HOME » NEWS » State » LAWYER YATNALS DEROGATORY REMARK AGAINST DORESWAMY SIDDARAMAIAH CALLED FOR A PROTEST MAK

ದೊರೆಸ್ವಾಮಿ ವಿರುದ್ಧ ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರ; ಪ್ರತಿಭಟನೆಗೆ ಕರೆ ನೀಡಿದ ಸಿದ್ದರಾಮಯ್ಯ

ದೊರೆಸ್ವಾಮಿ ಓರ್ವ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಅವರೋರ್ವ ಪಾಕಿಸ್ತಾನದ ಏಜೆಂಟ್​ ಎಂದೆಲ್ಲಾ ನಿಂದಿಸಿದ್ದ ಯತ್ನಾಳ್​ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಶಾಸಕನ ಈ ಹೇಳಿಕೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

news18-kannada
Updated:February 26, 2020, 1:52 PM IST
ದೊರೆಸ್ವಾಮಿ ವಿರುದ್ಧ ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರ; ಪ್ರತಿಭಟನೆಗೆ ಕರೆ ನೀಡಿದ ಸಿದ್ದರಾಮಯ್ಯ
ಸಿದ್ದರಾಮಯ್ಯ- ಬಸನಗೌಡ ಪಾಟೀಲ್ ಯತ್ನಾಳ್
  • Share this:
ಬೆಂಗಳೂರು (ಫೆಬ್ರವರಿ 26); ಕೇಂದ್ರ ಸರ್ಕಾರ ವಿವಾದಾತ್ಮಕ ಸಿಎಎ ಕಾನೂನಿನ ಕುರಿತು ಚಳುವಳಿ ಹೂಡಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ದೊರೆಸ್ವಾಮಿ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಇತ್ತೀಚೆಗೆ ದೃಶ್ಯ ಮಾಧ್ಯಮಗಳಿಗೆ ಅವಮಾನಕಾರಿ ಹೇಳಿಕೆ ನೀಡಿದ್ದರು.

"ದೊರೆಸ್ವಾಮಿ ಓರ್ವ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಅವರೋರ್ವ ಪಾಕಿಸ್ತಾನದ ಏಜೆಂಟ್"​ ಎಂದೆಲ್ಲಾ ನಿಂದಿಸಿದ್ದ ಯತ್ನಾಳ್​ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಶಾಸಕನ ಈ ಹೇಳಿಕೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಕುರಿತು ಇಂದು ತಮ್ಮ ಅಸಮಾಧಾನವನ್ನು ತೋಡಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಇಂದು ಸಂಜೆ 4.30ಕ್ಕೆ ವಿಧಾನಸೌಧದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಹೋರಾಟಕ್ಕೆ ಕರೆ ನೀಡಿದ್ದಾರೆ.

ಹೀಗಾಗಿ ಕಾಂಗ್ರೆಸ್​ ಪಕ್ಷದ ಎಲ್ಲಾ ಶಾಸಕರೂ ಹಾಗೂ ಗಾಂಧಿವಾದಿಗಳು ಈ ಹೋರಾಟದಲ್ಲಿ ಪಾಲ್ಗೊಂಡು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಪ್ರತಿಭಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಪಾಕ್​ ಪರ ಘೋಷಣೆ ವಿವಾದ; ಆರೋಪಿ ಅಮೂಲ್ಯಾಳನ್ನು 4 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್​
Youtube Video
First published: February 26, 2020, 12:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories