DK Shivakumar vs CT Ravi| ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಹೋರಾಟದಿಂದ: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಇನ್ನೂ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ನಾಯಕರ ಕೊಡುಗೆ ಅಪಾರ ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಡಿಕೆ ಶಿವಕುಮಾರ್​, ಸಿಟಿ ರವಿ

ಡಿಕೆ ಶಿವಕುಮಾರ್​, ಸಿಟಿ ರವಿ

 • Share this:
  ಬೆಂಗಳೂರು: ಬಿಜೆಪಿ ಕಾಂಗ್ರೆಸ್​ ನಾಯಕರ ವಾಕ್ಸಮರ ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಆಗಸ್ಟ್​ 15 ಸ್ವಾತಂತ್ರ್ಯ ದಿನಾಚರಣೆಯ ದಿನ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಿಕ್ಕಮಗಳೂರು ಶಾಸಕ ಸಿಟಿ ರವಿ, "ಭಾರತಕ್ಕೆ ಮಹಾತ್ಮಾ ಗಾಂಧಿ ಅವರ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯ ಲಭ್ಯವಾಗಿತ್ತು ಎಂಬುದು ಅರ್ಧ ಸತ್ಯವಷ್ಟೇ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡು ವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ" ಎಂದಿದ್ದರು. ಅಲ್ಲದೆ, ಕಾಂಗ್ರೆಸ್ ನಾಯಕರಿಗೆ ತಲೆ ಕೆಟ್ಟಿದ್ದು, ಅವರು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊ ಳ್ಳಬೇಕಿದೆ ಎಂದು ಕಿಡಿಕಾರಿದ್ದರು. ಆದರೆ, ಮಾಜಿ ಸಚಿವ ಸಿಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, "ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ನಮಗೆಲ್ಲಾ ಸ್ವಾತಂತ್ರ್ಯ ಬಂದಿದೆ" ಎಂದು ಹೇಳುವ ಮೂಲಕ ವ್ಯಂಗ್ಯವಾಡಿದ್ದಾರೆ.

  ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಭಾನುವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, "ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಇನ್ನೂ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ನಾಯಕರ ಕೊಡುಗೆ ಅಪಾರ" ಎಂದು ವ್ಯಂಗ್ಯವಾಡಿದ್ದಾರೆ.

  ಅಲ್ಲದೆ, ಕಾಂಗ್ರೆಸ್ ನಾಯಕರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, "ನಾವು ಈಗಲೇ ನಿಮ್ಹಾನ್ಸ್ ಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ" ಎಂದು ಟಾಂಗ್ ಕೊಟ್ಟಿದ್ದಾರೆ.

  ಇದನ್ನೂ ಓದಿ: Afghanistan Crisis| ಅಫ್ಘನ್​ನಿಂದ ಮತ್ತಷ್ಟು ಭಾರತೀಯರ ರಕ್ಷಣೆ; 7 ಮಂದಿ ಕನ್ನಡಿಗರು ತಾಯ್ನಾಡಿಗೆ ವಾಪಸ್

  ಇನ್ನು ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಆಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, "ವಿನಯ್ ಕುಲಕರ್ಣಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಾಗಿದ್ದು, ಅವರು ಕಾಂಗ್ರೆಸ್ ನ ಭಾಗ. ವಿನಯ್ ಕುಲಕರ್ಣಿ ಅವರ ಮೇಲೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವುದು ಸಂತೋಷ. ಆದರೆ, ಇದೇ ರೀತಿ ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕೇಂದ್ರ ಸಚಿವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ. ಬಿಜೆಪಿ ಕಾರ್ಯಕರ್ತರ ಸಭೆ ಮಾಡಿದಾಗ ಯಾಕೆ ಪ್ರಕರಣ ದಾಖಲಿಸಿಲ್ಲ. ಸರ್ಕಾರ ತಮಗೆ ಬೇಕಾದ ರೀತಿಯಲ್ಲಿ ಕಾನೂನು ಬಳಕೆ ಮಾಡಿಕೊಳ್ಳುತ್ತಿದೆ.

  ಇದನ್ನೂ ಓದಿ: ಪಂಚಮಸಾಲಿಗಳ ಶಾಪ ತಟ್ಟಿದ್ದಕ್ಕೆ ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಂಡರು; ವಿಜಯಾನಂದ ಕಾಶಪ್ಪನವರ್

  ಇನ್ನೂ ಇಡಿ ಇಡಿ ದಾಳಿ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಅವರು ಸ್ಪಷ್ಟನೆ ನೀಡಿದ್ದಾರೆ. ತನಗೂ ಐಎಂಎ ಹಗರಣಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಮನೆಯ ಮೇಲಿನ ದಾಳಿ ರಾಜಕೀಯ ಪ್ರೇರಿತ. ಅವರು ನಿರಪರಾಧಿ. ಹೀಗಾಗಿ ನಿರಪರಾಧಿಗಳಿಗೆ, ರಾಜಕೀಯ ದ್ವೇಷದ ದಾಳಿಗೆ ಒಳಗಾದವರಿಗೆ ನಾವು ಸ್ಪಂದಿಸಬೇಕು. ಅದನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ" ಎಂದು ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿ ನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿ ಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: