ಸಿಎಂ ಬಿಎಸ್​ವೈ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್, ನಯನಾ ಮೋಟಮ್ಮ ಭೇಟಿ; ಕುತೂಹಲ ಮೂಡಿಸಿದ ಬೆಳವಣಿಗೆ

ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿಯಲ್ಲಿರುವ ನಿವಾಸಕ್ಕೆ ಇವರಿಬ್ಬರು ಹೋಗಿ ಭೇಟಿ ಮಾಡಿ ಬಂದಿದ್ದಾರೆ. ಮಾಧ್ಯಮಗಳಿಗೆ ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಾಧ್ಯಮಗಳತ್ತ ತಿರುಗಿಯೂ ನೋಡದೇ ಅವರು ಹೊರಟುಹೋಗಿದ್ದಾರೆ.

news18
Updated:November 13, 2019, 3:16 PM IST
ಸಿಎಂ ಬಿಎಸ್​ವೈ ಜೊತೆ ಲಕ್ಷ್ಮೀ ಹೆಬ್ಬಾಳ್ಕರ್, ನಯನಾ ಮೋಟಮ್ಮ ಭೇಟಿ; ಕುತೂಹಲ ಮೂಡಿಸಿದ ಬೆಳವಣಿಗೆ
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
  • News18
  • Last Updated: November 13, 2019, 3:16 PM IST
  • Share this:
ಬೆಂಗಳೂರು(ನ. 13): ಡಿಕೆ ಶಿವಕುಮಾರ್ ಅವರ ಆಪ್ತೆ ಎಂದು ಪರಿಗಣಿಸಲಾಗಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಸಿಎಂ ಬಿಎಸ್ ಯಡಿಯೂರಪ್ಪರನ್ನು ಭೇಟಿ ಮಾಡಿದ್ಧಾರೆ. ಅನರ್ಹ ಶಾಸಕರ ಪ್ರಕರಣದಲ್ಲಿ ಇವತ್ತು ಸುಪ್ರೀಂ ಕೋರ್ಟ್ ತೀರ್ಪು ಹೊರಬಂದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಮಾಜಿ ಸಚಿವೆ ಮೋಟಮ್ಮ ಅವರ ಮಗಳು ನಯನಾ ಕೂಡ ಬಿಎಸ್​ವೈ ಅವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ.

ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿಯಲ್ಲಿರುವ ನಿವಾಸಕ್ಕೆ ಇವರಿಬ್ಬರು ಹೋಗಿ ಭೇಟಿ ಮಾಡಿ ಬಂದಿದ್ದಾರೆ. ಮಾಧ್ಯಮಗಳಿಗೆ ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮಾಧ್ಯಮಗಳತ್ತ ತಿರುಗಿಯೂ ನೋಡದೇ ಅವರು ಹೊರಟುಹೋಗಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಅನರ್ಹರ ಸ್ಪರ್ಧೆ ಬಹುತೇಕ ಖಚಿತ; ಇದು ಯಡಿಯೂರಪ್ಪಗೆ ಮಾಡು ಇಲ್ಲವೇ ಮಡಿ ಸಮಯ?

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿಯನ್ನು ಭೇಟಿಯಾಗಲು ಕಾರಣ ಏನು ಎಂಬುದು ಸ್ಪಷ್ಟವಿಲ್ಲ. ಕೆಲ ತಿಂಗಳ ಹಿಂದೆ ಅವರು ಬಿಜೆಪಿಯ ಆಪರೇಷನ್ ಕಮಲಕ್ಕೆ ಒಳಗಾಗಬಹುದು ಎಂಬ ವದಂತಿಗಳಿದ್ದವು. ಅವರ ವಿರುದ್ಧ ಇಡಿ ವಿಚಾರಣೆಯೂ ನಡೆಯುತ್ತಿದೆ. ಕಳೆದ ವರ್ಷ ಕೂಡ ಅವರು ಬಿಜೆಪಿ ತನಗೆ ಮಂತ್ರಿಗಿರಿ ಆಫರ್ ಕೊಟ್ಟಿತ್ತು ಎಂದೂ ಹೇಳಿಕೊಂಡಿದ್ದರು. ತಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಸುದ್ದಿಯನ್ನು ಅವರು ಇತ್ತೀಚೆಗೆ ಬಲವಾಗಿ ನಿರಾಕರಿಸಿದ್ದರು. ಈಗ ಗೋಕಾಕ್ ಕ್ಷೇತ್ರದಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗಿದ್ದೂ ಅವರು ಯಡಿಯೂರಪ್ಪರನ್ನು ಭೇಟಿಯಾಗಿ ಬಂದಿರುವುದು ತುಸು ಕುತೂಹಲ ಮೂಡಿಸಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published: November 13, 2019, 2:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading