ಸಿದ್ಧರಾಮಯ್ಯ, ಗುಂಡೂರಾವ್ ನೀಡಿರುವ ರಾಜೀನಾಮೆ ಅಂಗಿಕಾರವಾಗಲಿಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷ-ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇಲ್ಲ; ಎಂ.ಬಿ. ಪಾಟೀಲ್

ಎಲ್ಲಿಯವರೆಗೆ ಹೈಕಮಾಂಡ್ ಅವರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲವೋ ಅಲ್ಲಿಯ ವರೆಗೆ ಆ ಸ್ಥಾನಗಳು ಖಾಲಿ ಇಲ್ಲ. ಹೀಗಾಗಿ ನಾನು ಆ ಸ್ಥಾನದ ಆಕಾಂಕ್ಷಿ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪಕ್ಷ ಬದಲಾವಣೆ ಬಯಸಿದಾಗ ಈ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

news18-kannada
Updated:December 14, 2019, 1:50 PM IST
ಸಿದ್ಧರಾಮಯ್ಯ, ಗುಂಡೂರಾವ್ ನೀಡಿರುವ ರಾಜೀನಾಮೆ ಅಂಗಿಕಾರವಾಗಲಿಕ್ಕಿಲ್ಲ, ಕೆಪಿಸಿಸಿ ಅಧ್ಯಕ್ಷ-ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇಲ್ಲ; ಎಂ.ಬಿ. ಪಾಟೀಲ್
ಎಂ.ಬಿ. ಪಾಟೀಲ್
  • Share this:
ವಿಜಯಪುರ (ಡಿಸೆಂಬರ್ 14); ಕರ್ನಾಟಕ ಪ್ರದೇಶ ಕಾಂಗ್ರೆಸ್​ನಲ್ಲಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ. ಪಕ್ಷದ ಪ್ರಮುಖ ಹುದ್ದೆಗಳಿಗೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆಯನ್ನು ಹೈಕಮಾಂಡ್​ ಈವರೆಗೆ ಅಂಗೀಕರಿಸಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ.

ಉಪ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ಈ ಸ್ಥಾನದ ರೇಸ್ನಲ್ಲಿ ಲಇದೀಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಈ ಕುರಿತು ವಿಜಯಪುರದಲ್ಲಿ ಇಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಎಂ.ಬಿ. ಪಾಟೀಲ್, “ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸುವುದು ಸರಿಯಲ್ಲ. ನಾನು ಈ ಸ್ಥಾನದ ಆಕಾಂಕ್ಷಿ ಎಂದು ಚರ್ಚಿಸುವುದು ಸರಿಯಲ್ಲ. ಉಪ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ರಾಜೀನಾಮೆಗೆ ಈವರೆಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿಲ್ಲ.

ಎಲ್ಲಿಯವರೆಗೆ ಹೈಕಮಾಂಡ್ ಅವರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲವೋ ಅಲ್ಲಿಯ ವರೆಗೆ ಆ ಸ್ಥಾನಗಳು ಖಾಲಿ ಇಲ್ಲ. ಹೀಗಾಗಿ ನಾನು ಆ ಸ್ಥಾನದ ಆಕಾಂಕ್ಷಿ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪಕ್ಷ ಬದಲಾವಣೆ ಬಯಸಿದಾಗ ಈ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನೂ ಬಿಜೆಪಿ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಸ್ಥಾನದ ಕುರಿತು ವ್ಯಂಗ್ಯವಾಡಿದ ಎಂ.ಬಿ. ಪಾಟೀಲ್, “ಉಪ ಮುಖ್ಯಮಂತ್ರಿ ಹುದ್ದೆಯೇ ಸಂವಿಧಾನಿಕವೋ? ಅಸಂವಿಧಾನಿಕವೋ? ಎಂಬ ವಿಚಾರ ಚರ್ಚೆಯಲ್ಲಿರುವಾಗ ಬಿಜೆಪಿ ದಿನೇ ದಿನೇ ಡಿಸಿಎಂ ಸ್ಥಾನವನ್ನು ಸೃಷ್ಟಿಸುತ್ತಲೇ ಇದೆ. ಹೀಗೆ ಡಿಸಿಎಂ ಗಳ ಸಂಖ್ಯೆಯನ್ನು ಹೆಚ್ಚಿಸುವ ಬದಲು ಎಲ್ಲರನ್ನೂ ಡಿಸಿಎಂ ಮಾಡಿ ಬಿಡಲಿ” ಎಂದು ಕುಹಕವಾಡಿದ್ದಾರೆ.

ಇದನ್ನೂ ಓದಿ : ವಿಜಯವಾಡ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತನಿಖೆಯನ್ನು 12 ವರ್ಷಗಳ ನಂತರ ಮತ್ತೆ ಆರಂಭಿಸಿದ ಸಿಬಿಐ; ಇಂದು ನಡೆಯಲಿದೆ ಮರು ಶವಪರೀಕ್ಷೆ
First published:December 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ