ಬೆಂಗಳೂರು(ಮಾ.25): ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸುಮಾರು 5 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.
ಗಾಯಗೊಂಡಿರುವವರಲ್ಲಿ ಓರ್ವ ಪ್ರಯಾಣಿಕನಿಗೆ ಎರಡೂ ಕಾಲುಗಳೂ ಕಟ್ ಆಗಿವೆ. ಬಸ್ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು ಅವರಿಗೆ ನೆಲಮಂಗಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನುಳಿದ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಫಾತಕ್ಕೀಡಾದ ಬಸ್ ಗದಗದ ರೋಣದಿಂದ ಬೆಂಗಳೂರಿಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬಸ್ನಲ್ಲಿ ಸುಮಾರು 20 ಜನ ಪ್ರಯಾಣಿಕರು ಇದ್ದರು.
ನದಿಜೋಡಣೆ ಯೋಜನೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಬಲ ವಿರೋಧ; ಹೋರಾಟಕ್ಕೆ ಕೈ ಜೋಡಿಸಿದ ಪರಿಸರ ತಜ್ಞರು
ಬಸ್ ಚಾಲಕ ರಾಘವೇಂದ್ರ ಗಜಕೋಲ್, ನಿರ್ವಾಹಕ ಅಡವಿಯಪ್ಪ, ಹೆಚ್ಚುವರಿ ಚಾಲಕ ಕೆಎಸ್ ಕುಲಕರ್ಣಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ