D K Shivakumar: ಸಿಎಂ ಕುರ್ಚಿ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ; ಕಾವಿ ಬಟ್ಟೆ ಹಾಕಿಲ್ಲ, ಖಾದಿ ತೊಟ್ಟಿದ್ದೇನೆ

ನೀವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನೇನು ಸನ್ಯಾಸಿಯೇ, ನಾನು ಕಾವಿ ಬಟ್ಟೆ ಧರಿಸಿದ್ದೇನಾ, ನಾನು ಖಾದಿ ಬಟ್ಟೆ ತೊಟ್ಟಿದ್ದೇನೆ. ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದ್ರು.

ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್

  • Share this:
ಮೈಸೂರು (ಜು.19): ಚುನಾವಣೆಗೆ (Election) ಹಲವು ತಿಂಗಳಿದ್ರೂ ಕಾಂಗ್ರೆಸ್​ನಲ್ಲಿ ಸಿಎಂ ಖುರ್ಚಿಗಾಗಿ ಈಗಾಗಲೇ ಪೈಪೋಟಿ ಶುರುವಾಗಿದೆ. ಸಿದ್ದರಾಮಯ್ಯ (Siddaramaiah), ಡಿ.ಕೆ ಶಿವಕುಮಾರ್ (D K Shivakumar)​ ನಡುವಿನ ಮುಸುಕಿನ ಗುದ್ದಾಟ ತೆರೆಮರೆಯಲ್ಲಿ ನಡೆಯುತ್ತಲೇ ಇದೆ.  ಈ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಡೆದಿರಲು ನಾನು ಸನ್ಯಾಸಿಯಲ್ಲ, ಕಾವಿ ಬಟ್ಟೆ ತೊಟ್ಟಿಲ್ಲ ಎಂದು ಮುಖ್ಯಮಂತ್ರಿ (Chief Minister) ಆಗುವ ಅಭಿಲಾಷೆಯನ್ನು ಡಿ.ಕೆ ಶಿವಕುಮಾರ್ ಬಹಿರಂಗವಾಗಿಯೇ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮ ನಾನೇ ಸಿಎಂ ಆಗುತ್ತೇನೆ ಎಂದು ಹೇಳಿಕೊಳ್ತಿರೋ ಸಿದ್ದರಾಮಯ್ಯಗೆ ಡಿಕೆಶಿ ಡಿಚ್ಚಿ ಹೊಡೆದಿದ್ದಾರೆ. ಸಿದ್ದರಾಮೋತ್ಸವದ ಮೂಲಕ ಹೈಲೈಟ್ ಆಗಲು ರಾಜಕೀಯ ತಂತ್ರಗಾರಿಕೆ (Political Strategy) ರೂಪಿಸಿರುವ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್​ ಶಾಕ್​ ಕೊಟ್ಟಿದ್ದಾರೆ.

ಸಮುದಾಯದಲ್ಲಿ ನಾನು 1 ಹಂತಕ್ಕೆ ಬಂದಿದ್ದೇನೆ

ನಾನೇನು ಸನ್ಯಾಸಿನಾ, ಕಾವಿ ಬಟ್ಟೆ ಹಾಕಿಲ್ಲ, ಖಾದಿ ಬಟ್ಟೆ ಹಾಕಿದ್ದೇನೆ. ಎಸ್.ಎಂ ಕೃಷ್ಣ ಅವರ ನಂತರ ಸಮುದಾಯದಲ್ಲಿ ನಾನು ಒಂದು ಹಂತಕ್ಕೆ ಬಂದಿದ್ದೇನೆ. ನನ್ನ ಜೊತೆ ಕೈಜೋಡಿಸಿ ಎಂದು ನಮ್ಮ ಸಮುದಾಯಕ್ಕೆ ಮನವಿ ಮಾಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್​ನಲ್ಲಿ ಎರಡು ಬಣಗಳು ಇಲ್ಲ

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ ಶಿವಕುಮಾರ್ ಬಣ ಎಂಬುದು ಇಲ್ಲ. ಇರುವುದು ಕಾಂಗ್ರೆಸ್ ಬಣ ಮಾತ್ರ. ಮತ್ಯಾವುದೇ ಬಣ ಇಲ್ಲ. ಎಸ್.ಎಂ ಕೃಷ್ಣ ನಂತರ ಒಕ್ಕಲಿಗ ಸಮುದಾಯದಿಂದ ಒಂದು ಹಂತಕ್ಕೆ ಬಂದಿದ್ದೇನೆ. ಹಾಗಾಗಿ ಈ ಬಾರಿ ನನ್ನ ಕೈ ಬಲಪಡಿಸಿ ಎಂದು ಬೆಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿದ್ದೇನೆ. ಜೊತೆಗೆ ಎಲ್ಲಾ ಸಮುದಾಯದ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ: Student Arrest: ಎಕ್ಸಾಂ ಮುಂದೂಡಲು ಬಾಂಬ್​ ಬೆದರಿಕೆ; ಅದೇ ಶಾಲೆಯ ಬಾಲಕ ಪೊಲೀಸ್​ ವಶಕ್ಕೆ

ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು

ನೀವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್​ ನಾನೇನು ಸನ್ಯಾಸಿಯೇ, ನಾನು ಕಾವಿ ಬಟ್ಟೆ ಧರಿಸಿದ್ದೇನಾ, ನಾನು ಖಾದಿ ಬಟ್ಟೆ ತೊಟ್ಟಿದ್ದೇನೆ. ಮೊದಲು ಕಾಂಗ್ರೆಸ್ ಸರ್ಕಾರ ಬರಬೇಕು. ಮುಖ್ಯಮಂತ್ರಿ ಯಾರು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದ್ರು.

ಸಿದ್ದರಾಮೋತ್ಸವದಲ್ಲಿ ನಾನು ಭಾಗಿಯಾಗುತ್ತೇನೆ

ನಾನು ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸಿದ್ದರಾಮೋತ್ಸವದಲ್ಲಿ ಭಾಗವಹಿಸುತ್ತೇವೆ. ಸಿದ್ದರಾಮಯ್ಯ ಅವರ 75 ನೇ ವರ್ಷದ ಕಾರ್ಯಕ್ರಮವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು. ನಾನು ಸರಳವಾಗಿ ಆಚರಿಸಿಕೊಂಡೆ. ಅದು ನನ್ನ ವಿಚಾರ, ಕೆಲವರು ಅದ್ಧೂರಿಯಾಗಿ ಆಚರಿಸುತ್ತಾರೆ ಎಂದರು.

ರಾಜ್ಯದಲ್ಲಿ ದಪ್ಪ ಚರ್ಮದ ಭ್ರಷ್ಟ ಸರ್ಕಾರ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಮುಖ್ಯಮಂತ್ರಿ ಅವಕಾಶ ಇದೆಯಾ ಎಂಬ ಪ್ರಶ್ನೆಗೆ ಯಾಕಾಗಬಾರದು ಎಂದು ಡಿಕೆಶಿ ಉತ್ತರಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಪ್ರತಿಪಕ್ಷವಾಗಿ ವಿಫಲವಾಗಿಲ್ಲ, ನಿರಂತರವಾಗಿ ಹೋರಾಟ ನಡೆಸುತ್ತಿದೆ. ಅದರ ಫಲವಾಗಿಯೇ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದರು. ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿದ್ದು, ರಾಜ್ಯದಲ್ಲಿ ದಪ್ಪ ಚರ್ಮದ ಭ್ರಷ್ಟ ಸರ್ಕಾರವಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Husband Torture: ಪ್ರೀತಿಸಿ ಮದುವೆಯಾಗಿ ಅಶ್ಲೀಲ ಚಿತ್ರ ತೋರಿಸಿ ಟಾರ್ಚರ್; 5 ಬಾರಿ ಗರ್ಭಪಾತ ಮಾಡಿಸಿ ಹಿಂಸೆ ಕೊಟ್ಟ ಪಾಪಿ!

ಸರ್ಕಾರಿ ಕಾಮಗಾರಿಗಳಿಗೆ ಶೇ 40% ಕಮಿಷನ್

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನ ಸಾಮಾನ್ಯರಿಗೆ ತೊಂದರೆ ಆಗಿದ್ದು, ಧಾರ್ಮಿಕ ವಿಚಾರದಲ್ಲಿ ಅಶಾಂತಿ ಉಂಟುಮಾಡುತ್ತಿದೆ. ಇದರ ಜೊತೆಗೆ ಭ್ರಷ್ಟಾಚಾರ ಹೆಚ್ಚಾಗಿದ್ದು, ಹೋಟೆಲ್ ಗಳಲ್ಲಿ ತಿಂಡಿ ಪದಾರ್ಥಗಳಿಗೆ ಬೆಲೆ ನಿಗದಿಪಡಿಸುವ ರೀತಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಿಷ್ಟು, ಮಂತ್ರಿ ಸ್ಥಾನಕ್ಕಿಷ್ಟು ಎಂದು ಬೋರ್ಡ್ ಹಾಕಿದ್ದಾರೆ. ಸರ್ಕಾರಿ ಕಾಮಗಾರಿಗಳಿಗೆ ಶೇ 40% ಕಮಿಷನ್ ಪಡೆಯಲಾಗಿದೆ ಎಂಬ ಆರೋಪ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಅಕ್ರಮ ನೇಮಕಾತಿ ಹಗರಣಗಳನ್ನು ಮುಚ್ಚಿ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
Published by:Pavana HS
First published: