HOME » NEWS » State » KSRTC BMTC STRIKE KSRTC ALLOTTED NEW TICKET FARE LIST TO PRIVATE BUSES AS BMTC BUSES NOT RUNNING TODAY SCT

KSRTC BMTC Strike: ಬಿಎಂಟಿಸಿ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಬಸ್​ಗಳಿಗೆ ದರ ಪಟ್ಟಿ ಹಂಚಿಕೆ; ಹೆಚ್ಚು ಹಣ ಪಡೆಯದಂತೆ ತಾಕೀತು

ಬಿಎಂಟಿಸಿ ನಿಲ್ದಾಣದ ಒಳಗೆ ಬರುವ ಖಾಸಗಿ ಬಸ್​ಗಳಿಗೆ ದರ ಪಟ್ಟಿ ಹಂಚಿಕೆ ಮಾಡಲಾಗಿದೆ. ಬಿಎಂಟಿಸಿ ದರವನ್ನು ಮೀರಿ ಖಾಸಗಿಯವರು ಹಣ ಪಡೆದರೆ ದೂರು ದಾಖಲು ಮಾಡಿಕೊಂಡು, ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

news18-kannada
Updated:April 7, 2021, 9:19 AM IST
KSRTC BMTC Strike: ಬಿಎಂಟಿಸಿ ನೌಕರರ ಮುಷ್ಕರ ಹಿನ್ನೆಲೆ ಖಾಸಗಿ ಬಸ್​ಗಳಿಗೆ ದರ ಪಟ್ಟಿ ಹಂಚಿಕೆ; ಹೆಚ್ಚು ಹಣ ಪಡೆಯದಂತೆ ತಾಕೀತು
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಏ. 7): ಇಂದಿನಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಶಾಂತಿನಗರದ ಸುತ್ತಮುತ್ತ ಪೊಲೀಸರ ಭದ್ರತೆ ಒದಗಿಸಲಾಗಿದೆ. ಇನ್ನು, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಖಾಸಗಿ ಬಸ್​ಗಳ ಸಂಚಾರಕ್ಕೆ ನಗರದಲ್ಲಿ ವ್ಯವಸ್ಥೆ ಮಾಡಿಕೊಡಲಾಗಿದೆ. ಬೆಂಗಳೂರಿನಲ್ಲಿ ಇಂದು ಬಿಎಂಟಿಸಿ ಬಸ್​ಗಳ ಬದಲಾಗಿ ಮಿನಿ ಬಸ್​ಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರಯಾಣಿಕರಿಂದ ಹೆಚ್ಚಿನ ಮೊತ್ತ ಸಂಗ್ರಹಿಸುತ್ತಿದ್ದ ಮಿನಿ ಬಸ್​ಗಳಿಗೆ ದರ ಪಟ್ಟಿ ಹಂಚಿಕೆ ಮಾಡಲಾಗಿದ್ದು, ಬಿಎಂಟಿಸಿಯ ಟಿಕೆಟ್ ದರವನ್ನೇ ಪಡೆಯಬೇಕೆಂದು ಆದೇಶಿಸಲಾಗಿದೆ.

1 ಸಿಎಆರ್ ತುಕಡಿ, 3 ಕೆಎಸ್​ಆರ್​ಪಿ ತುಕಡಿ, 60ಕ್ಕೂ ಹೆಚ್ಚು ಸಿವಿಲ್ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಅಹಿತಕರ ಘಟನೆಗಳಿಗೆ ಬ್ರೇಕ್ ಹಾಕೋ ನಿಟ್ಟಿನಲ್ಲಿ ಭದ್ರತೆ ಒದಗಿಸಲಾಗಿದೆ. 144 ಸೆಕ್ಷನ್ ಜಾರಿ ಇರುವುದರಿಂದ ಅಹಿತಕರ ಘಟನೆಗೆ ಸ್ವಲ್ಪ ಮಟ್ಟಿಗೆ ಬ್ರೇಕ್‌ ಹಾಕಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಲ್ಲಿ ಮುಷ್ಕರಕ್ಕೆ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಖಾಸಗಿ ಬಸ್ ಗಳಿಂದ ಹೆಚ್ಚು ಹಣ ವಸೂಲಿ ಆರೋಪ ಕೇಳಿಬಂದಿದ್ದರಿಂದ ಬಿಎಂಟಿಸಿ ದರ ಎಷ್ಟಿದೆಯೋ ಅಷ್ಟೇ ಪಡೆಯಬೇಕು ಎಂದು ಕೆ ಎಸ್ ಆರ್ ಟಿಸಿ ಅಧಿಕಾರಿಗಳಿಂದ ಖಾಸಗಿ ಬಸ್ ಚಾಲಕರಿಗೆ ಸೂಚನೆ ನೀಡಲಾಗಿದೆ. ಬಿಎಂಟಿಸಿ ನಿಲ್ದಾಣದ ಒಳಗೆ ಬರುವ ಖಾಸಗಿ ಬಸ್​ಗಳಿಗೆ ದರ ಪಟ್ಟಿ ಹಂಚಿಕೆ ಮಾಡಲಾಗಿದೆ. ಬಿಎಂಟಿಸಿ ದರವನ್ನು ಮೀರಿ ಖಾಸಗಿಯವರು ಹಣ ಪಡೆದರೆ ದೂರು ದಾಖಲು ಮಾಡಿಕೊಂಡು, ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದಿರುವ ಸಾರಿಗೆ ನೌಕರರು ಇಂದಿನಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ಬಸ್​ ಮತ್ತು ಕ್ಯಾಬ್​​ಗಳನ್ನು ಹೆಚ್ಚುವರಿಯಾಗಿ ಸಾರಿಗೆ ಇಲಾಖೆ ರಸ್ತೆಗಿಳಿಸಿದೆ. ಈ ಮೂಲಕ ಸಾರಿಗೆ ನೌಕರರ ಸವಾಲಿಗೆ ಸವಾಲೆಸೆದ KSRTC ರಾಜ್ಯದ ಎಲ್ಲಾ ಸಾರಿಗೆ ನೌಕರರ ರಜೆಗಳನ್ನು ರದ್ದು ಮಾಡಿದೆ. ವಾರದ ರಜೆ, ತುರ್ತು ರಜೆ ಹೊರತುಪಡಿಸಿ ನೌಕರರ ಎಲ್ಲ ರಜೆಗಳನ್ನು ರದ್ದು ಮಾಡಿದೆ. ಅನಗತ್ಯ ರಜೆ ಹಾಕಿದರೆ ವೇತನ ಕಡಿತಗೊಳಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಸಿದೆ. ಇಂದು ಅನಗತ್ಯವಾಗಿ ರಜೆ ಹಾಕಿದರೆ ವೇತನ ನೀಡುವುದಿಲ್ಲ ಎಂದು ಕೆಎಸ್​ಆರ್​ಟಿಸಿ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: KSRTC Workers Strike - ಮುಷ್ಕರ ಎಫೆಕ್ಟ್ - ಖಾಸಗಿ ಬಸ್​ಗಳು ಬಂದರೂ ನಿಲ್ದಾಣಕ್ಕೆ ಬಾರದ ಜನರು

ಸಾರಿಗೆ ನೌಕರರ ಮುಷ್ಕರ ಸಹಜ ಸ್ಥಿತಿಗೆ ಬರುವರಿಗೆ ಈ ಸುತ್ತೋಲೆ ಅನ್ವಯವಾಗಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಅನಗತ್ಯವಾಗಿ ರಜೆ ಹಾಕಿದರೆ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ ಕುರಿತು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.

ಸಾರಿಗೆ ನೌಕರರ 9 ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಸರ್ಕಾರ ಆ ಬೇಡಿಕೆಗಳನ್ನು ಇನ್ನೂ ಈಡೇರಿಸದ ಹಿನ್ನೆಲೆಯಲ್ಲಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಮೂರ್ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.ಸಾರಿಗೆ ನೌಕರರಿಗೆ ಸರ್ಕಾರ ಕೊಟ್ಟ 9 ಭರವಸೆಗಳು:

1) ನಿಗಮದ ನೌಕರರಿಗೆ ಆರೋಗ್ಯ ಭಾಗ್ಯ ವಿಮಾ ಯೋಜನೆ.

2) ಕೋವಿಡ್ 19 ನಿಂದ ಸಾವಿಗೀಡಾದ್ರೆ 30 ಲಕ್ಷ ಪರಿಹಾರ‌.

3) ಅಂತರ್ ನಿಗಮ ವರ್ಗಾವಣೆಗೆ ಸೂಕ್ತ ನೀತಿ ರಚನೆ.

4) ತರಬೇತಿ ನೌಕರರ ಅವಧಿಯನ್ನ 2 ವರ್ಷದಿಂದ 1 ವರ್ಷಕ್ಕೆ ಇಳಿಕೆ.

5) ನಿಗಮಗಳಲ್ಲಿ ಮಾನವ ಸಂಪನ್ಮೂಲ ವ್ಯವಸ್ಥೆ ಜಾರಿಗೆ ತರುವುದು.

6) ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಭತ್ಯೆ ನೀಡಲು ತೀರ್ಮಾನ.

7) ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆ ಜಾರಿ.

8) ಎನ್ಐ ಎನ್ ಐಎನ್ಸಿ ಪದ್ದತಿ ಬದಲಾಗಿ ಪರ್ಯಾಯ ವ್ಯವಸ್ಥೆ ಜಾರಿ.

9) ವೇತನ ಪರಿಷ್ಕರಣೆ ಸಂಬಂಧಿಸಿದಂತೆ 6ನೇ ವೇತನ ಆಯೋಗ ಶಿಫಾರಸು ಪರಿಗಣನೆ ( ಸರ್ಕಾರದ ಆರ್ಥಿಕ ಅಂಶ ಪರಿಗಣಿಸಿ ತೀರ್ಮಾನ)
Youtube Video

ಇಂದು ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿವೆ.  ಸಾರ್ವಜನಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ರೈಲುಗಳನ್ನ ಓಡಿಸಲು ಮೆಟ್ರೋ ನಿಗಮ ಮುಂದಾಗಿದೆ. ಸದ್ಯ ನಿತ್ಯ ನೇರಳೆ ಮಾರ್ಗದಲ್ಲಿ 122 ಟ್ರಿಪ್ ಹಾಗೂ ಹಸಿರು ಮಾರ್ಗದಲ್ಲಿ 126 ಟ್ರಿಪ್ ಸೇರಿದಂತೆ ಒಟ್ಟು 248 ಟ್ರಿಪ್ ಮೆಟ್ರೋ ರೈಲು ಸಂಚಾರವಿದೆ. ಸದ್ಯ ಬೆಳಗ್ಗೆ ಹಾಗೂ ಸಂಜೆ ಪ್ರತಿ 5 ನಿಮಿಷಕ್ಕೊಂದು ರೈಲು ಸಂಚಾರ. ಹಾಗೂ ಮಧ್ಯಾಹ್ನ ಪ್ರತಿ 10 ನಿಮಿಷಕ್ಕೊಂದು ರೈಲು ಸಂಚಾರ ಇದೆ. ಆದರೆ ಇಂದಿನಿಂದ ಪ್ರತಿ 5 ನಿಮಿಷಕ್ಕೊಂದು ರೈಲು ಸಂಚಾರ ಇರಲಿದೆ. ಪ್ರಯಾಣಿಕರ ದಟ್ಟಣೆಗೆ ಅನುಸಾರವಾಗಿ ರೈಲು ಕಾರ್ಯಾಚರಣೆ ಮಾಡಲು ಮೆಟ್ರೋ ನಿಗಮ ನಿರ್ಧಾರ ಮಾಡಿದೆ. ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಮೆಟ್ರೋ ರೈಲು ಓಡಾಡಲಿದೆ ಎಂದು ಬಿಎಂಆರ್​ಸಿಎಲ್​ ಮಾಹಿತಿ ನೀಡಿದೆ.
Published by: Sushma Chakre
First published: April 7, 2021, 9:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories