HOME » NEWS » State » KPCC PRESIDENT SATISH JARAKIHOLI CONDUCTING POLITICAL TRAINING FOR TWO CHILDREN HK

ಇಬ್ಬರು ಮಕ್ಕಳಿಗೆ ರಾಜಕೀಯ ತರಬೇತಿ ನೀಡುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ್ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ, ಅರಬಾವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿ ಹಾಗೂ ಯಮಕನಮಡಿ ಕ್ಷೇತ್ರದಲ್ಲಿ ಸತೀಶ ಜಾರಕಿಹೊಳಿ ಶಾಸಕರಾಗಿದ್ದಾರೆ. ಮುಂದೆ ಯಾವ ಕ್ಷೇತ್ರದಲ್ಲಿ ಮಕ್ಕಳಿಗೆ ಸ್ಪರ್ಧೆಗೆ ಅವಕಾಶ ಕೊಡಿಸುತ್ತಾರೆ ಎಂಬುದು ಇನ್ನೂ ನಿಗದಿಯಾಗಿಲ್ಲ.

news18-kannada
Updated:January 5, 2021, 7:26 PM IST
ಇಬ್ಬರು ಮಕ್ಕಳಿಗೆ ರಾಜಕೀಯ ತರಬೇತಿ ನೀಡುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಮಕ್ಕಳಾದ ರಾಹುಲ್​​​ ಹಾಗೂ ಪ್ರಿಯಾಂಕಾ
  • Share this:
ಬೆಳಗಾವಿ(ಜನವರಿ. 05): ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆ ಕುಟುಂಬ ರಾಜಕಾರಣಕ್ಕೆ ಹೆಸರು ವಾಸಿಯಾಗಿವೆ. ಅಲ್ಲಿ ಅನೇಕ ಕುಟುಂಬಗಳು ಜಿಲ್ಲೆಯಲ್ಲಿ ಆಡಳಿತ ನಡೆಸಿವೆ. ಸದ್ಯ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ರಾಜಕೀಯ ಹಿಡಿತ ಸಾಧಿಸಿದ್ದಾರೆ. ಕಾಂಗ್ರೆಸ್, ಬಿಜೆಪಿಯಲ್ಲಿ ಜಾರಕಿಹೊಳಿ ಸಹೋದರರು ಹೇಳಿದೆಂತೆ ನಡೆಯುತ್ತದೆ. ಇದೇ ಕುಟುಂಬದ ರಾಹುಲ್, ಪ್ರಿಯಾಂಕಾ ಅವರುಗಳಿಗೆ ಇದೀಗ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜಕೀಯ ತರಬೇತಿ ನೀಡುತ್ತಿದ್ದಾರೆ. ರಾಹುಲ್, ಪ್ರಿಯಾಂಕಾ ಈ ಹೆಸರು ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಪ್ರಖ್ಯಾತಿ ಪಡೆದಿವೆ. ದಿ. ಮಾಜಿ ಪ್ರಧಾನಿ ರಾಜೀವ ಗಾಂಧಿ ಮಕ್ಕಳ ಹೆಸರು ಎಂಬ ಕಾರಣಕ್ಕೆ ಬೆಳಗಾವಿ ಜಿಲ್ಲೆಯ ರಾಹುಲ್, ಪ್ರಿಯಾಂಕಾ ಬೇರೆ. ಇದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಇಬ್ಬರ ಮಕ್ಕಳ ಹೆಸರು. ಯಮನಮರಡಿ ಕ್ಷೇತ್ರ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಕ್ಷೇತ್ರದಲ್ಲಿ ಮಕ್ಕಳಾದ ರಾಹುಲ್, ಪ್ರಿಯಾಂಕಾಗೆ ರಾಜಕೀಯ ತರಬೇತಿ ಆರಂಭಿಸಿದ್ದಾರೆ. ಕ್ಷೇತ್ರದಲ್ಲಿ ಓಡಾಟ, ಜನ ಸಂಪರ್ಕ ಸೇರಿದಂತೆ ಎಲ್ಲಾ ರೀತಿಯ ಮಾರ್ಗದರ್ಶನ ನೀಡುತ್ತಿದ್ದಾರೆ.

ಲಾಕ್ ಡೌನ್, ಪ್ರವಾಹ ಸೇರಿದಂತೆ ಎಲ್ಲಾ ಸಂದರ್ಭಗಳಲ್ಲಿ ಮಕ್ಕಳನ್ನು ಜನರ ಸಮಸ್ಯೆ ಕೇಳಲು ಮುಂದೆ ಬಿಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಯಮನಮರಡಿ ಕ್ಷೇತ್ರವನ್ನು ಯಾರಿಗೆ ಬಿಟ್ಟು ಕೊಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ, ಅರಬಾವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿ ಹಾಗೂ ಯಮಕನಮಡಿ ಕ್ಷೇತ್ರದಲ್ಲಿ ಸತೀಶ ಜಾರಕಿಹೊಳಿ ಶಾಸಕರಾಗಿದ್ದಾರೆ. ಮುಂದೆ ಯಾವ ಕ್ಷೇತ್ರದಲ್ಲಿ ಮಕ್ಕಳಿಗೆ ಸ್ಪರ್ಧೆಗೆ ಅವಕಾಶ ಕೊಡಿಸುತ್ತಾರೆ ಎಂಬುದು ಇನ್ನೂ ನಿಗದಿಯಾಗಿಲ್ಲ.

ಸಚಿವ ರಮೇಶ್ ಜಾರಕಿಹೊಳಿ ಅವರ ಮಗ ಅಮರನಾಥ ಜಾರಕಿಹೊಳಿ ಈಗಾಗಲೇ ರಾಜಕೀಯ ಆರಂಭಿಸಿದ್ದು, ಕೆಎಂಎಫ್ ಅಧ್ಯಕ್ಷರಾಗಿದ್ದಾರೆ. ಸತೀಶ್ ಜಾರಕಿಹೊಳಿ ಇಬ್ಬರು ಮಕ್ಕಳು ಸಹ ತರಬೇತಿ ಆರಂಭಿಸಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿಯನ್ನು ಅಖಾಡಕ್ಕೆ ಇಳಿಸುತ್ತಾರೆ ಎಂಬ ಮಾತು ಕೇಳಿ ಬಂದಿದೆ. ಆದರೇ ಯಾವ ಕ್ಷೇತ್ರ ಎಂಬುದು ಮಾತ್ರ ಇನ್ನೂ ನಿಗದಿಯಾಗಿಲ್ಲ.

ಜಿಲ್ಲೆಯಲ್ಲಿ ಕತ್ತಿ, ಜೊಲ್ಲೆ, ಕೌಜಲಗಿ, ಪಾಟೀಲ್ ಹಾಗೂ ಹುಕ್ಕೇರಿ ಕುಟುಂಬ ಸದಸ್ಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಜಾರಕಿಹೊಳಿ ಕುಟುಂಬದ ಎರಡನೇ ತಲೆಮಾರಿನ ಯುವಕರು ಇದೀಗ ರಾಜಕೀಯದತ್ತ ಮುಖ ಮಾಡುತ್ತಿದ್ದಾರೆ.

ಇದನ್ನೂ ಓದಿ : ಯತ್ನಾಳ ಒಂಟಿ ಸಲಗದಂತೆ; ಬಸನಗೌಡ ಪಾಟೀಲ ಪರ ಕೂಡಲ ಸಂಗಮ ಸ್ವಾಮೀಜಿ ಬ್ಯಾಟಿಂಗ್

ಮಕ್ಕಳಿಗೆ ರಾಜಕೀಯ ತರಬೇತಿ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿ ಸತೀಶ ಜಾರಕಿಹೊಳಿ, ಹೌದು ಇಬ್ಬರು ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದಾರೆ. ಸದ್ಯ ಯಮಕನಮರಡಿ ಕ್ಷೇತ್ರವನ್ನು ಬಿಟ್ಟುಕೊಡಲ್ಲ. ಇನ್ನೂ ಮಾರ್ನಾಲ್ಕು ವರ್ಷ ತರಬೇತಿ ಪಡೆಯಬೇಕು. ಮಕ್ಕಳು ರಾಜಕೀಯಕ್ಕೆ ಬರಬೇಕು ಎನ್ನುವುದು ನಮ್ಮ ಪ್ರಯತ್ನ.
ಜನರನ್ನು ಹೇಗೆ ಆಕರ್ಷಣೆ ಮಾಡುತ್ತಾರೆ, ಸಂಪರ್ಕ ಹೇಗೆ ಇಟ್ಟುಕೊಳ್ಳುತ್ತಾರೆ ಎಂಬುದು ಅವರಿಗೆ ಬಿಟ್ಟಿದ್ದು. ವಾರಕ್ಕೆ ಒಮ್ಮೆ ತರಬೇತಿ ನೀಡುತ್ತಿದ್ದೇವೆ ಎಂದರು.
Published by: G Hareeshkumar
First published: January 5, 2021, 7:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories