ನವದೆಹಲಿ (ಜು.30): ರಾಜ್ಯ ವಿಧಾನಪರಿಷತ್ನಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ಆಡಳಿತ ಪಕ್ಷ ಬಿಜೆಪಿ ಹಿಂದುಳಿದ ವರ್ಗದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ಕಾಂಗ್ರೆಸ್ ಪಕ್ಷದ ಮೇಲ್ಮನೆ ಸದಸ್ಯ ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ನ (Legislative Council Election) ಒಂದು ಸ್ಥಾನಕ್ಕಾಗಿ ಉಪ ಚುನಾವಣೆ ನಡೆಯಬೇಕಿದೆ. ಆಗಸ್ಟ್ 11 ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಪರಿಷತ್ ಗೆ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ್ ಗೆ ಟಿಕೆಟ್ (Baburao chinchansur) ನೀಡಲಾಗಿದೆ ಎಂದು ಇಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh) ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಬಾಬುರಾವ್ ಚಿಂಚನಸೂರ್
ಬಾಬುರಾವ್ ಚಿಂಚನಸೂರ್ ಹಾಲಿ ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿದ್ದಾರೆ. ಚಿಂಚನಸೂರ್, ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದಿಂದ ವಿಧಾನಸಭೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ. ಚಿಂಚನಸೂರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಇದೆ ಗುರುಮಠಕಲ್ ನಲ್ಲಿ ಸತತ ಎರಡು ಬಾರಿ ಗೆಲವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು. ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಪ್ತ ಖಾತೆಗಳ ಸಚಿವ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ (ಹಾಲಿ ರಾಜ್ಯ ಸಭಾ ಸದಸ್ಯ) ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಾಬುರಾವ್ ಚಿಂಚನಸೂರ್ ಪ್ರಮುಖ ಕಾರಣಕರ್ತರಾಗಿದ್ದರು.
ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಹಿಂದೂಳಿದ ವರ್ಗಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಾತಿನಿಧ್ಯ ನೀಡಿದೆ. ಕಲಬುರಗಿ ಭಾಗದಲ್ಲಿ ಕೋಲಿ ಸಮುದಾಯ ಹೆಚ್ಚಿದ್ದ. ಇದರಿಂದ ಕೋಲಿ ಸಮುದಾಯ ಹಿರಿಯ ನಾಯಕ ಬಾಬುರಾವ್ ಚಿಂಚನಸೂರು ಅವರಿಗೆ ಮಣೆ ಹಾಕಲಾಗಿದೆ.
ಇದನ್ನೂ ಓದಿ: CET Result: ಸಿಇಟಿ ಫಲಿತಾಂಶದಲ್ಲಿ ರಿಪೀಟರ್ಸ್ಗೆ ಅನ್ಯಾಯ; ಸಚಿವರ ಮನೆ ಮುಂದೆ ಪ್ರತಿಭಟನೆ
ಆಗಸ್ಟ್ 11ರಂದು ಚುನಾವಣೆ
ಕಾಂಗ್ರೆಸ್‌ನಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನ ಇದೀಗ ಉಪಚುನಾವಣೆಯನ್ನು ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಪರಿಷತ್ತಿನ ಒಂದು ಸ್ಥಾನಕ್ಕೆ ಆಗಸ್ಟ್ 11ರಂದು ಚುನಾವಣೆ ನಡೆಯಲಿದ್ದು, ಆಗಸ್ಟ್ 1 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಒಂದೇ ಸ್ಥಾನ ಇರುವುದರಿಂದ ಪ್ರತಿಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿವೆ ಎನ್ನಲಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿಲ್ಲ - ವಿಜಯೇಂದ್ರ
ನಮ್ಮ ಪಕ್ಷದ ಕಾರ್ಯಕರ್ತನ ಹತ್ಯೆಯಾಗಿದೆ. ಈ ಹಿನ್ನೆಲೆ ಪರಿಹಾರ ಕೊಟ್ಟಿದ್ದೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡದಲ್ಲಿ ಹತ್ಯೆಯಾದ ಯುವಕರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಡೆಸಲಾಗುತ್ತಿದೆ ಎಂಬ ಆರೋಪಕ್ಕೆ ಬಿ.ವೈ.ವಿ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ : Monkeypox: ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆ
ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿದ್ದ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಸಮರ್ಥರಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಏನೆಲ್ಲಾ ನಡೆದಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ಹತ್ಯೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನೋವಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದ್ರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ