ತಾರೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದ ಶ್ರೀ ಶಿವಶಾಂತ ಮಂಗಲ ಭವನದಲ್ಲಿ ಇಂದು ನಡೆದ Congress ಬೆಂಬಲಿತ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮದು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯ ಶಾಸಕರ ಆಸ್ತಿ ಕನಿಷ್ಠ ಸಾವಿರಾರು ಕೋಟಿ ಇರುತ್ತದೆ. ಸಚಿವ ಸ್ಥಾನ ನೀಡಬೇಕಾದರೆ ಪಕ್ಷಕ್ಕೆ ದುಡಿದ ಬಗೆ, ಜನಪರ ಕೆಲಸ ಮಾಡಿದ ರೀತಿ, ಜಾತಿ ನೋಡಿ ಸಚಿವ ಸ್ಥಾನ ನೀಡುವ ಪರಿಪಾಠ ಕಾಂಗ್ರೆಸ್‌‌ನಲ್ಲಿದ್ದರೆ, ಬಿಜೆಪಿಯಲ್ಲಿ ಯಾವ ಶಾಸಕ ಎಷ್ಟು ಕೋಟಿ ಹಣ ಪಕ್ಷಕ್ಕೆ ಕೊಡುತ್ತಾರೆ ಎಂಬುದರ ಮೇಲೆ ಮಂತ್ರಿ ಸ್ಥಾನ ನಿರ್ಧಾರ ಆಗುತ್ತದೆ ಎಂದು ಅಮರೇಗೌಡ ಬಯ್ಯಾಪುರ ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಮುಖ್ಯಮಂತ್ರಿಗಳು ಶೇ. 60ರಷ್ಟು ಸ್ಥಾನಗಳು ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದರೆ, ಬಿಜೆಪಿ ರಾಜ್ಯಾಧ್ಯಕ್ಷರು ಶೇ. 55ರಷ್ಟು ಎಂದು ತಿಳಿಸಿದರು. ಮಂತ್ರಿಗಳು ಶೇಕಡಾ 50 ರಷ್ಟು ಬಿಜೆಪಿ ಬೆಂಬಲಿತರು ಗೆದ್ದಿದ್ದಾರೆ ಎಂದು ಹೇಳಿರುವುದನ್ನ ನೋಡಿದರೆ  ಬಿಜೆಪಿ ನಾಯಕರೆಲ್ಲ ಹೇಳುವುದು ಸುಳ್ಳು ಎಂಬುದು ಸ್ಪಷ್ಟವಾಗುತ್ತದೆ. ರಾಜ್ಯಾದ್ಯಂತ ಕಾಂಗ್ರೆಸ್ ಬೆಂಬಲಿತರೇ ಹೆಚ್ಚು ಗೆದ್ದಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Honey Trap: ಮ್ಯಾಟ್ರಿಮೊನಿ ಮೂಲಕ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ದಂಧೆ; ತಾನೇ ನೀಡಿದ ದೂರಿನಿಂದ ಸಿಕ್ಕಿಬಿದ್ದಳು ಟೀಚರ್!

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ಪರಿಕಲ್ಪನೆ ಹುಟ್ಟಿಕೊಂಡದ್ದೇ ಕಾಂಗ್ರೆಸ್ ಕಾಲಾವಧಿಯಲ್ಲಿ. ಬಿಜೆಪಿ ರಾಜ್ಯವನ್ನು, ದೇಶವನ್ನು ಅಧಃಪತನದ ಹಾದಿಯತ್ತ ಒಯ್ಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಜಿಲ್ಲೆಯಲ್ಲಿ, ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಡಿದ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ. ಕೋವಿಡ್-19 ಹೆಸರಿನಲ್ಲಿ ಬಿಜೆಪಿ ಸರಕಾರ ಲೂಟಿ ಹೊಡೆಯುವ ಕೆಲಸಕ್ಕೆ ಇಳಿದಿದೆಯೇ ಹೊರತು ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಯಡಿಯೂರಪ್ಪ ಸಿಎಂ ಆದ ನಂತರ ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದರೆ ಹೊರತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡಿಲ್ಲ ಎಂದು ಹರಿ ಹಾಯ್ದರು.
ದೊಡ್ಡ ದೊಡ್ಡ ಶ್ರೀಮಂತರಿಗೆ ಮಕ್ಕಳು, ಮೊಮ್ಮಕ್ಕಳು ಹುಟ್ಟಿದರೆ ಅಲ್ಲಿ ಭೇಟಿ ಕೊಡುವ ಪ್ರಧಾನಿ ಮೋದಿಯವರು, ರೈತರು ಸಂಕಷ್ಟ ಅನುಭವಿಸುತ್ತಲೇ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದು, ಅಲ್ಲಿಗೆ ಭೇಟಿ ಕೊಡಲು, ಅವರ ಸಮಸ್ಯೆ ಆಲಿಸಲು ಪ್ರಧಾನಿ ಬಳಿ ಸಮಯ ಇಲ್ಲ. ಬದಲಾಗಿ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಬಿಜೆಪಿ ಸರಕಾರ ಎಂದು ಗುಡುಗಿದರು.
Published by: Sushma Chakre
First published: January 4, 2021, 2:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories