HOME » NEWS » State » KSRTC AND BMTC URGES KARNATAKA CM BS YEDIYURAPPA TO INCREASE BUS TICKET PRICE DUE TO FINANCIAL CRISIS SCT

ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಶಾಕ್ ನೀಡುತ್ತಾ ಯಡಿಯೂರಪ್ಪ ಸರ್ಕಾರ?

ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿಯಿಂದ ಶೇ. 18ರಷ್ಟು ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ, ಸಿಎಂ ಯಡಿಯೂರಪ್ಪನವರ ಜೊತೆಗಿನ ಸಭೆಯಲ್ಲಿ ಬಸ್ ಟಿಕೆಟ್ ದರದ ಏರಿಕೆ ಬಗ್ಗೆಯೂ ಗಂಭೀರ ಚರ್ಚೆಯನ್ನು ನಡೆಸಲಾಗಿದೆ.

news18-kannada
Updated:November 16, 2020, 11:37 AM IST
ಬಸ್ ಪ್ರಯಾಣಿಕರಿಗೆ ಟಿಕೆಟ್ ದರ ಏರಿಕೆಯ ಶಾಕ್ ನೀಡುತ್ತಾ ಯಡಿಯೂರಪ್ಪ ಸರ್ಕಾರ?
ಸಿಎಂ ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು (ನ. 16): ಕೊರೋನಾದಿಂದ ಲಾಕ್​ಡೌನ್ ಘೋಷಣೆಯಾದ ಬಳಿಕ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿಗೆ ಭಾರೀ ನಷ್ಟ ಉಂಟಾಗಿದೆ. ಆರ್ಥಿಕ ಸಂಕಷ್ಟದಿಂದ ಸಾರಿಗೆ ನಿಗಮಗಳಿಗೆ ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪನವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು ಬಸ್ ದರ ಏರಿಕೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಸ್ ದರ ಏರಿಕೆ ಮಾಡಿದರೆ ಸಾರಿಗೆ ನಿಗಮಗಳ ನಷ್ಟ ಸರಿದೂಗಿಸಬಹುದು. ಈ ಹಿನ್ನೆಲೆಯಲ್ಲಿ ದರ ಏರಿಕೆ ಮಾಡಿದರೆ ಒಳ್ಳೆಯದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ಬಸ್ ದರ ಏರಿಕೆ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಬಸ್ ದರ ಏರಿಕೆ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಕಾವೇರಿ ನಿವಾಸದಲ್ಲಿ ಚರ್ಚೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ ಆರ್ಥಿಕ ಸಂಕಷ್ಟದಿಂದ ಸಾರಿಗೆ ನೌಕರರಿಗೆ ವೇತನ ವಿಳಂಬವಾದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈಗಾಗಲೇ ಸಾರಿಗೆ ನೌಕರರಿಗೆ ವೇತನ ನೀಡುವುದು ವಿಳಂಬವಾಗಿದೆ. ಹೀಗಾಗಿ, ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ, ವೇತನ ಸಮಸ್ಯೆ ಸರಿದೂಗಿಸುವ ಬಗ್ಗೆ ಸಿಎಂ ಚರ್ಚೆ ನಡೆಸಿದ್ದಾರೆ.

ಸರ್ಕಾರದಿಂದ ರಸ್ತೆ ಸಾರಿಗೆ ನಿಗಮಗಳಿಗೆ 400ರಿಂದ 500 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ಬೇಡಿಕೆಯಿಡಲಾಗಿದೆ. ಈ ಹಿನ್ನೆಲೆಯಲ್ಲಿ ಅನುದಾನ ಬಿಡುಗಡೆ ಬಗ್ಗೆ ಸಿಎಂ ಯಡಿಯೂರಪ್ಪ ಸಮಾಲೋಚನೆ ನಡೆಸಿದ್ದಾರೆ.

ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿಯಿಂದ ಶೇ. 18ರಷ್ಟು ಟಿಕೆಟ್ ದರ ಏರಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ, ಇಂದಿನ ಸಭೆಯಲ್ಲಿ ಬಸ್ ಟಿಕೆಟ್ ದರದ ಏರಿಕೆ ಬಗ್ಗೆಯೂ ಗಂಭೀರ ಚರ್ಚೆಯನ್ನು ನಡೆಸಲಾಗಿದೆ.

ಆದರೆ, ಸಿಎಂ ಜೊತೆಗಿನ ಸಭೆ ಬಳಿಕ ಮಾಹಿತಿ ನೀಡಿರುವ ಸಚಿವ ಲಕ್ಷ್ಮಣ ಸವದಿ, ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಇವತ್ತು ಚರ್ಚೆ ಆಗಿಲ್ಲ. ಕೇವಲ ಅನುದಾನ ಬಿಡುಗಡೆ ಬಗ್ಗೆ ಮಾತ್ರ ನಿರ್ಧಾರ ಆಗಿದೆ. ಸದ್ಯಕ್ಕಂತೂ ಬಸ್ ಟಿಕೆಟ್ ದರ ಏರಿಕೆ ಇಲ್ಲ ಎಂದು ಬಸ್ ದರ ಏರಿಕೆ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ.
Published by: Sushma Chakre
First published: November 16, 2020, 11:37 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading