• Home
  • »
  • News
  • »
  • state
  • »
  • ತಮ್ಮ ವಿರುದ್ಧ ಪಿತೂರಿ ಮಾಡಿದ ದಾಖಲೆಗಳಿದ್ರೆ ತೋರಿಸಲಿ- ರಾಜಕೀಯದಿಂದಲೇ ನಿವೃತ್ತಿ ಪಡಿಯುತ್ತೇನೆ: ಹೆಚ್​ಡಿಕೆಗೆ ಡಿಕೆಶಿ ಸವಾಲು

ತಮ್ಮ ವಿರುದ್ಧ ಪಿತೂರಿ ಮಾಡಿದ ದಾಖಲೆಗಳಿದ್ರೆ ತೋರಿಸಲಿ- ರಾಜಕೀಯದಿಂದಲೇ ನಿವೃತ್ತಿ ಪಡಿಯುತ್ತೇನೆ: ಹೆಚ್​ಡಿಕೆಗೆ ಡಿಕೆಶಿ ಸವಾಲು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ತಮ್ಮ ವಿರುದ್ಧ ಪಿತೂರಿ ಮಾಡಿದ್ದರ ಬಗ್ಗೆ ದಾಖಲೆ ಇದ್ರೆ ಕುಮಾರಸ್ವಾಮಿ ಬಹಿರಂಗಪಡಿಸಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಸವಾಲ್​​​ ಹಾಕಿದ್ದಾರೆ

  • Share this:

ಬೆಂಗಳೂರು(ಡಿಸೆಂಬರ್​. 09): ಮಧ್ಯರಾತ್ರಿ ಹೋಗಿ ನಾನು ಸಿಎಂ ಭೇಟಿ ಮಾಡುತ್ತಿದ್ದೆ ಎನ್ನುವ ಮಾತನ್ನ ಕುಮಾರಸ್ವಾಮಿ ಹೇಳಿದ್ದಾರೆ. ನೀಚ ರಾಜಕಾರಣದ ರಕ್ತ ಡಿ.ಕೆ ಶಿವಕುಮಾರ್ ನಲ್ಲಿ ಇಲ್ಲ. ನಾನು ಮಧ್ಯರಾತ್ರಿ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ತಮ್ಮ ವಿರುದ್ಧ ಪಿತೂರಿ ಮಾಡಿದ್ದರ ಬಗ್ಗೆ ದಾಖಲೆ ಇದ್ರೆ ಕುಮಾರಸ್ವಾಮಿ ಬಹಿರಂಗಪಡಿಸಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಸವಾಲ್​​​ ಹಾಕಿದ್ದಾರೆ. ಪಾಪ ಏನು ಮಾಡ್ತೀರಿ. ಜೆಡಿಎಸ್ ನಾಯಕರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದ್ದು, ಇದೇ ಶಾಲು. ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ಕೂಡ ಇದೇ ಶಾಲು. ಈಗ ಅವರು ಅದೇ ಶಾಲಿನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದರೆ, ಇದರ ಬಗ್ಗೆ ರಾಜ್ಯದ ಜನತೆ ತೀರ್ಮಾನ ಮಾಡಲಿ.  ನನ್ನ 35 ವರ್ಷದ ರಾಜಕಾರಣದಲ್ಲಿ ನೀಚ ಬುದ್ದಿ ರಾಜಕಾರಣ ಮಾಡಿಲ್ಲ ಎಂದು ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು ನೀಡಿದರು.


ಸರ್ಕಾರದ ವಿರುದ್ಧ ವಾಗ್ದಾಳಿ


ಇಡಿ ಭಾರತದ ಇತಿಹಾಸದಲ್ಲಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ಜಾರಿಗೆ ತಂದಿದ್ದೆವು. 30 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟು ಆ ಹಣವನ್ನು ಅವರಿಗಾಗಿಯೇ ಖರ್ಚು ಮಾಡಲು ನಾವು ಕಾನೂನು ರೂಪಿಸಿದ್ದೆವು.


ಕಳೆದ ಬಜೆಟ್ ನಲ್ಲಿ ಇದು 17 ಸಾವಿರ ಕೋಟಿಗೆ ಇಳಿದಿತ್ತು. ಆರ್ಥಿಕ ಸಂಪನ್ಮೂಲ ಕೊರತೆ ಪರಿಸ್ಥಿತಿ ಅರಿತು ನಾವು ಈ ಬಗ್ಗೆ ಮಾತನಾಡಿರಲಿಲ್ಲ. ಈಗ 10 ಸಾವಿರ ಕೋಟಿಗೆ ಬಂದಿದ್ದು, ಜತೆಗೆ ಆ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದೆ. ಇದು ಬಿಜೆಪಿಯು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ವಿಚಾರವಗಿ ಬದ್ಧತೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಟೀಕಿಸಿದರು


ಇದನ್ನೂ ಓದಿ : ಆರು ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ ಮಾಡಿದ ಗ್ರಾಮಗಳು; ಇನ್ನೂ ಬಗೆಹರಿಯದ ಸಮಸ್ಯೆ


ಕಲ್ಯಾಣ ಕರ್ನಾಟಕಕ್ಕೆ ನಿಗದಿ ಮಾಡಿರುವ 1500 ಕೋಟಿ ಹಣ ಬಿಡುಗಡೆ ಮಾಡಿದರೆ ನಮ್ಮ ಶಾಸಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದರು.


ಸಿದ್ದರಾಮಯ್ಯನವರು ಯಡಿಯೂರಪ್ಪನವರನ್ನು ಭೇಟಿ ಮಾಡಿರುವ ಬಗ್ಗೆ ಅವರನ್ನೇ ಕೇಳಬೇಕು. ನನಗೆ ಗೊತ್ತಿಲ್ಲದ ವಿಚಾರದ ಬಗ್ಗೆ ನಾನೇನು ಹೇಳಲಿ?’ ಎಂದರು

Published by:G Hareeshkumar
First published: