ಭಾರೀ ಮಳೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆ ಕುಸಿತ

ಸ್ಥಳಕ್ಕೆ  ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ  ವಿಧಿಸಿದ್ದಾರೆ ಎನ್ನಲಾಗಿದೆ. ಇನ್ನು ಮಳೆಯಿಂದಾಗಿ ಚಾಮುಂಡೇಶ್ವರಿ ಬೆಟ್ಟದಿಂದ ಕೆಳಕ್ಕೆ ನಿರಂತರವಾಗಿ ಮಳೆ ನೀರು ಸುರಿಯುತ್ತಿದೆ.

G Hareeshkumar | news18-kannada
Updated:October 22, 2019, 10:30 PM IST
ಭಾರೀ ಮಳೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ರಸ್ತೆ ಕುಸಿತ
ಭೂಮಿ ಕುಸಿದಿದ್ದರಿಂದ ರಸ್ತೆ ಕುಸಿದಿರುವುದು
G Hareeshkumar | news18-kannada
Updated: October 22, 2019, 10:30 PM IST
ಮೈಸೂರು (ಅ.22): ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿದೆ. ನಂದಿ ವಿಗ್ರಹದ ಕಡೆಗೆ ಸಾಗುವ ಮಾರ್ಗದ ಸನಿಹದಲ್ಲಿಯೇ ಈ ವ್ಯೂವ್ ಪಾಯಿಂಟ್ ಇದೆ. ಬೆಟ್ಟದಿಂದ ಮೈಸೂರು ಅಂದವನ್ನು ಸವಿಯಲು ಮಾಡಲಾಗಿರುವ ವ್ಯೂ ಪಾಯಿಂಟ್ ಇದಾಗಿದೆ.

ಮುಂಜಾಗ್ರತಾ ಕ್ರಮವಾಗಿ ಆ ಭಾಗದಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಇದೀಗ ಭಾರೀ ಮಳೆಯಿಂದಾಗಿ ರಸ್ತೆ ಕುಸಿದು ಬ್ಯಾರಿಕೇಡ್ ಹಳ್ಳಕ್ಕೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ವಿರಳವಾಗಿದೆ.

ಇನ್ನೂ ಸ್ಥಳಕ್ಕೆ  ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ  ವಿಧಿಸಿದ್ದಾರೆ ಎನ್ನಲಾಗಿದೆ. ಇನ್ನು ಮಳೆಯಿಂದಾಗಿ ಚಾಮುಂಡೇಶ್ವರಿ ಬೆಟ್ಟದಿಂದ ಕೆಳಕ್ಕೆ ನಿರಂತರವಾಗಿ ಮಳೆ ನೀರು ಸುರಿಯುತ್ತಿದೆ.

ಇದನ್ನೂ ಓದಿ : VIDEO ಗದಗನಲ್ಲಿ ಮತ್ತೆ ಆರಂಭವಾದ ಮಳೆ ; ಸಮಸ್ಯೆಯನ್ನು ವಿಡಿಯೋ ಮಾಡಿ ಹರಿಬಿಟ್ಟ ರೈತ
Loading...

ಇತ್ತ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನಲ್ಲಿ ನೆನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಮಳೆಯ ರೌದ್ರನರ್ತನಕ್ಕೆ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರೆ, ನಾಲ್ಕು ಕೆರೆಗಳ ಏರಿ ಒಡೆದು ಸಾವಿರಾರು ಎಕರೆಯ ಬೆಳೆ ಸಂಪೂರ್ಣ ನಾಶವಾಗಿದೆ.

First published:October 22, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...