ಇಂದಿನಿಂದ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ

5 ದಿನಗಳ ಕಾಲ ವಿಜೃಂಭಣೆಯಿಂದ ನಡೆಯುವ ಈ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮೇಳ, ಸಾಹಿತ್ಯ ಸಮ್ಮೇಳನ, ಸರ್ವ ಧರ್ಮ ಸಮ್ಮೇಳನ ಹೀಗೆ ಹಲವು ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

Latha CG | news18-kannada
Updated:November 22, 2019, 7:42 AM IST
ಇಂದಿನಿಂದ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ
ಲಕ್ಷದೀಪೋತ್ಸವ
  • Share this:
ರಾಜ್ಯದ ಹೆಸರಾಂತ ಪುಣ್ಯಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದಲ್ಲಿ ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ ನಡೆಯಲಿದೆ. ಕೇವಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ವಿವಿಧ ವಿಚಾರಗಳ ಕುರಿತು ಮಾಹಿತಿ ಉಣ ಬಡಿಸುವ ಕಾರ್ಯಕ್ರಮವಾಗಿಯೂ ಈ ಲಕ್ಷ ದೀಪೋತ್ಸವ ಮೂಡಿ ಬಂದಿದೆ.

ಕ್ಷೇತ್ರದ ಆಡಳಿತವನ್ನು ಸುಮಾರು 80 ವರ್ಷಗಳ ಹಿಂದೆ ದಿ. ಮಂಜಯ್ಯ ಹೆಗಡೆ ವಹಿಸಿಕೊಂಡ ಬಳಿಕ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವದ ಚಿತ್ರಣವೇ ಬದಲಾಗಿದೆ. ಕೇವಲ ಜನ-ಜಾತ್ರೆಗೆ ಲಕ್ಷ ದೀಪೋತ್ಸವ ಸೀಮಿತವಾಗದೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ವಿವಿಧ ರೀತಿಯ ಮನೋರಂಜನೆಯ ಜೊತೆಗೆ ಹಲವು ವಿಚಾರಗಳ ಕುರಿತು ಮಾಹಿತಿಯನ್ನೂ ನೀಡುವ ವ್ಯವಸ್ಥೆ ಪ್ರಾರಂಭವಾಗಿದೆ.

ಉಪಚುನಾವಣೆ ವಾಸ್ತವ ವರದಿ | ಬಿಜೆಪಿ ಪ್ರಬಲವಾಗಿಲ್ಲದ ಚಿಕ್ಕಬಳ್ಳಾಪುರದಲ್ಲಿ ತ್ರಿಕೋನ ಸ್ಪರ್ಧೆ

5 ದಿನಗಳ ಕಾಲ ವಿಜೃಂಭಣೆಯಿಂದ ನಡೆಯುವ ಈ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮೇಳ, ಸಾಹಿತ್ಯ ಸಮ್ಮೇಳನ, ಸರ್ವ ಧರ್ಮ ಸಮ್ಮೇಳನ ಹೀಗೆ ಹಲವು ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ಈ ಬಾರಿ ಸರ್ವಧರ್ಮ ಸಮ್ಮೇಳನವನ್ನು ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಲಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ ಖ್ಯಾತ ಸಾಹಿತಿಗಳು ಭಾಗವಹಿಸಲಿದ್ದಾರೆ. ಲಕ್ಷದೀಪೋತ್ಸವದ ಹಿನ್ನಲೆಯಲ್ಲಿ ಕ್ಷೇತ್ರವನ್ನು ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಸಜ್ಜುಗೊಳಿಸಲಾಗಿದೆ. ಲಕ್ಷದೀಪೋತ್ಸವದ ವಿಶೇಷ ಆಕರ್ಷಣೆಯಾಗಿ ಮಂಜುನಾಥ ಸ್ವಾಮಿಯ ಉತ್ಸವ ಮೂರ್ತಿಯು ಐದು ದಿನಗಳ ಕಾಲವೂ ಧರ್ಮಸ್ಥಳದ ವಿವಿಧ ಕಟ್ಟೆಗಳಿಗೆ ತೆರಳಿ ಭಕ್ತರಿಗೆ ದರ್ಶನವನ್ನು ನೀಡುತ್ತಾನೆ.

ಸಿದ್ದರಾಮಯ್ಯನವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ; ಸಚಿವ ಶ್ರೀರಾಮುಲು

First published: November 22, 2019, 7:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading