ರಾಜಧಾನಿ ಬೆಂಗಳೂರಿನ (Bengaluru) ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ (Idgah Maidana, Chamarajapet) ನಡುವೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಿಚ್ಚು ಹತ್ತಿಕೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣಿಸುತ್ತಿವೆ. ಒತ್ತುವರಿ ಆರೋಪದ ಹಿನ್ನೆಲೆ ಬೆಂಗಳೂರಿನ ವಿಜಯನಗರದಲ್ಲಿರುವ (Vijayanagara) ಮಸ್ಜಿದ್ ಎ ಅಲ್ ಖುಬ ಮಸೀದಿಯನ್ನು (Mosque) ಕೆಡವಲು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬಿಬಿಎಂಪಿಗೆ (BBMP) ನೋಟಿಸ್ ನೀಡಲಾಗಿದೆ. ಈ ಆದೇಶದ ಬೆನ್ನಲ್ಲೇ ರಾಜಧಾನಿಯಲ್ಲಿ ಈ ವಿಚಾರ ಮತ್ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಸೂಚನೆ ಬಂದ ಹಿನ್ನೆಲೆ ಮಸೀದಿ ಕೆಡುವದರ ಕುರಿತು ಬಿಬಿಎಂಪಿ ನೋಟಿಸ್ (BBMP Notice) ನೀಡಿದೆ. ಸಾರ್ವಜನಿಕರ ಓಡಾಟಕ್ಕೆ ಮೀಸಲಿಟ್ಟ ಐದು ಅಡಿ ಪ್ಯಾಸೇಜ್ (Passage) ಒತ್ತುವರಿ ಮಾಡ್ಕೊಂಡು ಮಸೀದಿ ಕಟ್ಟಲಾಗಿದೆ ಎಂದು ನೋಟಿಸ್ ನೀಡಲಾಗಿದೆ.
ಈಗ ಒತ್ತುವರಿ ಮಾಡಿ ನಿರ್ಮಿಸಿರುವ ಭಾಗವನ್ನ ತೆರವು ಮಾಡಿ ಬಿಬಿಎಂಪಿ ವಶಕ್ಕೆ ಪಡೆಯಲು ಪ್ರಾದೇಶಿಕ ಆಯುಕ್ತರು ಆದೇಶ ಮಾಡಿದ್ದಾರೆ. ಆದೇಶದ ಅನುಸಾರ ಬಿಬಿಎಂಪಿ ಮಸೀದಿಗೆ ಡೆಮಾಲಿಷನ್ ಆರ್ಡರ್ ನೀಡಿದೆ.
ಮಸೀದಿಯ ಮುಖ್ಯಸ್ಥರಿಗೆ ಬಿಬಿಎಂಪಿ ನೋಟಿಸ್
ಒತ್ತುವರಿ ಮಾಡಲಾಗಿದೆ ಎಂಬ ಭಾಗವನ್ನ ತೆರವು ಮಾಡಲು ಮಸ್ಜೀದ್ ಎ ಅಲ್ ಖುಬ ಮಸೀದಿಯ ಮುಖ್ಯಸ್ಥರಿಗೆ ಬಿಬಿಎಂಪಿ ನೋಟೀಸ್ ಜಾರಿ ಮಾಡಿದೆ.
ನಿವೇಶನ ಸಂಖ್ಯೆ13 ಹಾಗೂ 15 ರಲ್ಲಿ ಮಸೀದಿ ನಿರ್ಮಾಣ ಮಾಡಲಾಗಿದೆ, ನಿವೇಶನ ಸಂಖ್ಯೆ13 ರ ಮಾಲೀಕರಾಗಿದ್ದ ಪಿ ಬಾಷಾ ತಮ್ಮ ನಿವೇಶನವನ್ನು ಮಸೀದಿಯ ಟ್ರಸ್ಟಿಗೆ ಬರೆದುಕೊಟ್ಟಿ ದ್ದರು. ನಂತರ ನಿವೇಶನ ಸಂಖ್ಯೆ15 ರ ಮಾಲೀಕರಾದ ಅಮೀನಾ ಎಂಬವರು ತನ್ನ ಸ್ಥಳವನ್ನು ಮಸೀದಿಗೆ ನೀಡಿದ್ದರು. ಈ ಎರಡು ನಿವೇಶನಗಳನ್ನ ಒಂದೂಗೂಡಿಸಿ ಮಸೀದಿ ನಿರ್ಮಾಣ ಮಾಡಲಾಗಿದೆ.
ಇದನ್ನೂ ಓದಿ: Idgah Maidana: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ವಿಗ್ರಹ ಅಂಗಡಿ ತೆರೆಯಲು ಚಿಂತನೆ
ನಿವೇಶನ 14 ಒತ್ತುವರಿ
ಆದ್ರೆ ನಿವೇಶನ ಸಂಖ್ಯೆ 13 ಮತ್ತು 15ರ ನಡುವೆ ಇದ್ದ 14ರ ಜಾಗವನ್ನು ಮಸೀದಿ ಒತ್ತುವರಿ ಮಾಡಿಕೊಂಡಿದೆ. ನಿವೇಶನ ಸಂಖ್ಯೆ 14ರ 5.5 ಅಡಿ ಅಗಲ ಹಾಗೂ 45 ಅಡಿ ಉದ್ದವಿತ್ತು. ಇಲ್ಲಿ ಸಾರ್ವಜನಿರಕ ಓಡಾಟಕ್ಕೆ ಅವಕಾಶವಿತ್ತು. ಈ ಜಾಗವನ್ನು ಮಸೀದಿ ಒತ್ತುವರಿ ಮಾಡಿಕೊಂಡಿದೆ. ಆದ್ರೆ ಇದಕ್ಕೆ ಈ ಹಿಂದೆ ಬಿಬಿಎಂಪಿ ಖಾತಾ ಕೂಡಾ ಮಾಡಿಕೊಟ್ಟಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವಾದ ಪ್ರತಿವಾದಗಳು ನಡೆದು ಅಂತಿಮವಾಗಿ ನೋಟಿಸ್ ನೀಡಲಾಗಿದೆ.
ನಿವೇಶನ 14 ಪಾಲಿಕೆ ಸ್ವತ್ತು ಎಂದು ಘೋಷಣೆ
ವಾದ ಪ್ರತಿವಾದದ ಬಳಿಕ ನಿವೇಶನ ಸಂಖ್ಯೆ 14 ರ ಐದು ಅಡಿ ಜಾಗ ಪಾಲಿಕೆ ಸ್ವತ್ತು ಎಂದು ಘೋಷಿಸಲಾಗಿದೆ. ಸಾರ್ವಜನಿಕರ ಸ್ವತ್ತೆಂದು ಘೋಷಣೆ ಮಾಡಿದ್ದು ತಕ್ಷಣ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಬಿಬಿಎಂಪಿಗೆ ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ
ಈ ಹಿಂದೆ ಚಾಮರಾಜಪೇಟೆಯಲ್ಲಿರುವ 2.5 ಎಕರೆ ಜಮೀನಿಗೆ ಯಾವುದೇ ಮಾಲೀಕರಿಲ್ಲ, 1974ರ ಕಂದಾಯ ದಾಖಲೆಗಳ ಪ್ರಕಾರ ಪಾಲಿಕೆಗೆ ಸೇರಿದೆ ಎಂದು ಬಿಬಿಎಂಪಿ ಹೇಳಿತ್ತು. ವಕ್ಫ್ ಬೋರ್ಡ್ ಅಡಿಯಲ್ಲಿನ ಕೇಂದ್ರ ಮುಸ್ಲಿಂ ಅಸೋಸಿಯೇಷನ್ ಜಮೀನು ಮಂಡಳಿಗೆ ಸೇರಿದ್ದು ಅಂತ ಗೆಜೆಟ್ ನೋಟಿಫಿಕೇಶನ್ ನೀಡಿತ್ತು. ಹಾಗಾಗಿ ದಾಖಲೆಗಳ ಸಲ್ಲಿಸುವಂತೆ ಒಂದು ವಾರದ ಸಮಯಾವಕಾಶ ನೀಡಲಾಗಿದೆ. ಎರಡು ದಿನಗಳ ನಂತರ ನಾವು ಮತ್ತೊಮ್ಮೆ ಜ್ಞಾಪನೆ ಕಳುಹಿಸುತ್ತೇವೆ ಎಂದು ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಎಸ್ಎಂ ಶ್ರೀನಿವಾಸ್ ಹೇಳಿದ್ದಾರೆ.
ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಪ್ರಮುಖ ಬೇಡಿಕೆ ಏನು?
ಚಾಮರಾಜಪೇಟೆ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸಬೇಕು. ಮೈದಾನವನ್ನ ಆಟದ ಮೈದಾನವನ್ನಾಗಿಯೇ ಉಳಿಸಬೇಕು. ಚಾಮರಾಜಪೇಟೆ ಮೈದಾನಕ್ಕೆ ಜಯಚಾಮರಾಜೇಂದ್ರ ಮೈದಾನ ಎಂದು ನಾಮಕರಣ ಮಾಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಯಾವುದೇ ಕಾರಣಕ್ಕೂ ವಕ್ಫ್ ಬೋರ್ಡ್ ಗೆ ವಹಿಸಬಾರದು. ಜೊತೆಗೆ ಮೈದಾನ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಡಲು ಸಮಿತಿ ರಚನೆಯಾಗಬೇಕು.
ಇದನ್ನೂ ಓದಿ: Idgah Maidana: ಚಾಮರಾಜಪೇಟೆ ಮೈದಾನ ವಿವಾದ ಹೋರಾಟಕ್ಕೆ ಪಿ ಸಿ ಮೋಹನ್ ಎಂಟ್ರಿ
ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನ, ಕನ್ನಡ ರಾಜ್ಯೋತ್ಸವ, ಶಿವರಾತ್ರಿ, ನಾಡಹಬ್ಬ ದಸರಾ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆಗೆ ಅನುಮತಿ ನೀಡಬೇಕು ಎಂದು ಬೇಡಿಕೆ ಇಟ್ಟಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ