ಡಿಕೆಶಿ ಮುಂದಿನ ಸಿಎಂ ಅಭ್ಯರ್ಥಿ?; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಕೆಪಿಸಿಸಿ ಅಧ್ಯಕ್ಷ

ನಾನು ಸಾಮೂಹಿಕ ನಾಯಕತ್ವದಡಿ ನಂಬಿಕೆ ಇಟ್ಟವನು‌‌. ಮೊದಲು ಪಾರ್ಟಿನ ಅಧಿಕಾರಕ್ಕೆ ತರಬೇಕು, ಆಮೇಲೆ ಹೈಕಮಾಂಡ್, ನಮ್ಮ ಶಾಸಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ತಾರೆ. ಅವರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಅಂತ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

  • Share this:
ಬೆಂಗಳೂರು(ಅ.24): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರುಷ ಬಾಕಿಯಿದೆ. ಅದಾಗಲೇ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಮೊನ್ನೆ ಬಾದಾಮಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಾನಾಡ್ತಾ ಮತ್ತೊಮ್ಮೆ ಮುಖ್ಯಮಂತ್ರಿಯಾದರೆ, 10 ಕೆ.ಜಿ ಅಕ್ಕಿ ಕೊಡುವ ಬಗ್ಗೆ ಹೇಳಿದ್ರು‌. ಆ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಸಿದ್ದರಾಮಯ್ಯ ಆಪ್ತ ಜಮೀರ್ ಅಹಮದ್ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆ ಕೊಟ್ಟಿದ್ದರು. ಇನ್ನು ಆರ್.ಆರ್. ನಗರದ ಚುನಾವಣಾ ಅಖಾಡದಲ್ಲಿ ಡಿಕೆಶಿ ಮುಂದಿನ ಮುಖ್ಯಮಂತ್ರಿ ಎಂಬಂತೆ ಬಿಂಬಿಸಲಾಗುತ್ತಿದೆ. ಶುಕ್ರವಾರದಂದು ಆರ್.ಆರ್ ನಗರದಲ್ಲಿ ಒಕ್ಕಲಿಗ ಮುಖಂಡರ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಡಿಕೆ.ಶಿವಕುಮಾರ್ ಪಾಲ್ಗೊಂಡಿದ್ದರು. ಈ ವೇಳೆ ಡಿಕೆಶಿ ಸಮ್ಮುಖದಲ್ಲಿಯೇ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂಬಂತೆ ಸಭೆಯಲ್ಲಿ ಪಾಲ್ಗೊಂಡಿದ್ದವರು ಹೇಳಿಕೆ ನೀಡಿದ್ರು.

ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾ ರೆಡ್ಡಿ, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ, ರಾಜ್ಯ ಸಭಾ ಸದಸ್ಯ ಚಂದ್ರಶೇಖರ್, ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಂತಲೇ ಮಾತನಾಡಿದ್ದರು.

ಲಿಂಗಾಯತ ಸಿಎಂ ವಿರುದ್ದ ಲಿಂಗಾಯತ ಶಾಸಕರನ್ನೇ ಎತ್ತಿ ಕಟ್ಟಿದ್ದಾರೆ; ಮಾಜಿ ಸಚಿವ ಬಸವರಾಜ್ ಹೊರಟ್ಟಿ

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್ ಅವರವರ ಪ್ರೀತಿ ಅಭಿಮಾನ ಹೇಳಿಕೊಳ್ಳುತ್ತಾರೆ.  ನಾನು ಸಾಮೂಹಿಕ ನಾಯಕತ್ವದಡಿ ನಂಬಿಕೆ ಇಟ್ಟವನು‌‌. ಮೊದಲು ಪಾರ್ಟಿನ ಅಧಿಕಾರಕ್ಕೆ ತರಬೇಕು, ಆಮೇಲೆ ಹೈಕಮಾಂಡ್, ನಮ್ಮ ಶಾಸಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ತಾರೆ. ಅವರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಅಂತ ಹೇಳಿದರು.

ಇದೇ ವೇಳೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಜಮೀರ್ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ಡಿಕೆಶಿ, ಅವರು ನನ್ನ ಒಳ್ಳೆಯ ಸ್ನೇಹಿತರು. ಕೆಲವೊಮ್ಮೆ ಎಮೋಷನಲ್ ಆಗಿ ಮಾತಾಡ್ತಾರೆ ಅಷ್ಟೇ ಅಂದರು.

ಇದಕ್ಕೂ ಮುನ್ನ, ಓಲಾ, ಉಬರ್ ಚಾಲಕರ ಸಂಘದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಜೊತೆಗೆ ನೂರಾರು ಚಾಲಕರು ಕಾಂಗ್ರೆಸ್ ಸೇರ್ಪಡೆಯಾದರು.
Published by:Latha CG
First published: