HOME » NEWS » State » KPCC PRESIDENT DK SHIVAKUMAR WILL VISIT FLOOD AFFECTED AREAS OF BELAGAVI LG

ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರವಾಸ

ಘಟಪ್ರಭಾ, ಮಾರ್ಕಂಡಯ್ಯ ಹಾಗೂ ಹಿರಣ್ಯಕೇಶಿ ನದಿಯಿಂದ ಗೋಕಾಕ್ ಭಾಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಗೋಕಾಕ್ ನಗರದ ಅನೇಕ ಬಡವಾವಣೆಗಳು ಹಾಗೂ ತಾಲೂಕಿನ 6ಕ್ಕೂ ಹೆಚ್ಚು ಗ್ರಾಮಗಳಿಗೆ ಜಲ ದಿಗ್ಬಂದನ ಊಂಟಾಗಿತ್ತು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದರೂ ಸಚಿವ ರಮೇಶ ಜಾರಕಿಹೊಳಿ ಮಾತ್ರ ದೆಹಲಿ, ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು.

news18-kannada
Updated:August 23, 2020, 11:10 AM IST
ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರವಾಸ
ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​
  • Share this:
ಬೆಳಗಾವಿ(ಆ. 23): ಮಹಾರಾಷ್ಟ್ರ ಪಶ್ಚಿಮ ಘಟ ಪ್ರದೇಶದಲ್ಲಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದ್ದು, ಪ್ರವಾಹದಿಂದ ಆಗಿರೋ ಹಾನಿಯ ಬಗ್ಗೆ ಅವಲೋಕನ ನಡೆಯುತ್ತಿದೆ. ಪ್ರವಾಹದಿಂದ ಆಗಿರೋ ಹಾನಿ ಬಗ್ಗೆ ಪರಿಶೀಲನೆಗೆ ಸ್ವತಃ ಸಿಎಂ ಬಿಎಸ್ ವೈ ಹಾಗೂ ಕೆಪಿಸಿಸಿ ಅಧ್ಯಕ್ಷ ಬೆಳಗಾವಿ ಜಿಲ್ಲೆಯ ಭೇಟಿಗೆ ಸಮಯ ನಿಗದಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡಲು ನಿರ್ಧರಿಸಿದ್ದಾರೆ. ರಾಜಕೀಯವಾಗಿ ಸಚಿವ ರಮೇಶ ಜಾರಕಿಹೊಳಿ, ಡಿಕೆ ಶಿವಕುಮಾರ್ ಬದ್ಧವೈರಿಯಂತೆ ಕಾದಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೀಗ ಡಿಕೆಶಿ ಗೋಕಾಕ್, ಅರಬಾವಿ ಕ್ಷೇತ್ರದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ವಾಸ್ತವ ತಿಳಿಯಲು ಬರುತ್ತಿದ್ದಾರೆ. ಇದು ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಘಟಪ್ರಭಾ, ಮಾರ್ಕಂಡಯ್ಯ ಹಾಗೂ ಹಿರಣ್ಯಕೇಶಿ ನದಿಯಿಂದ ಗೋಕಾಕ್ ಭಾಗದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಗೋಕಾಕ್ ನಗರದ ಅನೇಕ ಬಡವಾವಣೆಗಳು ಹಾಗೂ ತಾಲೂಕಿನ 6ಕ್ಕೂ ಹೆಚ್ಚು ಗ್ರಾಮಗಳಿಗೆ ಜಲ ದಿಗ್ಬಂದನ ಊಂಟಾಗಿತ್ತು. ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದರೂ ಸಚಿವ ರಮೇಶ ಜಾರಕಿಹೊಳಿ ಮಾತ್ರ ದೆಹಲಿ, ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು.

Dams Water Level: ಇಂದು ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಸಾಧ್ಯತೆ; ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ

ನಾಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಗೋಕಾಕ್ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಗೋಕಾಕ್ ನಗರ ಹಾಗೂ ಗೋಕಾಕ್ ತಾಲೂಕಿನ ಮೆಳವಂಕಿ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಂತರ ಘಟಪ್ರಭಾದಲ್ಲಿ ಸೇವಾದಳದ ಕಚೇರಿಯಲ್ಲಿ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆ ನಡೆಸಿ ನಂತರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ25ರಂದು ಬಾಗಲಕೋಟೆ ಜಿಲ್ಲೆಯಲ್ಲಿಯೂ ಪ್ರವಾಹದಿಂದ ಆಗಿರೋ ಹಾನಿಯ ಬಗ್ಗೆ ಮಾಹಿತಿಯನ್ನು ಪಡೆಯಲಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ಹಾನಿಯ ಬಗ್ಗೆ ಕಂದಾಯ ಸಚಿವರು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೆ ಇದೇ ಆಗಸ್ಟ್​ 25ಕ್ಕೆ ಸ್ವತಃ ಸಿಎಂ ಬಿ ಎಸ್ ಯಡಿಯೂರಪ್ಪ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ವೈಮಾನಿಕ ಸಮೀಕ್ಷೆ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ.
ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಅಧಿಕಾರಿಗಳು, ಜನಪ್ರತಿನಿಧಿನಿಗಳ ಸಭೆ ನಡೆಯಲಿದೆ. ನಂತರ ಆಲಮಟ್ಟಿಯಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಲಾಗಿದೆ.
Published by: Latha CG
First published: August 23, 2020, 10:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories