ಚಿಕ್ಕಮಗಳೂರಿನಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವು


Updated:September 1, 2018, 5:21 PM IST
ಚಿಕ್ಕಮಗಳೂರಿನಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವು

Updated: September 1, 2018, 5:21 PM IST
-ವೀರೇಶ್​ ಜಿ. ಹೊಸೂರ್​, ನ್ಯೂಸ್​ 18 ಕನ್ನಡ

ಚಿಕ್ಕಮಗಳೂರು,(ಸೆ.01): ಉರುಳಿಗೆ ಸಿಲುಕಿ ಹೆಣ್ಣು ಚಿರತೆಯೊಂದು ಸಾವನಪ್ಪಿರುವ  ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ನಾಗಬೋಗನಹಳ್ಳಿ ಸಮೀಪದ ಬುಕ್ಕಾರಾಯನಕೆರೆಯಲ್ಲಿ ನಡೆದಿದೆ.

ಎಂಟು ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಆಕಸ್ಮಿಕವಾಗಿ ಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿದೆ. ಉರುಳಿನಿಂದ ಬಿಡಿಸಿಕೊಳ್ಳಲಾಗದೆ ಸಾವು-ಬದುಕಿನ ನಡುವೆ ಹೋರಾಟ ನಡೆಸಿದೆ. ಕೊನೆಗೆ  ಸ್ಥಳದಲ್ಲೇ ಒದ್ದಾಡಿ ಸಾವನಪ್ಪಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬುಕ್ಕಾಂಬುದಿ ಉಪವಲಯ ಅರಣ್ಯಾಧಿಕಾರಿ ಸಿದ್ದಪ್ಪ ಭೇಟಿ ನೀಡಿದ್ದಾರೆ. ಪರಿಶೀಲನೆ ನಡೆಸಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಚಿರತೆ ಸಾವಿಗೆ ಕಾರಣವೇನೆಂಬುದರ ಖಚಿತ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ತಿಳಿಯುತ್ತದೆ ಎಂದು ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
First published:September 1, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ