HOME » NEWS » State » LET MODI PUT AN END TO THE STATE BJP GOVERNMENT CORRUPTION SAYS HD KUMARASWAMY MAK

HD Kumaraswamy: ಪ್ರಧಾನಿ ಮೋದಿ ರಾಜ್ಯ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಮೊದಲು ಕೊನೆಗಾಣಿಸಲಿ; ಹೆಚ್.​ಡಿ. ಕುಮಾರಸ್ವಾಮಿ

ಕರ್ನಾಟಕದ ಸರ್ಕಾರದಲ್ಲೇ ಏಕಗವಾಕ್ಷಿಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

news18-kannada
Updated:March 21, 2021, 3:16 PM IST
HD Kumaraswamy: ಪ್ರಧಾನಿ ಮೋದಿ ರಾಜ್ಯ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಮೊದಲು ಕೊನೆಗಾಣಿಸಲಿ; ಹೆಚ್.​ಡಿ. ಕುಮಾರಸ್ವಾಮಿ
ಹೆಚ್​.ಡಿ ಕುಮಾರಸ್ವಾಮಿ.
  • Share this:
ಬೆಂಗಳೂರು (ಮಾರ್ಚ್​ 21); ಇತ್ತೀಚೆಗೆ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, "ಪಶ್ಚಿಮ ಬಂಗಾಳದಲ್ಲಿ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹೀಗಾಗಿ ಇದನ್ನು ಕೊನೆಗೊಳಿಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ನಡೆಸಬೇಕಿದೆ" ಎಂದು ತಿಳಿಸಿದ್ದರು. ಆದರೆ, ಇದಕ್ಕೆ ಇಂದು ಟ್ವೀಟ್​ ಮೂಲಕ ಟಾಂಗ್ ನೀಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, "ಪಶ್ಚಿಮ ಬಂಗಾಳದ ಸರ್ಕಾರ ಕೇಂದ್ರಿತ ಏಕಗವಾಕ್ಷಿಯನ್ನು ಕೊನೆಗೊಳಿಸುವುದಿರಲಿ, ರಾಜ್ಯದ ಸಂಪನ್ಮೂಲಗಳನ್ನು, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಒಂದೇ ಕುಟುಂಬ ಕೊಳ್ಳೆ ಹೊಡೆಯುತ್ತಿದೆಯಲ್ಲ, ಈ ಭ್ರಷ್ಟಾಚಾರವನ್ನು ಎಂದು ಕೊನೆಗೊಳಿಸುತ್ತೀರಿ?" ಎಂದು ಕಟು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.



ಈ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ, "ಪ್ರಧಾನಿ ನರೇಂದ್ರ ಮೋದಿ, ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ, ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ?" ಎಂದು ಕಿಡಿಕಾರಿದ್ದಾರೆ.


ಮತ್ತೊಂದು ಟ್ವೀಟ್​ನಲ್ಲಿ, "ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಖುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ 'ಮಹಾನಾಯಕ-ಏಕಗವಾಕ್ಷಿ' ಬಗ್ಗೆ ಮೋದಿ ಮಾತಾಡುವರೇ?.

ಕರ್ನಾಟಕದ ಸರ್ಕಾರದಲ್ಲೇ 'ಏಕಗವಾಕ್ಷಿ'ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತಾ ಬ್ಯಾನರ್ಜಿ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ 'ಏಕಗವಾಕ್ಷಿ' ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ" ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.



ಇದೇ ಸಂದರ್ಭದಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸುವ ಮೋದಿ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿರುವ ಕುಮಾರಸ್ವಾಮಿ, "2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೇ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‌ವೆಲ್‌ ಕೊರೆಸಲಾಗದಂಥಾ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಇನ್ನು ಆದಾಯ ದ್ವಿಗುಣ ಎಲ್ಲಿ?



ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ, 'ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು,'ಎಂದಿದ್ದಾರೆ ಅವರು. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ.

ಇದನ್ನೂ ಓದಿ: Siddaramaiah - ಇನ್ನೂ 19 ಸಿಡಿ ಇದೆಯಂತೆ, ನಾಲಗೆ ಹಿಡಿತದಲ್ಲಿರಲಿ: ಕಟೀಲ್​ಗೆ ಸಿದ್ದರಾಮಯ್ಯ ತಿರುಗೇಟು

ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ನರೇಂದ್ರ ಮೋದಿ ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ?" ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
Published by: MAshok Kumar
First published: March 21, 2021, 3:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories