ಬೆಂಗಳೂರಿನಿಂದ ಹೊರಟಿದ್ದ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿತು ಭಾರೀ ದುರಂತ

ಈ ಅಗ್ನಿ ಅವಘಡದಿಂದ ಈ ಭಾಗದಲ್ಲಿ ರೈಲ್ವೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆಲ ರೈಲುಗಳು ತಡವಾಗಿ ಸಂಚರಿಸಿವೆ. ಬೆಂಕಿ ಆರಿದ ನಂತರ ರೈಲನ್ನು ಬೇರೆಡೆ ತೆಗೆದುಕೊಂಡು ಹೋಗಲಾಗಿದೆ.

Rajesh Duggumane | news18
Updated:March 5, 2019, 10:44 AM IST
ಬೆಂಗಳೂರಿನಿಂದ ಹೊರಟಿದ್ದ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿತು ಭಾರೀ ದುರಂತ
ಸಾಂದರ್ಭಿಕ ಚಿತ್ರ
Rajesh Duggumane | news18
Updated: March 5, 2019, 10:44 AM IST
ಹೈದರಾಬಾದ್ (ಮಾ.5)​: ಬೆಂಗಳೂರಿನಿಂದ ಜಾರ್ಖಂಡ್​ಗೆ ಹೊರಟಿದ್ದ ಯಶವಂತಪುರ-ಟಾಟಾನಗರ್​ ಸೂಪರ್​ಫಾಸ್ಟ್​​ ಎಕ್ಸ್​​ಪ್ರೆಸ್​​ ರೈಲಿನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್​  ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ರೈಲು ಯಶವಂತಪುರದಿಂದ ಜಾರ್ಖಂಡದ ಜಮ್ಶೆಡ್ಪುರಕ್ಕೆ ಹೊರಟಿತ್ತು. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಸಮೀಪ ರೈಲಿನ ಕ್ಯಾಟರಿಂಗ್​ ಬೋಗಿಯಲ್ಲಿ (ಅಡುಗೆ ಕೋಣೆ) ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ 2 ಗಂಟೆ ವೇಳೆಗೆ ಅಗ್ನಿಅವಘಡ ನಡೆದಿದೆ. ಕ್ಷಣ ಮಾತ್ರದಲ್ಲಿ ಬೆಂಕಿ ಇಡೀ ಬೋಗಿ ಆವರಿಸಿತ್ತು. ರೈಲ್ವೆ ಸಿಬ್ಬಂದಿ ಬೋಗಿಯನ್ನು ಬೇರ್ಪಡಿಸುವ ಮೂಲಕ ಮುಂದಾಗಬಹುದಾದ ದುರಂತವನ್ನು ತಪ್ಪಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ನಂತರ ರೈಲಿನಲ್ಲಿದ್ದ ಪ್ರಯಾಣಿಕರು ಒಮ್ಮೆ ಆತಂಕಕ್ಕೆ ಒಳಗಾಗಿದ್ದರು.

ಈ ಅಗ್ನಿ ಅವಘಡದಿಂದ ಈ ಭಾಗದಲ್ಲಿ ರೈಲ್ವೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆಲ ರೈಲುಗಳು ತಡವಾಗಿ ಸಂಚರಿಸಿವೆ. ಬೆಂಕಿ ಆರಿದ ನಂತರ ರೈಲನ್ನು ಬೇರೆಡೆ ತೆಗೆದುಕೊಂಡು ಹೋಗಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.

ಇದನ್ನೂ ಓದಿ: ಪಾಕ್​ನಲ್ಲಿ ನಕಲಿ ಬ್ಯಾಂಕ್ ಖಾತೆಗಳ ಹಾವಳಿ; ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಅನುಮಾನಾಸ್ಪದ ಹಣ ವರ್ಗಾವಣೆ ಪ್ರಕರಣ

First published:March 5, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626