ಬೆಂಗಳೂರು(ಮಾ.02): ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಶೀತಲ ಸಮರ ನಡೆಯುತ್ತಲೇ ಇದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮತ್ತೆ ಆಗ್ರಹಿಸಿದ್ದಾರೆ. ಇವರ ಪ್ರತಿಭಟನೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿರುವ ಸಾರಿಗೆ ನೌಕರರು ಇಂದು ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಬಿಎಂಟಿಸಿ, ಕೆಎಸ್ಆರ್ಟಿಸಿ ಸೇವೆ ಸ್ತಬ್ಧ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ರಾಜ್ಯ ಸರ್ಕಾರವು ಈವರೆಗೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಿಲ್ಲ. ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಸಾರಿಗೆ ನೌಕರರು ಸತ್ಯಾಗ್ರಹ ಮತ್ತು ಸಮಾವೇಶಗಳನ್ನು ಮಾಡುತ್ತಲೇ ಇದ್ದಾರೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮದ ನೌಕರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಆರನೇ ವೇತನ ಆಯೋಗ ಸೇರಿದಂತೆ 9 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೌರ್ಯ ಸರ್ಕಲ್ನಲ್ಲಿ ಚಲೋ ನಡೆಸಲಿದ್ದಾರೆ. ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಇಂದು ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಡಿಸೆಂಬರ್ನಲ್ಲಿ ನಾಲ್ಕು ದಿನ ಮುಷ್ಕರ ಮಾಡಿದ್ದರು. ಮೂರು ತಿಂಗಳಾದರೂ ಸರ್ಕಾರವು ನೌಕರರ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಿಲ್ಲ. ಹೀಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದಿರುವ ಸಾರಿಗೆ ನೌಕರರು ಇಂದು ಸತ್ಯಾಗ್ರಹ ನಡೆಸಲಿದ್ದಾರೆ.
ಕಾಫಿನಾಡಿನಲ್ಲಿ ಸಕ್ರಿಯವಾಗಿದೆ ಹುಲಿ ಬೇಟೆಗಾರರ ಜಾಲ; ಹುಲಿ ಉಗುರು, ಹಲ್ಲು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅಂದರ್
ಸಾರಿಗೆ ನೌಕರರ ಬೇಡಿಕೆಗಳೇನು?
2020ರ ಡಿಸೆಂಬರ್ 14ರಿಂದ ಈವರೆಗೂ ಸಾರಿಗೆ ನೌಕರರ ಒಂದೇ ಒಂದು ಬೇಡಿಕೆಯೂ ಈಡೇರಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ