ಇಂಜಿನಿಯರ್ ಯುವಕನ ಅಧಿಕಾರಿಯಾಗಬೇಕು ಎಂಬ ಕನಸಿಗೆ ಆಸರೆಯಾಗಿದೆ ನರೇಗಾ ಕೂಲಿ ಹಣ

ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಆಸೆಯನ್ನು ಹೊಂದಿರುವ ವಿದ್ಯಾರ್ಥಿಗೆ ನರೇಗಾದಿಂದ ಆರ್ಥಿಕ ಸಹಾಯಕ್ಕೆ ಆಗುತ್ತಿರುವುದರಿಂದ ಸದ್ಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಿದ್ದಾನೆ.

ರಾಮಾಂಜನೇಯ

ರಾಮಾಂಜನೇಯ

  • Share this:
ಕೊಪ್ಪಳ (ಜು. 19):  ಕೋವಿಡ್ ಕಾರಣಕ್ಕೆ ಹಲವರಿಗೆ ಉದ್ಯೋಗ ಸಿಗುತ್ತಿಲ್ಲ, ಹಾಗೇಂದ ಮಾತ್ರಕ್ಕೆ ಉದ್ಯೋಗವಿಲ್ಲವೆಂದು ಕೈ ಕಟ್ಟಿಕೊಂಡು ಕುಳಿತುಕೊಳ್ಳುವಂತೆಯೂ ಇಲ್ಲ, ಇಂಥ ಸಂದರ್ಭದಲ್ಲಿ ಇಂಜಿನಿಯರ್ ಪದವಿ ವಿದ್ಯಾರ್ಥಿಯೊಬ್ಬ ಹೆಚ್ಚಿನ ವಿದ್ಯಾಭ್ಯಾಸಕ್ಕೆ ನರೇಗ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾನೆ. ಕೂಲಿ ಹಣ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಹಾಗು ಕುಟುಂಬಸ್ಥರಿಗೂ ಆಸರೆಯಾಗಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಸಾಕಷ್ಟು ಜನರಿಗೆ ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದು, ಕೆಲಸದ ನಿರೀಕ್ಷೆಯಲ್ಲಿ ಇದ್ದ ಪದವೀಧರರಿಗೂ ಮಹಾಮರಿ ಕೊರೊನಾ ಸಂಕಷ್ಟವನ್ನು ಉಂಟು ಮಾಡಿತ್ತು. ಆದರೆ ಇಂತಹ ಪರಿಸ್ಥಿತಿಯಲ್ಲಿ ಎಂಜಿನಿಯರಿಂಗ್ ಮುಗಿಸಿ ಕೆಲಸದ ನಿರೀಕ್ಷೆಯಲ್ಲಿದ್ದ ಯುವಕನಿಗೆ ಸರಕಾರದ ನರೇಗಾ ಯೋಜನೆಯು ಆಸರೆ ಆಗಿದೆ.

ಕೊಪ್ಪಳ ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದ ಬಡ ಕುಟುಂಬದ ನಿವಾಸಿಯಾಗಿರುವ ರಾಮಾಂಜನೇಯ ಎಂಬ ವಿದ್ಯಾರ್ಥಿಯು ಬೆಂಗಳೂರಿನಲ್ಲಿ ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಯನ್ನು ಅಭ್ಯಾಸ ಮಾಡಿದ್ದಾನೆ. ಬಿಇ ಮುಗಿಸಿಕೊಂಡು ಕೆಲಸಕ್ಕೆ ಹುಡುಕುವ ವೇಳೆಯಲ್ಲಿಯೇ ಕೋವಿಡ್ ಕಾಣಿಸಿಕೊಂಡು ಹಿನ್ನಲೆಯಲ್ಲಿ ಉದ್ಯೋಗ ಇಲ್ಲದೆ ಮಾನಸಿಕವಾಗಿ ಬೆಂದು ಬರಿಗೈಯಲ್ಲಿ ಗ್ರಾಮಕ್ಕೆ ವಾಪಸ್ಸ ಆಗಮಿಸಿದ್ದಾನೆ. ಉದ್ಯೋಗ ಇಲ್ಲದೆ ಗ್ರಾಮದಲ್ಲಿ ತಿಂಗಳುಗಳ ಕಾಲ ಕಳೆದ ವಿದ್ಯಾರ್ಥಿಗೆ ಸದ್ಯ ಉದ್ಯೋಗ ಖಾತರಿ ಯೋಜನೆಯು ಆಸರೆಯಾಗಿದೆ.

ಗ್ರಾಮದಲ್ಲಿ ವಿದ್ಯಾರ್ಥಿಯ ಕುಟುಂಬಸ್ಥರು, ಗ್ರಾಮಸ್ಥರು ನರೇಗಾ ಯೋಜನೆಯಲ್ಲಿ ಕೆಲಸ ಮಾಡುವುದನ್ನು ಕಂಡಿರುವ ರಾಮಾಂಜನೇಯ ಗ್ರಾಮ ಪಂಚಾಯಿತಿಗೆ ಭೇಟಿಯನ್ನು ನೀಡಿ, ತಾನು ಕೂಡ ನರೇಗಾ ಯೋಜನೆಯಲ್ಲಿ ಕೆಲಸ ಮಾಡಲು ಪಂಚಾಯಿತಿ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಅಧಿಕಾರಿಗಳು ನಿಯಮಗಳ ಪ್ರಕಾರ ಅರ್ಜಿಯನ್ನು ಪಡೆದುಕೊಂಡು, ವಿದ್ಯಾರ್ಥಿಗೆ ಕೆಲಸವನ್ನು ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುತ್ತಿರುವ ರಾಮಾಂಜನೇಯ ಬರುವ ಕೂಲಿ ಹಣದಲ್ಲಿ ಕುಟುಂಬಕ್ಕೆ ಆಸರೆಯಾಗುವುದರ ಜೊತೆಗೆ ಆತನ ಹೆಚ್ಚಿನ ವಿದ್ಯಾಭ್ಯಾಸಕ್ಕೂ ಕೂಡ ಅನುಕೂಲವಾಗಿದೆ.

ಹೊರಗಡೆ ಕೆಲಸ ಇಲ್ಲದೆ ಮನೆಯಲ್ಲಿ ಇದ್ದ ರಾಮಾಂಜನೇಯ ನರೇಗಾದಡಿಯಲ್ಲಿ ಕೆಲಸ ಪಡೆದುಕೊಂಡಿದ್ದಾನೆ. ಕೆಲಸಕ್ಕೆ ತಕ್ಕ ಕೂಲಿಯನ್ನು ನೆರವಾಗಿ ಖಾತೆಗೆ ಜಮಾ ಆಗುತ್ತಿರುವ ಹಿನ್ನಲೆಯಲ್ಲಿ ರಾಮಾಂಜನೇಯನಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಆಸೆಯನ್ನು ಹೊಂದಿರುವ ವಿದ್ಯಾರ್ಥಿಗೆ ನರೇಗಾದಿಂದ ಆರ್ಥಿಕ ಸಹಾಯಕ್ಕೆ ಆಗುತ್ತಿರುವುದರಿಂದ ಸದ್ಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಿದ್ದಾನೆ.

ಇದನ್ನು ಓದಿ: ಭಾರತದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು; ಶಾಲೆ ತೆರೆಯಬಹುದು ಎಂದ ಏಮ್ಸ್​ ಮುಖ್ಯಸ್ಥ

ಬರುವ ಕೂಲಿ ಹಣದಲ್ಲಿ ಕುಟುಂಬಕ್ಕೆ ಒಂದಿಷ್ಟು ನೀಡಿ, ತನ್ನ ಅಭ್ಯಾಸಕ್ಕೂ ಕೂಡ ಬಳಕೆ ಮಾಡುತ್ತಿದ್ದಾನೆ. ಸದ್ಯ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿ ಇರುವ ರಾಮಾಂಜನೇಯ ಅದಕ್ಕೆ ಸಂಬಂಧಪಟ್ಟಂತೆ ಆನ್‍ಲೈನ್ ತರಗತಿಗಳನ್ನು ಪಡೆದುಕೊಳ್ಳುತ್ತಿದ್ದಾನೆ. ಕುಟುಂಬಸ್ಥರಿಗೆ ಹೊರೆಯಾಗಿದ್ದ ರಾಮಾಂಜನೇಯ ಈಗ ನರೇಗಾ ಯೋಜನೆ ಮೂಲಕ ಓದನ್ನು ಮುಂದುವರೆಸಿದ್ದು, ಹಲವರಿಗೆ ಮಾದರಿ ಕೂಡ ಆಗಿದ್ದಾನೆ.

ಈ ಕುರಿತು ಮಾತನಾಡಿದ ಆತ ಎಂಜಿನಿಯರಿಂಗ್ ಮುಗಿಸಿಕೊಂಡು ಕಳೆದ ವರ್ಷ ಕೋವಿಡ್ ಸಮಯಕ್ಕೆ ಗ್ರಾಮಕ್ಕೆ ಆಗಮಿಸಿದೆ. ಎಲ್ಲೂ ಕೆಲಸ ಸಿಗದೇ ಇರುವುದರಿಂದ ನಮ್ಮೂರಲ್ಲಿಯೇ ಉದ್ಯೋಗ ಖಾತರಿ ಯೋಜನಯಲ್ಲಿ ಕೆಲಸ ಮಾಡುತ್ತಿದ್ದೆನೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ನರೇಗಾದಡಿಯಲ್ಲಿ ಕೆಲಸ ಮಾಡುತ್ತೇನೆ. ಉಳಿದ ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ನಡೆಸುತ್ತಿದ್ದೆನೆ. ನರೇಗಾ ಯೋಜನೆಯಿಂದ ಸಾಕಷ್ಟು ಅನುಕೂಲವಾಗಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
Published by:Seema R
First published: