ಸಿದ್ದರಾಮಯ್ಯ ಮತ್ತು ಡಿಕೆಶಿ ನಾಳೆ ಬೆಳಗಾವಿಗೆ ಭೇಟಿ : ಕಾಂಗ್ರೆಸ್ ಕಚೇರಿ ಉದ್ಘಾಟಿಸಲಿರುವ ಕೈ ನಾಯಕರು

ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿ ನಾಯಕರು ಬೆಳಗಾವಿಯಿಂದ ನೇರವಾಗಿ ಘಟಪ್ರಭಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಘಟಪ್ರಭಾ ಗ್ರಾಮದಲ್ಲಿ ನಿರ್ಮಾಣವಾಗಿರುವ ಸೇವಾದಳ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

news18-kannada
Updated:October 1, 2020, 10:47 PM IST
ಸಿದ್ದರಾಮಯ್ಯ ಮತ್ತು ಡಿಕೆಶಿ ನಾಳೆ ಬೆಳಗಾವಿಗೆ ಭೇಟಿ : ಕಾಂಗ್ರೆಸ್ ಕಚೇರಿ ಉದ್ಘಾಟಿಸಲಿರುವ ಕೈ ನಾಯಕರು
ಸಿದ್ದತೆಗಳನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ
  • Share this:
ಬೆಳಗಾವಿ(ಅಕ್ಟೋಬರ್. 01): ನಾಳೆ ಬೆಳಗಾವಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ. ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿ ಉದ್ಘಾಟನೆ ಹಾಗೂ ಘಟಪ್ರಭಾ ಗ್ರಾಮದ ಸೇವಾದಳ ತರಬೇತಿ ಕೇಂದ್ರಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ಜತೆಗೆ ಜಿಲ್ಲಾ ಕಚೇರಿಯಲ್ಲಿ ಬೆಳಗಾವಿ ಜಿಲ್ಲೆ, ಬೆಳಗಾವಿ ನಗರ ಹಾಗೂ ಚಿಕ್ಕೋಡಿ ವಿಭಾಗದ ಸಭೆಯನ್ನು ನಡೆಸಿ ಪಕ್ಷ ಸಂಘಟನೆಗೆ ಚುರುಕು ನೀಡಲಿದ್ದಾರೆ. ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿ ನಾಯಕರು ಬೆಳಗಾವಿಯಿಂದ ನೇರವಾಗಿ ಘಟಪ್ರಭಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಘಟಪ್ರಭಾ ಗ್ರಾಮದಲ್ಲಿ ನಿರ್ಮಾಣವಾಗಿರುವ ಡಾ. ನಾ. ಸು ಹರ್ಡಿಕರ್ ಸೇವಾದಳ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣದ ರಾಷ್ಟ್ರ ಮಟ್ಟದ ತರಬೇತಿ ಕೇಂದ್ರ ಸ್ಥಾಪನೆ ಮಾಡುವ ಸಿದ್ದತೆಯನ್ನು ಮಾಡಿಕೊಂಡಿದೆ. ಶೀಘ್ರದಲ್ಲಿಯೇ ರಾಹುಲ್ ಗಾಂಧಿ ಅವರಿಂದಲೇ ಈ ತರಬೇತಿ ಕೇಂದ್ರ ಉದ್ಘಾಟನೆ ಮಾಡಿಸಲು ರಾಜ್ಯ ನಾಯಕರು ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. 

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾಂಗ್ರೆಸ್ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ. ಈ ಕಚೇರಿಯ ಉದ್ಘಾಟನೆಯನ್ನು ನಾಳೆ ಸಂಜೆ ನಾಲ್ಕು ಗಂಟೆಗೆ ವಿಪಕ್ಷ ನಾಯಕರ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ನೆರವೇರಿಸಲಿದ್ದಾರೆ. ಜತೆಗೆ ಅನೇಕ ಕಾಂಗ್ರೆಸ್ ಮುಖಂಡರು, ಶಾಸಕರು ಹಾಗೂ ಮಾಜಿ ಶಾಸಕರು ಪಕ್ಷದ ವಿವಿಧ ಘಟಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಖ್ಯಾತ ಕುಸ್ತಿಪಟು ರೇವುನಾಯಕ ಬೆಳಮಗಿಯನ್ನೇ ಹೈರಾಣಾಗಿಸಿದ ಕೊರೋನಾ - ಗದ್ಗದಿತರಾಗಿ ಕಣ್ಣೀರು ಹಾಕಿದ ಮಾಜಿ ಸಚಿವ

ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮಗಳ ಜತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಬಗ್ಗೆ ಯಾವುದೇ ಚರ್ಚೆ ಇನ್ನೂ ಆರಂಭವಾಗಿಲ್ಲ. ಯಾರೊಬ್ಬರು ಸ್ಪರ್ಧೆ ಮಾಡುತ್ತೇನೆ ಎಂದು ಮುಂದೆ ಬಂದಿಲ್ಲ. ಮುಂದಿನ 15 ದಿನದಲ್ಲಿ ಈ ಬಗ್ಗೆ ಒಂದು ಸಭೆ ನಡೆಸುತ್ತೇವೆ. ಅಲ್ಲಿ ಈ ಬಗ್ಗೆ ಚರ್ಚೆ ಹಾಗೂ ತೀರ್ಮಾನ ಮಾಡುತ್ತೇವೆ ಎಂದರು.

ಸದ್ಯ ಘೋಷಣೆಯಾಗಿರುವ ಶಿರಾ, ಆರ್ ಆರ್ ನಗರ ಎರಡು ಕ್ಷೇತ್ರಗಳಲ್ಲಿ ಗೆಲ್ಲಲ್ಲು ಪ್ರಯತ್ನ  ಮಾಡುತ್ತೇವೆ. ಪಕ್ಷದ ಆಂತರಿಕ ಸಮಸ್ಯೆಯಿಂದ ಕಳೆದ ಚುನಾವಣೆಯಲ್ಲಿ ಶಿರಾದಲ್ಲಿ ಸೋಲು ಆಗಿದೆ. ಈ ಸಲ ಎಲ್ಲಾರು ಒಂದಾಗಿ ಚುನಾವಣೆ ಎದುರಿಸುತ್ತೇವೆ. ವಿಧಾನಸಭೆ ಅಧಿವೇಶನದಲ್ಲಿ ಪ್ರವಾಹ ಸೇರಿ ಯಾವುದೇ ಸಮಸ್ಯೆಗಳ ಚರ್ಚಗೆ ಅವಕಾಶ ಸಿಕಿಲ್ಲ. ಜನರ ನಡುವೆ  ಹೋಗಿ ಈ ಬಗ್ಗೆ ನಾವು ಗಮನ ಸೆಳೆಯುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
Published by: G Hareeshkumar
First published: October 1, 2020, 10:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading