ಬೆಳಗಾವಿ(ಜ. 23): ದೆಹಲಿ ವಿಧಾನಸಭಾ ಚುನಾವಣೆ ಮುಗಿದ ಬಳಿ ಕೆಪಿಸಿಸಿ ಅಧ್ಯಕ್ಷ ಹೆಸರು ಘೋಷಣೆ ಸಾಧ್ಯತೆ ಇದೆ. ಎಲ್ಲರನ್ನೂ ಸಮತೋಲನ ಮಾಡಿ ತೆಗೆದುಕೊಂಡು ಹೋಗುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹೆಸರು ಘೋಷಣೆಯಲ್ಲಿ ವಿಳಂಬ ಆಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಎಲ್ಲಾ ಮುಖಂಡರು ಬೇಗ ಅಧ್ಯಕ್ಷ ಹೆಸರು ಘೋಷಣೆ ಮಾಡಿ ಎಂದು ಹೈಕಮಾಂಡ್ಗೆ ಒತ್ತಡ ಹಾಕಿದ್ದಾರೆ. ಈ ಹಿಂದೆ ಕೆಪಿಸಿಸಿಗೆ ಇಬ್ಬರು ಕಾರ್ಯಾಧ್ಯಕ್ಷರು ಇದ್ದರು. ಇದೀಗ ನಾಲ್ವರು ಕಾರ್ಯಾಧ್ಯಕ್ಷರಿಗೆ ನಾವು ಬೇಡಿಕೆ ಇಟ್ಟದ್ದೇವೆ. ಕೆಲವರು ಇಬ್ಬರೇ ಕೆಪಿಸಿಸಿ ಕಾರ್ಯಾಧ್ಯಕ್ಷರು ಸಾಕು ಎಂದು ಅಭಿಪ್ರಾಯ ಹೇಳಿದ್ದಾರೆ. ಪಕ್ಷದಲ್ಲಿ ಯಾವುದೇ ಹುದ್ದೆ ನೇಮಕ ಸಂದರ್ಭದಲ್ಲಿ ಗೊಂದಲ ಸಹಜ. ಎಲ್ಲರೂ ತಮ್ಮಅಭಿಪ್ರಾಯ ಹೇಳಲು ಪಕ್ಷದಲ್ಲಿ ಸ್ವತಂತ್ರರು ಎಂದರು.
ನಾಲ್ವರು ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಪ್ರಸ್ತಾವನ್ನು ಸಮರ್ಥಿಸಿಕೊಂಡ ಅವರು, ಕೆಪಿಸಿಸಿ ಅಧ್ಯಕ್ಷ ಪ್ರಭಾವ ಆಗುತ್ತದೆ ಎಂಬ ಅಭಿಪ್ರಾಯವನ್ನು ತಳ್ಳಿಹಾಕಿದರು. "ಸಿಎಂ ಯಡಿಯೂರಪ್ಪ ಮೂವರನ್ನು ಡಿಸಿಎಂ ಮಾಡಿದ್ದಾರೆ. ಅವರ ಪ್ರಭಾವ ಏನು ಕಮ್ಮಿ ಆಗಿದೆಯೇ?" ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡಿದರು.
ಸರ್ಕಾರದೊಳಗಿನ ಬೆಳವಣಿಗೆ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಆದಷ್ಟು ಬೇಗ ಸಂಪುಟ ವಿಸ್ತರಣೆ ಆದರೆ ಆಡಳಿತ ದೃಷ್ಠಿಯಿಂದ ಉತ್ತಮ. ಅರ್ಹರು ಈಗಾಗಲೇ ಅತಂತ್ರರಾಗಿದ್ದಾರೆ. ಎಲ್ಲರನ್ನೂ ಸಚಿವರನ್ನಾಗಿ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಸಂಪುಟ ರಚನೆಯಲ್ಲಿ ಸಾಕಷ್ಟು ಗೊಂದಲ ಇದೆ ಎಂದು ಟೀಕಿಸಿದರು.
ಸಂಪುಟದಲ್ಲಿ ಎಲ್ಲಾ ಅನರ್ಹರಿಗೆ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಅಸಮಾಧಾನ ಬಹಿರಂಗ ಆಗದೇ ಇರಬಹುದು. ಆದರೆ, ಅದು ಇದೆ. ಎಲ್ಲರನ್ನು ತೃಪ್ತರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ :
ಇಂದಿನ ಪರಿಸ್ಥಿತಿಗೆ ಹಿಂದಿನ ಸರ್ಕಾರಗಳೇ ಕಾರಣ; ಸಮಾಜಘಾತುಕ ಶಕ್ತಿಗಳು ಮಿತಿ ಮೀರಿವೆ: ಅಶ್ವತ್ಥನಾರಾಯಣ
ರಮೇಶ ಜಾರಕಿಹೊಳಿ ವಿಚಾರವಾಗಿ ಮಾತಾನಡಿದ ಅವರು, ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ ಮಹತ್ವ ಕೊಡುವ ಅಗತ್ಯ ಇಲ್ಲ. ಎಲ್ಲಾ ಪಕ್ಷದವರನ್ನು ಒಟ್ಟಿಗೆ ತಗೆದುಕೊಂಡು ಹೋಗುವುದು ರಮೇಶನ ಉದ್ದೇಶವಾಗಿದೆ ಎಂದು ರಮೇಶ ಜಾರಕಿಹೊಳಿ ಬಗ್ಗೆ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ