ಮಹದಾಯಿ ನೀರು ಹಂಚಿಕೆ ವಿವಾದ; ಸುಪ್ರೀಂ ಕೋರ್ಟ್​ನಲ್ಲಿ ಇಂದು ಗೋವಾ ಸರ್ಕಾರದ ಅರ್ಜಿ ವಿಚಾರಣೆ

ಕರ್ನಾಟಕದ ಜನರಿಗೆ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಿಕೊಳ್ಳುವ ಸಂಬಂಧ ಕೇಂದ್ರ ಸರ್ಕಾರದ ಅಧಿಸೂಚನೆಗೆ ಗೋವಾ ಒಪ್ಪಿಗೆ ಸೂಚಿಸಿತ್ತು. ಆದರೆ, ಇದ್ದಕ್ಕಿದ್ದಂತೆ ಮತ್ತೆ ತಗಾದೆ ತೆಗೆದಿರುವ ಗೋವಾ ಸರ್ಕಾರ, ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡದಂತೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ.

 ಮಹದಾಯಿ ನದಿ

ಮಹದಾಯಿ ನದಿ

  • Share this:
ನವದೆಹಲಿ (ಮಾ. 2): ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಉತ್ತರ ಕರ್ನಾಟಕದ ಜನರಿಗೆ ಮಹದಾಯಿ ನದಿಯಿಂದ 13.5 ಟಿಎಂಸಿ ನೀರು ಬಳಸಿಕೊಳ್ಳಲು ಅನುಮತಿ ನೀಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈ ನಿರ್ಧಾರದ ಬಗ್ಗೆ ಮಹದಾಯಿ ಹೋರಾಟಗಾರರು ಸಂತೋಷ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಗೋವಾ ಸರ್ಕಾರ ಮತ್ತೆ ಕ್ಯಾತೆ ತೆಗೆದಿತ್ತು.

ಫೆ. 20ರಂದು ಕೇಂದ್ರ ಸರ್ಕಾರದ ಅಧಿಸೂಚನೆಗೆ ಗೋವಾ ಸರ್ಕಾರ ಒಪ್ಪಿಗೆ ನೀಡಿತ್ತು. ಕರ್ನಾಟಕದ ಜನರಿಗೆ ಮಹದಾಯಿ ನದಿಯಿಂದ ಕುಡಿಯುವ ನೀರಿಗಾಗಿ 13.05 ಟಿಎಂಸಿ ನೀರು ಬಳಸಿಕೊಳ್ಳಲು ಅವಕಾಶ ನೀಡಿರುವುದಕ್ಕೆ ಒಪ್ಪಿಗೆ ಸೂಚಿಸಿತ್ತು. ಆದರೆ, ಇದ್ದಕ್ಕಿದ್ದಂತೆ ಮತ್ತೆ ತಗಾದೆ ತೆಗೆದಿರುವ ಗೋವಾ ಸರ್ಕಾರ, ಕಳಸಾ-ಬಂಡೂರಿ ಯೋಜನೆಗೆ ಅನುಮತಿ ನೀಡದಂತೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ಇಂದು ಸುಪ್ರೀಂ ಕೋರ್ಟ್​ನಲ್ಲಿ ಈ ಸಂಬಂಧ ಅರ್ಜಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರ; ಕೊನೆಗೂ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ಸುಪ್ರೀಂಕೋರ್ಟ್​ನಲ್ಲಿ ಇಂದು ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ನ್ಯಾ. ಚಂದ್ರಚೂಡ್, ನ್ಯಾ. ಅಜಯ್ ರಸ್ಟೋಗಿ ಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಈ ಮೂಲಕ ಕೇಂದ್ರ ಸರ್ಕಾರದ ನಿರ್ಧಾರದಿಂದ ಖುಷಿಯಲ್ಲಿದ್ದ ಉತ್ತರ ಕರ್ನಾಟಕದ ಜನ ಹಾಗೂ ಕರ್ನಾಟಕ ಸರ್ಕಾರಕ್ಕೆ ಗೋವಾ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿರುವುದು ತಲೆನೋವು ತಂದಿಟ್ಟಿದೆ.

ಇದನ್ನೂ ಓದಿ: ಮಹದಾಯಿ ಯೋಜನೆಯ ಸಂಪೂರ್ಣ ಕ್ರೆಡಿಟ್​ ಪಡೆಯಲು ಬಿಎಸ್​ವೈ ಪ್ಲಾನ್​; ಬೃಹತ್​ ಸಮಾವೇಶದಲ್ಲಿ ಪ್ರಧಾನಿ ಮೋದಿ?

ಮಹದಾಯಿ ನದಿಯ ಕಳಸಾ- ಬಂಡೂರಿ ಯೋಜನೆಯಿಂದ ಅರಣ್ಯ ಸಂಪತ್ತಿಗೆ ಧಕ್ಕೆಯಾಗಲಿದೆ. ಅಲ್ಲದೇ ಗೋವಾಗೂ ಅನ್ಯಾಯವಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಮಹದಾಯಿ ಕಣಿವೆ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಲು ಅನುಮತಿ ನೀಡದಂತೆ ಗೋವಾ ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದೆ.
First published: