ಕೆಆರ್ಎಸ್ ಡ್ಯಾಂ ಬಿರುಕು ವಿಚಾರ; ಕುಮಾರಸ್ವಾಮಿಗೆ ಸಪೋರ್ಟ್ ಮಾಡಿ ಸುಮಲತಾಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ
ಕೆಆರ್ಎಸ್ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಅಲ್ಲಿಯ ಅಧಿಕಾರಿಗಳೇ ನನಗರ ಮಾಹಿತಿ ನೀಡಿದ್ದಾರೆ ಎಂದು ಹೇಳುವ ಮೂಲಕ ಪ್ರತಾಪ್ ಸಿಂಹ ಸಂಸದೆ ಸುಮಲತಾ ಅವರಿಗೆ ಟಾಂಗ್ ನೀಡಿದ್ದಾರೆ.
ಮೈಸೂರು (ಜುಲೈ 08); ಮಂಡ್ಯ ಲೋಕಸಭಾ ಚುನಾವಣೆಯಿಂದ ಈವರೆಗೆ ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರ ಸದ್ಯಕ್ಕಂತು ನಿಲ್ಲುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಈ ಇಬ್ಬರೂ ನಾಯಕರು ಯಾವುದಾದರೊಂದು ವಿಚಾರಕ್ಕೆ ಆಗಿಂದಾಗ್ಗೆ ಟೀಕಾಪ್ರಾರ ನಡೆಸುವುದು ಸಾಮಾನ್ಯ. ಇದೇ ರೀತಿ ಕೆಆರ್ಎಸ್ ಅಣೆಕಟ್ಟು ಬಿರುಕು ವಿಚಾರದಲ್ಲಿ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಸ್ವತಃ ಕೆಆರ್ಎಸ್ ಇಂಜಿನಿಯರ್ಗಳು ಸ್ಪಷ್ಟೀಕರಣ ನೀಡಿದರೂ ಅದನ್ನು ಒಪ್ಪಿಕೊಳ್ಳದ ಸಂಸದೆ ಸುಮಲತಾ ತನಿಖೆಗಾಗಿ ಒತ್ತಾಯಿಸಿ ದ್ದಾರೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಡ್ಯಾಂ ಸುರಕ್ಷಿತ ಎಂಬ ಹೇಳಿಕೆ ಕೊಡಿಸಿರುವ ಸಾಧ್ಯತೆ ಇರುತ್ತದೆ. ಹೀಗಾಗಿ ತಜ್ಞರ ತಂಡ ನೇಮಿಸಿ ಸಿಬಿಐ ತನಿಖೆ ನಡೆಸಿ ವರದಿ ನೀಡಲಿ ಎಂದು ಪಟ್ಟು ಹಿಡಿದಿದ್ದಾರೆ. ಇದೇ ವಿಚಾರವಾಗಿ ಈಗ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸುಮಲತಾ ನಡುವೆ ಮತ್ತೊಂದು ಸುತ್ತಿನ ವಾಗ್ವಾದ ಜಾರಿಯಾಗಿದೆ.
ಕೆಆರ್ಎಸ್ ಅಣೆಕಟ್ಟೆ ಬಿರುಕು ಸಂಬಂಧ ಮಂಡ್ಯದ ಸಂಸದೆ ಸುಮಲತಾ ವರ್ತನೆಯ ಬಗ್ಗೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಇದನ್ನೆ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಸಮಲತಾ ಅಭಿಮಾನಿಗಳು ಕುಮಾರಸ್ವಾಮಿಯನ್ನು ಇಲಿ ಎಂದು ಟ್ರೋಲ್ ಮಾಡುತ್ತಿದ್ದಾರೆ. ಈ ಟ್ರೋಲ್ ವೈರಲ್ ಆದ ಬೆನ್ನಿಗೆ ಇದೀಗ ಮೈಸೂರು ಸಂಸದ ಪ್ರತಾಪ ಸಿಂಹ ಕಣ ಪ್ರವೇಶಿಸಿದ್ದು, ಸುಮಲತಾಗೆ ಟಾಂಗ್ ಕೊಟ್ಟಿದ್ದಾರೆ. ಅಲ್ಲದೆ, ಮಾಜಿ ಸಿಎಂ ಕುಮಾರಸ್ವಾಮಿಯ ಪರ ಬ್ಯಾಟ್ ಮಾಡಿದ್ದಾರೆ.
ಕುಮಾರಸ್ವಾಮಿ ಪರ ಇಂದು ಮೈಸೂರಿನಲ್ಲಿ ಹೇಳಿಕೆ ನೀಡಿರುವ ಸಂಸದ ಪ್ರತಾಪ ಸಿಂಹ, "ಕೆಆರ್ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥಹದರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ" ಎಂದು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ಕೊಟ್ಟಿದ್ದಾರೆ.
ಅಲ್ಲದೆ, "ಕೆಆರ್ಎಸ್ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಅಲ್ಲಿಯ ಅಧಿಕಾರಿಗಳೇ ನನಗರ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಕೂಡ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನ ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದ್ದರು" ಎಂದು ಪರೋಕ್ಷವಾಗಿ ಸುಮಲತಾ ವಿರುದ್ದ ಮೈಸೂರು ಸಂಸದ ಪ್ರತಾಪ ಸಿಂಹ ಆರೋಪ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳಗಳಲ್ಲಿ ಸುಮಲತಾಗೆ ಅಡ್ಡಿ ವಿಚಾರದ ಬಗ್ಗೆಯೂ ಮಾತನಾಡಿರುವ ಪ್ರತಾಪ ಸಿಂಹ, "ಅವರ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಮಾಧ್ಯಮದವರಿಗೆ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರೇ ಏನ್ ಬೇಕಾದರೂ ಹೇಳಿಕೆ ಕೊಡಬಹುದು. ಯಾರು ಕೂಡ ಎಲ್ಲಿಯೂ ಅಡ್ಡಿ ಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ" ಎಂದು ಸುಮಲತಾ ಅವರಿಗೆ ಲೇವಡಿ ಮಾಡಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯು ತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ