Siddaramaiah: ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ವಿವಿಧ ನಾಯಕರು

ಕಳೆದ ಡಿಸೆಂಬರ್​ನಲ್ಲಿ ಅವರಿಗೆ ಆ್ಯಂಜಿಯೋಪ್ಲಾಸ್ಟ್​ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಸಿದ್ದರಾಮಯ್ಯನವರಿಗೆ ಕೊರೋನಾ ತಪಾಸಣೆ ನಡೆಸಲಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

news18-kannada
Updated:August 4, 2020, 9:19 AM IST
Siddaramaiah: ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ವಿವಿಧ ನಾಯಕರು
ಸಿದ್ದರಾಮಯ್ಯ
  • Share this:
ಬೆಂಗಳೂರು(ಆಗಸ್ಟ್. 04): ಕೊರೋನಾ ಪಾಸಿಟಿವ್ ಬಂದಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೇಗ ಗುಣಮುಖರಾಗಲೆಂದು ರಾಜ್ಯದ ಅನೇಕ ಮುಖಂಡರು ಹಾರೈಸಿದ್ದಾರೆ. ಆಸ್ಪತ್ರೆಯಲ್ಲಿಯಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಡಿಸಿಎಂ ಡಾ.ಅಶ್ವಥ್ ನಾರಾಯಣ, ಸಚಿವರಾದ ಬಿ ಶ್ರೀರಾಮುಲು, ಡಾ. ಸುಧಾಕರ್​ ಸೇರಿದಂತೆ ಹಲವು ಸಚಿವರು, ಮುಖಂಡರು ಸಿದ್ದರಾಮಯ್ಯ ಅವರಿಗೆ ಶುಭ ಹಾರೈಸಿ ಟ್ವೀಟ್ ಮಾಡಿದ್ದಾರೆ. 

ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ 15 ದಿನಗಳ ಹಿಂದೆ ಮೂತ್ರಕೋಶದ ಸೋಂಕು ಕಾಣಿಸಿಕೊಂಡಿತ್ತು. ನಿನ್ನೆ ರಾತ್ರಿ ಮತ್ತೆ ನೋವು ಹೆಚ್ಚಾಗಿದ್ದರಿಂದ ಮಗ ಡಾ.ಯತೀಂದ್ರ ಅವರ ಸಲಹೆ ಮೇರೆಗೆ ಸಿದ್ದರಾಮಯ್ಯನವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿದ್ದರಾಮಯ್ಯನವರಿಗೆ ಹೃದಯದ ಸಮಸ್ಯೆಯೂ ಇದ್ದು, ಕಳೆದ ಡಿಸೆಂಬರ್​ನಲ್ಲಿ ಅವರಿಗೆ ಆ್ಯಂಜಿಯೋಪ್ಲಾಸ್ಟ್​ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಸಿದ್ದರಾಮಯ್ಯನವರಿಗೆ ಕೊರೋನಾ ತಪಾಸಣೆ ನಡೆಸಲಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ವಿಪಕ್ಷನಾಯರು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ಕೋವಿಡ್‌ ಪಾಸಿಟಿವ್‌ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್‌ ಬಂದಿರುವುದು ನನಗೆ ನೋವಾಗಿದೆ.ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

— Dr Sudhakar K (@mla_sudhakar) August 4, 2020

ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರಿಗೆ
ಕೋವಿಡ್19 ಸೋಂಕು ತಗುಲಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವಾಗಿದೆ. ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

-  ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಸಚಿವರುಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಭಾನುವಾರ ದೃಢಪಟ್ಟಿತ್ತು. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Published by: G Hareeshkumar
First published: August 4, 2020, 8:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading