ಬೆಂಗಳೂರು: ಸರ್ಕಾರಿ ನೌಕರರ ಸಂಘದ ಬಳಿಕ ವೇತನ ಪರಿಷ್ಕರಣೆಗೆ KPTCL ನೌಕರರ ಸಂಘ ಪ್ರತಿಭಟನೆಗೆ ಮುಂದಾಗಿದೆ. ಕೊಟ್ಟ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟ ಅನಿರ್ದಿಷ್ಟವಾಧಿ ಮುಷ್ಕರ (Protest) ಮಾಡುವುದಾಗಿ ಸರ್ಕಾರಕ್ಕೆ (Government) ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 16ರಿಂದ ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗಿ ಮುಷ್ಕರ ನಡೆಸಲು ನೌಕರರ ಸಂಘ ನಿರ್ಧಾರ ಮಾಡಿದೆ. ಕೆಲಸಕ್ಕೆ ಸಂಪೂರ್ಣವಾಗಿ ಗೈರು ಹಾಜರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನೌಕರರು (KPTCL Employees) ಮುಂದಾಗಿರೋ ಕಾರಣ ವಿದ್ಯುತ್ ಪೂರೈಕೆಯಲ್ಲಿ (Electricity Supply) ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.
ಈಗಾಗಲೇ ನಾವು ಮುಷ್ಕರ ಮಾಡುವುದಾಗಿ ಇಲಾಖೆಗೆ ಮಾಹಿತಿ ಕೊಟ್ಟಿದ್ದರೂ ಸರ್ಕಾರದಿಂದ ನಮಗೆ ಯಾವುದೇ ಸಕರಾತ್ಮಕ ಸ್ಪಂದನೆ ಸಿಕ್ಕಿಲ್ಲ. ಆದರಿಂದ ನಾವು ಅನಿವಾರ್ಯವಾಗಿ ಮುಷ್ಕರ ಮಾಡುತ್ತಿದ್ದೇವೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟದ ಅಧ್ಯಕ್ಷ ಲಕ್ಷ್ಮಿಪತಿ ಹೇಳಿದ್ದಾರೆ.
ವೇತನ ಪರಿಷ್ಕರಣೆ ಆಗಿಲ್ಲ
ನಮಗೆ ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಅದು ಆಗಿಲ್ಲ. ಸರ್ಕಾರಿ ನೌಕರರಿಗೆ ಮಧ್ಯಂತರ ಶೇಕಡಾ 17ರಷ್ಟು ವೇತನ ಪರಿಷ್ಕರಣೆ ಮಾಡಿದ್ದಾರೆ. ನೌಕರರ ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡದಿರಲು ನಿರ್ಧಾರ ಮಾಡಲಾಗಿದೆ ಎಂದು ಲಕ್ಷ್ಮಿಪತಿ ಹೇಳಿದರು.
KPTCL ಹಾಗೂ ಎಸ್ಕಾಂಗಳ ನೌಕರರು/ಅಧಿಕಾರಿಗಳು ನ್ಯಾಯಯುತ ಬೇಡಿಕೆ ವೇತನ ಪರಿಷ್ಕರಣೆ ಆಗಲೇಬೇಕು. 01-04-2022 ರಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು ಎಂದು ನೌಕರರು ಆಗ್ರಹಿಸಿದ್ದಾರೆ.
ಕರ್ನಾಟಕ ಜನತೆಯಲ್ಲಿ ಕ್ಷಮೆ ಕೇಳಿದ ಲಕ್ಷ್ಮಿಪತಿ
ವೇತನ ಪರಿಷ್ಕರಣೆ ಆಗಿ ಸುಮಾರು 5 ವರ್ಷ ಮೀರಿ 6 ವರ್ಷ ಆಗಿದೆ. ನಾವು ತುಂಬಾ ಆರ್ಥಿಕ ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಆಗುವ ಪರಿಣಾಮಕ್ಕೆ ನಾವು ಯಾವುದೇ ರೀತಿ ಜವಾಬ್ದಾರಿ ಅಲ್ಲ. ಮುಷ್ಕರಿಂದಾಗಿ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತಿರೋದಕ್ಕೆ ನಾವು ಕರ್ನಾಟಕದ ಜನತೆಗೆ ಕ್ಷಮೆ ಕೇಳುತ್ತೇವೆ ಎಂದು ಲಕ್ಷ್ಮಿಪತಿ ಹೇಳಿದ್ದಾರೆ.
ಇದನ್ನೂ ಓದಿ: PM Modi: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಇಂದು ಲೋಕಾರ್ಪಣೆ, ಮೋದಿ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ
ಕೊರಟಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ
ತುಮಕೂರಿನ ಕೊರಟಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಕಾಂಗ್ರೆಸ್ನಲ್ಲಿ ದಲಿತ ಸಿಎಂ ರೇಸ್ ನಲ್ಲಿರುವ ಡಾ.ಜಿ.ಪರಮೇಶ್ವರ್ ಗೆ ಟಕ್ಕರ್ ಕೊಡಲು ಭಾರತೀಯ ಜನತಾ ಪಾರ್ಟಿ ಭರ್ಜರಿ ತಯಾರಿ ನಡೆಸಿದೆ. ಮಧ್ಯಾಹ್ನ 3 ಗಂಟೆ ಕೊರಟಗೆರೆ ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ ಬಿಜೆಪಿ ಯುವ ಸಮಾವೇಶ ಆಯೋಜಿಸಲಾಗಿದೆ.
ಟಿಕೆಟ್ ಆಕಾಂಕ್ಷಿ ಮಾಜಿ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ.. ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕೊರಟಗೆರೆಯಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ
ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿ ಗ್ರಾಮ ಪಂಚಾಯ್ತಿಯಿಂದಲ್ಲೂ ಸಾವಿರಾರು ಯುವಕರನ್ನು ಸೇರಿಸಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಮೂಲಕ ಯುವ ಮತದಾರರನ್ನು ಸೆಳೆಯಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಈಗಾಗಲೇ, ಕೊರಟಗೆರೆ ಪಟ್ಟಣದ ತುಂಬಾ ಫ್ಲೆಕ್ಸ್ ಬ್ಯಾನರ್ ಕಟ್ಟಲಾಗಿದೆ. ಜೊತೆಗೆ ಬೃಹತ್ ವೇದಿಕೆ ಕೂಡ ಸಜ್ಜಾಗಿದೆ. ರಾಜ್ಯದಲ್ಲಿ ಮೋದಿ ಕಮಾಲ್ ಮಾಡಿದ್ರೆ, ಕೊರಟಗೆರೆಯಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ ನಡೆಯಲಿದೆ..
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ