ಇಂದು ದೆಹಲಿಗೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ: ಸೋನಿಯಾ ಗಾಂಧಿ ಭೇಟಿ, ಮಹತ್ವದ ಚರ್ಚೆ

ಕರ್ನಾಟಕ ಕಾಂಗ್ರೆಸ್​ ಟ್ರಬಲ್​ ಶೂಟರ್​ ಡಿಕೆ ಶಿವಕುಮಾರ್​ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿದ್ದಾರೆ. ಹಲವು ದಿನಗಳಿಂದ ಡಿಕೆ ಶಿವಕುಮಾರ್​ ಅವರನ್ನು ರಾಜ್ಯ ಕಾಂಗ್ರೆಸ್​ನ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿ ಬಂದಿತ್ತು. ಅದರಂತೆ ಈಗ ಎಐಸಿಸಿ ಡಿಕೆ ಶಿವಕುಮಾರ್​ ಅವರಿಗೆ ರಾಜ್ಯ ಕಾಂಗ್ರೆಸ್​ನ ನೇತೃತ್ವವನ್ನು ನೀಡಿದೆ. ಜತೆಗೆ ಈಶ್ವರ್​ ಖಂಡ್ರೆ, ಸತೀಶ್​ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್​ರನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಿದೆ.

ಸೋನಿಯಾ ಗಾಂಧಿ, ಡಿಕೆಶಿ

ಸೋನಿಯಾ ಗಾಂಧಿ, ಡಿಕೆಶಿ

 • Share this:
  ಬೆಂಗಳೂರು(ಮಾ.18): ತನ್ನನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮಾಡಿದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲು ಕಾಂಗ್ರೆಸ್​ ಟ್ರಬಲ್​ ಶೂಟರ್​​ ಡಿ.ಕೆ ಶಿವಕುಮಾರ್​ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕಾಂಗ್ರೆಸ್​​ ಹೈಕಮಾಂಡ್​ ಸೋನಿಯಾ ಗಾಂಧಿ ಅವರ 10 ಜನಪಥ್‌ ರಸ್ತೆ ನಿವಾಸಕ್ಕೆ ಭೇಟಿ ನೀಡಲಿರುವ ಡಿಕೆಶಿ ವರಿಷ್ಠರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ನಂತರ ಸೋನಿಯಾ ಗಾಂಧಿ ಮತ್ತು ರಾಹುಲ್​​ ಗಾಂಧಿಯವರನ್ನು ತಾನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದ್ಧಾರೆ.

  ಈ ಹಿಂದಿನ ಕರ್ನಾಟಕ ಉಪಚುನಾವಣೆ ಫಲಿತಾಂಶದ ಬಳಿಕ ಸೋಲಿನ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಹೈಕಮಾಂಡ್ ಮಧುಸೂದನ್ ಮಿಸ್ತ್ರಿ ನೇತೃತ್ವದ ನಿಯೋಗದ ಮೂಲಕ ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು? ಎಂದು ವಿವಿಧ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿತ್ತು. ಈ ವೇಳೆ ಬಹುತೇಕ ಜನ ಡಿ. ಕೆ. ಶಿವಕುಮಾರ್‌ರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಆಧಾರದ ಮೇಲೆ ಹೈಕಮಾಂಡ್​​​ ಡಿ.ಕೆ ಶಿವಕುಮಾರ್​​ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಿ ಆದೇಶಿಸಿದೆ.​​

  ಕರ್ನಾಟಕ ಕಾಂಗ್ರೆಸ್​ ಟ್ರಬಲ್​ ಶೂಟರ್​ ಡಿಕೆ ಶಿವಕುಮಾರ್​ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿದ್ದಾರೆ. ಹಲವು ದಿನಗಳಿಂದ ಡಿಕೆ ಶಿವಕುಮಾರ್​ ಅವರನ್ನು ರಾಜ್ಯ ಕಾಂಗ್ರೆಸ್​ನ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿ ಬಂದಿತ್ತು. ಅದರಂತೆ ಈಗ ಎಐಸಿಸಿ ಡಿಕೆ ಶಿವಕುಮಾರ್​ ಅವರಿಗೆ ರಾಜ್ಯ ಕಾಂಗ್ರೆಸ್​ನ ನೇತೃತ್ವವನ್ನು ನೀಡಿದೆ. ಜತೆಗೆ ಈಶ್ವರ್​ ಖಂಡ್ರೆ, ಸತೀಶ್​ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್​ರನ್ನು ಕಾರ್ಯಾಧ್ಯಕ್ಷರಾಗಿ ನೇಮಿಸಿದೆ.

  ಇದನ್ನೂ ಓದಿ: 60 ಮಂದಿ ಕೊರೋನಾ ಶಂಕಿತರಿಗೆ ಮನೆ ನಿಗಾದಿಂದ ಮುಕ್ತಿ; ವಿಜಯಪುರ ಜಿಲ್ಲಾಧಿಕಾರಿ ವೈ ಎಸ್​​ ಪಾಟೀಲ್​​

  ನಾನು ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಬದ್ಧ. ನನ್ನ ಮೇಲೆ ದೊಡ್ಡ ನಂಬಿಕೆ ಇಟ್ಟು ಪಕ್ಷದ ಹಿರಿಯರು ಈ ಜವಾಬ್ದಾರಿ ನೀಡಿದ್ದಾರೆ. ದೆಹಲಿ ನಾಯಕರಿಗೆ ನನ್ನ ಮೇಲೆ ಅಪಾರ ವಿಶ್ವಾಸವಿದೆ. ಹಾಗಾಗಿ ಪಕ್ಷ ಸಂಘಟನೆಗಾಗಿ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.ಇನ್ನು, ಶಾಸಕನಾಗಿ, ಮಂತ್ರಿಯಾಗಿ, ಪಕ್ಷದ ಕಾರ್ಯಾಧ್ಯಕ್ಷನಾಗಿ, ಕೊನೆಗೂ ಇವತ್ತು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ಎಷ್ಟೇ ದೊಡ್ಡ ಹುದ್ದೆಗೆ ಹೋದರು ನಾನೆಂದು ಕಾರ್ಯಕರ್ತನೇ ಆಗಿರುತ್ತೇನೆ. ಎಲ್ಲರ ದನಿಯಾಗಿ ಈ ರಾಜ್ಯದ ಜನರ ಸೇವೆ ಮಾಡಬೇಕು ಎಂಬುದು ನನ್ನ ಆಸೆ ಎಂದು ಡಿಕೆಶಿ ಈ ಹಿಂದೆಯೇ ಹೇಳಿಕೊಂಡಿದ್ದಾರೆ.

  First published: