• Home
  • »
  • News
  • »
  • state
  • »
  • BPL Card Holders: ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಣೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

BPL Card Holders: ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಣೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಸಚಿವ ಕೋಟ ಶ್ರೀನಿವಾಸ ಪೂಜಾರಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಜ. 1 ರಿಂದ ಕುಚಲಕ್ಕಿ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಬೆಂಗಳೂರು (ನ.10): ಕರ್ನಾಟಕದಲ್ಲಿ ಬಿಪಿಎಲ್​ ಕಾರ್ಡ್​ದಾರರಿಗೆ (BPL Card Holders) ಆ ಭಾಗಕ್ಕೆ ತಕ್ಕಂತೆ ಅಕ್ಕಿಯನ್ನು ವಿತರಣೆಯಲ್ಲಿ (Rice Distribution) ಮಾಡಲಾಗುತ್ತದೆ. ಇದೀಗ ದಕ್ಷಿಣ ಕನ್ನಡ (), ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಜ. 1 ರಿಂದ ಕುಚಲಕ್ಕಿ (Kuchalakki) ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ (Minister Kota Srinivas Poojary) ತಿಳಿಸಿದರು. 


ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಕೇಂದ್ರ


BPL ಅಕ್ಕಿ ವಿತರಣೆ ಬಗ್ಗೆ ಮಾತಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಲ್ ಕುಚಲಕ್ಕಿ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಡಿ. 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಕೇಂದ್ರ ತೆರೆಯಲಾಗುವುದು. ₹ 2,540 ಬೆಂಬಲ ಬೆಲೆ ನೀಡಿ ಭತ್ತ ಖರೀದಿಸಿ ಸ್ಥಳೀಯವಾಗಿ ಸಂಸ್ಕರಿಸಲು ಉದ್ದೇಶಿಸಲಾಗಿದೆ. ಕೆಂಪು ಕುಚಲಕ್ಕಿಯ ಭತ್ತವನ್ನೇ ಖರೀದಿ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ.


Illegal BPL Card holders fined 1 crore in Mysuru
ಸಾಂದರ್ಭಿಕ ಚಿತ್ರ


5 ಕೆ.ಜಿ ಕುಚಲಕ್ಕಿ ಪಡಿತರ ವಿತರಣೆ


5 ಕೆ.ಜಿ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿರುವ ಕುಚಲಕ್ಕಿಯ ಭತ್ತ ವರ್ಷ ಪೂರ್ತಿ ಸಿಗುವುದು ಕಷ್ಟ. ಹೀಗಾಗಿ ರಾಜ್ಯದ ಬೇರೆ ಜಿಲ್ಲೆಗಳಿಂದ ಭತ್ತ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.


ನಾವು ಊಟ ಮಾಡುವ ಕುಚಲಕ್ಕಿ


ನಾವು ಊಟ ಮಾಡುವ ಕುಚಲಕ್ಕಿಯನ್ನು ಪಡಿತರ ಮೂಲಕ ಕೊಡಬೇಕು ಎಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇಟ್ಟಿದ್ದರು. ಬೇರೆ ಬೇರೆ ಕಾರಣಗಳಿಂದ ಜಾರಿ ಸಾಧ್ಯವಾಗಿರಲಿಲ್ಲ. ಅವರ ಬೇಡಿಕೆ ಗಮನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಥಳೀಯ ಕುಚಲಕ್ಕಿಯನ್ನು ವಿತರಿಸುವ ಭರವಸೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು. ಖರೀದಿಸಿದ ಭತ್ತಕ್ಕೆ ಹೆಚ್ಚುವರಿ ಮೊತ್ತವನ್ನು ಸರ್ಕಾರ ಕೊಡಲಿದೆ ಎಂದರು.


Shivaramegowda: ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ ಹೆಸರು ದುರ್ಬಳಕೆ; ಕೋಟಿ ಕೋಟಿ ಗುಳುಂ!?


ಪ್ರತಿ ಕ್ವಿಂಟಲ್‌ಗೆ ₹500 ಹೆಚ್ಚುವರಿ ಬೆಲೆ


ನಾವು ಕುಚಲಕ್ಕಿ ಮಾಡುವ ತಳಿಗಳಾದ ಜಯ, ಅಭಿಲಾಷ ಜ್ಯೋತಿ, ಎಂಒ 4ಗೆ ಬೆಂಬಲ ಬೆಲೆ ಘೋಷಿಸಿದ್ದೇವೆ. 13 ಲಕ್ಷ ಕ್ವಿಂಟಲ್ ಭತ್ತ ಖರೀದಿಯ ಗುರಿ ಇದೆ. ಈ ಪೈಕಿ, 8.50 ಲಕ್ಷ ಕ್ವಿಂಟಲ್ ಭತ್ತ ಬರುವ ಅಂದಾಜಿದ್ದು, ಅದನ್ನು ವಿತರಿಸಲಾಗುವುದು. ಕೇಂದ್ರ ಸರ್ಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದ ಕಾರಣ, ಪ್ರತಿ ಕ್ವಿಂಟಲ್‌ಗೆ ₹ 500 ಹೆಚ್ಚುವರಿ ಬೆಲೆ ಕೊಡಲಾಗುವುದು. ಇದನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಇದಕ್ಕೆ ₹ 132 ಕೋಟಿ ಆಗುವ ಅಂದಾಜಿದೆ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ಕೃಷಿ ಇಲಾಖೆ ಜೊತೆಗೆ ಸಭೆ ಮಾಡಿದ್ದೇನೆ ಎಂದು ಸಚಿವ ಕೋಟಾ ಶ್ರೀನಿವಾಸ ಹೇಳಿದ್ದಾರೆ.


4455 ಅರ್ಜಿಗಳನ್ನು ಹಿಂಪಡೆಯಲಾಗಿದೆ


ಎಪಿಎಲ್‌ ಪಡಿತರ ಚೀಟಿ ಕೋರಿ ಸಲ್ಲಿಕೆಯಾದ 1,58,305 ಅರ್ಜಿಗಳ ಪೈಕಿ 4455 ಅರ್ಜಿಗಳನ್ನು ಹಿಂಪಡೆಯಲಾಗಿದೆ. 31,484 ಅರ್ಜಿಗಳು ಸ್ವೀಕೃತಗೊಂಡಿದ್ದು 1,09,985 ಅರ್ಜಿಗಳು ಅನುಮೋದನೆಗೊಂಡಿವೆ. 9359 ತಿರಸ್ಕೃತಗೊಂಡಿದ್ದು, 1,19,344 ಅರ್ಜಿಗಳು ವಿಲೇವಾರಿಯಾಗಿವೆ. 38954 ಅರ್ಜಿಗಳು ವಿಲೇವಾರಿಯಾಗಬೇಕಿದೆ. ಅರ್ಹತೆ ಇಲ್ಲದವರು ಬಿಪಿಎಲ್‌ ಕಾರ್ಡ್‌ಗಳನ್ನು ಪಡೆದು ಇಲಾಖೆಗೆ ವಂಚಿಸಿದ್ದರು.


ಇದನ್ನೂ ಓದಿ: Tipu Jayanti: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ; ಪ್ರಮೋದ್ ಮುತಾಲಿಕ್ ಸೇರಿ ಅನೇಕರ ಬಂಧನ


ಕೆಲವರು ಅನಧಿಕೃತವಾಗಿ ಪಡಿತರ ಚೀಟಿಗಳನ್ನು ಹೊಂದಿದ್ದು, ಪಡಿತರ ಆಹಾರ ಧಾನ್ಯಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ನಿಗದಿತ ಮಾನದಂಡ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ 3,30,024 ಪಡಿತರ ಕಾರ್ಡ್‌ಗಳನ್ನು ಈ ಹಿಂದೆ ಆಹಾರ ಇಲಾಖೆ ರದ್ದು ಮಾಡಿತ್ತು.

Published by:ಪಾವನ ಎಚ್ ಎಸ್
First published: