HOME » NEWS » State » KPCC PRESIDENT DK SHIVAKUMAR SLAMS AT FORMER CM HD KUMARSWAMY HK

ನಿಮ್ಮ ತಂದೆಯವರನ್ನ ಪ್ರಧಾನಿಯನ್ನಾಗಿ ಮಾಡಿದ್ದು ಕಾಂಗ್ರೆಸ್ : ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು

ನನ್ನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿ ಆದರೆ ಕಾಂಗ್ರೆಸ್ ಬಗ್ಗೆ ಮಾತನಾಡಬೇಡಿ ಇದನ್ನ ನಾನು ಸಹಿಸಲ್ಲ ಎಂದು ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್​ ತಿರುಗೇಟು ಕೊಟ್ಟಿದ್ದಾರೆ

news18-kannada
Updated:December 28, 2020, 6:21 PM IST
ನಿಮ್ಮ ತಂದೆಯವರನ್ನ ಪ್ರಧಾನಿಯನ್ನಾಗಿ ಮಾಡಿದ್ದು ಕಾಂಗ್ರೆಸ್ : ಕುಮಾರಸ್ವಾಮಿಗೆ ಡಿಕೆಶಿ ತಿರುಗೇಟು
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
  • Share this:
ಬೆಂಗಳೂರು(ಡಿಸೆಂಬರ್​. 28): ನಿಮ್ಮ ತಂದೆಯನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್, ನಿಮ್ಮನ್ನ ಎರಡನೇ ಬಾರೀ ಸಿಎಂ ಮಾಡಿದ್ದು ಕಾಂಗ್ರೆಸ್, ಕಾಂಗ್ರೆಸ್ ಶಾಲುವಿಗೆ ವ್ಯಾಲ್ಯೂ ಇಲ್ಲ ಅಂತ ಹೇಳುತ್ತೀರಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ನಾನು ಹಸಿರು ಟವಲ್ ಹಾಕಿ ರೈತರ ಹೋರಾಟಕ್ಕೆ ಹೋಗಿದ್ದೆ. ಕಾಂಗ್ರೆಸ್ ಶಾಲುವಿಗೆ ವ್ಯಾಲ್ಯೂ ಇಲ್ಲ ಅಂತ ಹೇಳಿದರು ಎಂಬ ಮಾತಿಗೆ ಕಾಂಗ್ರೆಸ್​ ಸಂಸ್ಥಾಪನಾ ದಿನ ಸಮಾರಂಭದಲ್ಲಿಂದು ಮಾತನಾಡಿದ ಅವರು, ನನ್ನ ಬಗ್ಗೆ ವೈಯಕ್ತಿಕವಾಗಿ ಮಾತನಾಡಿ ಆದರೆ ಕಾಂಗ್ರೆಸ್ ಬಗ್ಗೆ ಮಾತನಾಡಬೇಡಿ ಇದನ್ನ ನಾನು ಸಹಿಸಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದ ಹಾಗೇ. ಇದು ಒಂದು ವರ್ಗ, ಒಂದು ಜಾತಿಗೆ ಸೀಮಿತವಾದ ಪಕ್ಷವಲ್ಲ ಎಂದು ತಿಳಿಸಿದರು.

ಇವತ್ತು ಬಿಜೆಪಿಗೆ ಇಷ್ಟು ದೊಡ್ಡ ಬಹುಮತ ಬಂದಿದೆ. ಆದರೆ ದೇಶದಲ್ಲಿ ರೈತರು, ಕಾರ್ಮಿಕರ ವಿಚಾರದಲ್ಲಿ ಎಷ್ಟು ಅಶಾಂತಿ ಮೂಡಿದೆ. ನನ್ನ ಜಿಲ್ಲೆಯಲ್ಲಿ ಟೊಯೋಟಾ ಕಂಪನಿ ಇದೆ. ಇಂದು ಸಾವಿರಾರು ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಅವರ ಸಮಸ್ಯೆ ಏನು ಅಂತಾ ಕೇಳಲು ತಯಾರಿಲ್ಲ. ಕಂಪನಿಯವರು ಕಾರ್ಮಿಕರ ಜತೆ ಮಾತನಾಡಲು ತಯಾರಿಲ್ಲ ಅಂತಿದ್ದಾರೆ. ಈ ಪರಿಸ್ಥಿತಿ ಯಾಕೆ ಬಂತು? ಈ ದೇಶದಲ್ಲಿ ಬಿಜೆಪಿ ಸರ್ಕಾರ ಕಾರ್ಮಿಕ ಕಾಯ್ದೆ ಸಡಿಲ ಮಾಡಿದ್ದರ ಪರಿಣಾಮ ಎಂದರು.

ಇದನ್ನೂ ಓದಿ : ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ರಾಜಕೀಯ ಧ್ರುವೀಕರಣ; ಕೋಡಿಶ್ರೀ ಭವಿಷ್ಯ

ಇನ್ನೆರಡು ದಿನಗಳಲ್ಲಿ 2021ನೇ ವರ್ಷ ಪ್ರಾರಂಭವಾಗುತ್ತದೆ. ಈ ಸಮಯದಲ್ಲಿ ನಾನು ಕಾರ್ಯಕರ್ತರಿಗೆ ಒಂದು ಕರೆ ನೀಡುತ್ತೇನೆ. ಹೊಸ ವರ್ಷ ಹೋರಾಟ ಹಾಗೂ ಪಕ್ಷ ಸಂಘಟನೆ ವರ್ಷವಾಗಬೇಕು. ನೀವು ಹಳ್ಳಿ, ಹಳ್ಳಿಯಲ್ಲೂ ಹೋರಾಟ ಪ್ರಾರಂಭ ಮಾಡಬೇಕು. ಜ. 6 ರಿಂದ 18ರವರೆಗೂ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಚುನಾವಣೆಯಲ್ಲಿ ಸೋತವರು, ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯನ್ನು ಮಂಗಳೂರು, ಬಿಡದಿ, ಕಲಬುರಗಿ ಹಾಗೂ ಹುಬ್ಬಳ್ಳಿ- ಧಾರವಾಡದಲ್ಲಿ ನಡೆಸಲು ನಿರ್ಧರಿಸಿದ್ದೇನೆ ಎಂದರು.
Youtube Videoಮೈತ್ರಿ ಸರ್ಕಾರದ ವೇಳೆ ಕುಮಾರಸ್ವಾಮಿ ಜೊತೆಗೆ ಇದ್ದು ಸರ್ಕಾರ ರಕ್ಷಣೆಗೆ ಬಂಡೆ ಅಂತೆ ಡಿಕೆ ಶಿವಕುಮಾರ್ ನಿಂತಿದ್ದರು. ಇನ್ನು ಮಂಡ್ಯ ಲೋಕಸಭಾ ಉಪಚುನಾವಣೆ ವೇಳೆ ನಾವು ಇಬ್ಬರು ನಿಜವಾದ ಜೋಡುಎತ್ತುಗಳು ಅಂತ ಕುಮಾರಸ್ವಾಮಿ ಹೇಳಿದ್ದರು. ಮೈತ್ರಿ ಸರ್ಕಾರ ಪತನದ ನಂತರ ಇತ್ತೀಚೆಗೆ ಇಬ್ಬರು ನಾಯಕರು ಹಾವು ಮೂಗುಸಿ ಅಂತ ಆಗಿದ್ದಾರೆ.
Published by: G Hareeshkumar
First published: December 28, 2020, 6:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories