ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಇಂದು ಮತ್ತು ನಾಳೆ ಕೂಡ ಕರಾವಳಿಯಲ್ಲಿ ಗುಡುಗು, ಮಿಂಚು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

news18-kannada
Updated:July 11, 2020, 4:53 PM IST
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು; ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಅಲ್ಲಲ್ಲಿ  ವ್ಯಾಪಾಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.


ಕಳೆದ ಒಂದು ವಾರದಿಂದ ಬೆಂಗಳೂರು ವ್ಯಾಪ್ತಿಯಲ್ಲಿ ಉತ್ತಮವಾದ ಸಾಧಾರಣ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾದರೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಿಂಚನವಾಗಿದೆ.

 





ಇಂದು ಮತ್ತು ನಾಳೆ ಕೂಡ ಕರಾವಳಿಯಲ್ಲಿ ಗುಡುಗು, ಮಿಂಚು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಗುಡ್ಡಗಳು ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಜಿಲ್ಲಾಡಳಿತ ರೆಡ್ ಅಲರ್ಟ್​ ಘೋಷಿಸಿದೆ.

ಇದನ್ನು ಓದಿ: Karnataka Dams Water Level: ಉಡುಪಿ, ಉತ್ತರ ಕನ್ನಡ, ಕೊಡಗಿನಲ್ಲಿ ಭಾರೀ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಹಾಸನ, ಬಾಗಲಕೋಟೆ, ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ, ನದಿಗಳು ತುಂಬಿ ಹರಿಯುತ್ತಿದ್ದು, ಕೆಲವೆಡೆ ಪ್ರವಾಹದ ಭೀತಿ ಕೂಡ ಎದುರಾಗಿದೆ.
Published by: HR Ramesh
First published: July 11, 2020, 4:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading