ಸಾರಿಗೆ ನೌಕರರಿಂದ ಇಂದು ಮತ್ತೆ ಪ್ರತಿಭಟನೆ; ಬಸ್​ ಸಂಚಾರದಲ್ಲಿ ವ್ಯತ್ಯಯವಿಲ್ಲ

KSRTC BMTC employees Strike: ಸಾರಿಗೆ ನಿಗಮದ ವಿರುದ್ಧ ಮತ್ತೆ ತಿರುಗಿ ಬೀಳಲು‌ ಸಜ್ಜಾದ ಸಾರಿಗೆ ನೌಕರರು ಇಂದು ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ. ಇಂದು ಪ್ರತಿಭಟನೆಯಿದ್ದರೂ ಎಂದಿನಂತೆ ಬಸ್ಸುಗಳು ಸಂಚಾರ ಮಾಡಲಿವೆ.

ಕೆಎಸ್​ಆರ್​ಟಿಸಿ

ಕೆಎಸ್​ಆರ್​ಟಿಸಿ

  • Share this:
ಬೆಂಗಳೂರು (ಫೆ. 10): ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಮತ್ತೆ ಸಾರಿಗೆ ಸಿಬ್ಬಂದಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಸಾರಿಗೆ ನಿಗಮದ ವಿರುದ್ಧ ತಿರುಗಿಬೀಳಲು‌ ಸಜ್ಜಾದ ಸಾರಿಗೆ ನೌಕರರು ಇಂದು ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ನಡೆಸಲಿದ್ದಾರೆ. ಬಿಎಂಟಿಸಿ ಕೇಂದ್ರ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಜಂಟಿ ಪ್ರತಿಭಟನೆ ನಡೆಸಲಾಗುವುದು. ಈ ಹಿಂದೆ ಕೇವಲ ಒಂದೇ ಒಂದು ಸಂಘಟನೆ ಮಾತ್ರ ಪ್ರತಿಭಟನೆ ನಡೆಸಿತ್ತು. ಆದರೆ, ಈಗ ಎಲ್ಲ ಸಂಘಟನೆಗಳು ಸಾರಿಗೆ ನಿಗಮದ ವಿರುದ್ದ ಒಂದಾಗಿ ಪ್ರತಿಭಟಿಸಲು ನಿರ್ಧಾರ ಮಾಡಿವೆ.

ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಇಂದು ಸಾರಿಗೆ ನೌಕರರ ಪ್ರತಿಭಟನೆ ನಡೆಯಲಿದ್ದು, ಅರ್ಧ ವೇತನ ಪಾವತಿ, ಅಧಿಕಾರಿಗಳ ಕಿರುಕುಳ, ರಜೆಗಳ ಸಮಸ್ಯೆ ವಿರುದ್ಧ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸಲಿದ್ದಾರೆ. ಸಾರಿಗೆ ನೌಕರರು ರಜೆ, ಕೆಲಸ ಮುಗಿಸಿಕೊಂಡವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಪ್ರತಿಭಟನೆಯಿದ್ದರೂ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಎಂದಿನಂತೆ ಬಸ್ಸುಗಳು ಸಂಚಾರ ಮಾಡಲಿವೆ.

ಇದನ್ನೂ ಓದಿ: Sringeri Rape: ಶೃಂಗೇರಿ ಅಪ್ತಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ 5 ಆರೋಪಿಗಳ ಬಂಧನ

ಇಂದು ಮಧ್ಯಾಹ್ನ 12 ಗಂಟೆಗೆ ಬಿಎಂಟಿಸಿ ಕೇಂದ್ರ ಕಚೇರಿ ಎದುರು ಕಾರ್ಮಿಕ ಸಂಘಟನೆಗಳ ಜಂಟಿ ಪ್ರತಿಭಟನೆ ನಡೆಯಲಿದೆ. ಅರ್ಧವೇತನ ಪಾವತಿ, ಅಧಿಕಾರಿಗಳ ಕಿರುಕುಳ, ರಜೆಗಳ ಸಮಸ್ಯೆ ವಿರುದ್ದ ಸಾರಿಗೆ ಸಿಬ್ಬಂದಿ ಪ್ರತಿಭಟನೆ ನಡೆಸಲಿದ್ದಾರೆ. ಇತ್ತೀಚೆಗೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಸಾರಿಗೆ ನೌಕರರು ಮತ್ತೆ ಪ್ರತಿಭಟನೆಯ ಹಾದಿ ತುಳಿಯಲಿದ್ದಾರೆ.

ನಿಗದಿತ ಸಮಯಕ್ಕೆ ಮಾಸಿಕ ವೇತನ ಪಾವತಿಸಬೇಕು ಮತ್ತು ಬಾಕಿ ವೇತನ ತಕ್ಷಣ ಬಿಡುಗಡೆಗೊಳಿಸಬೇಕು. ಷರತ್ತುಗಳಿಲ್ಲದೆ ಕಡ್ಡಾಯವಾಗಿ ವಾರದ ರಜೆ ನೀಡಬೇಕು. ಕಡಿತ ಮಾಡಿದ ರಜೆಗಳನ್ನು ವಾಪಾಸ್ ಕೊಡಬೇಕು. ಪೂರ್ಣ ಪ್ರಮಾಣದಲ್ಲಿ 4 ಪಾಳಿಗಳಲ್ಲಿ ಬಸ್ ಕಾರ್ಯಾಚರಣೆ ಮಾಡಬೇಕು. ಮಹಿಳಾ ಕಾರ್ಮಿಕರಿಗೆ ಮೊದಲ ಮತ್ತು ಸಾಮಾನ್ಯ ಪಾಳಿಯ ಕೆಲಸಕ್ಕೆ ಆದ್ಯತೆ ನೀಡಬೇಕು. ಗುತ್ತಿಗೆ ಆಧಾರದಡಿ ಎಲೆಕ್ಟ್ರಿಕ್ ಬಸ್​ ಪಡೆಯುವ ಯೋಜನೆಯನ್ನು ಕೈಬಿಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಸಾರಿಗೆ ನೌಕರರು ಸರ್ಕಾರ ಮುಂದಿಟ್ಟಿದ್ದಾರೆ.

ಪ್ರತಿಭಟನೆ ವೇಳೆ ಬಸ್​ ಸೇವೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ತುರ್ತು ಸಂದರ್ಭವನ್ನು ಹೊರತುಪಡಿಸಿ ಸಾರಿಗೆ ನೌಕರರಿಗೆ ಇಂದು ರಜೆ ನೀಡಬಾರದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Published by:Sushma Chakre
First published: