Text Book Controversy: "ಮಕ್ಕಳಿಗೆ ಗೋಡ್ಸೆ ಬಗ್ಗೆಯೂ ಪಾಠ ಬರಬಹುದು"! ಪರಿಷ್ಕೃತ ಪಠ್ಯ ವಿರೋಧಿಸಿ ಸರ್ಕಾರಕ್ಕೆ ಸಾಹಿತಿಗಳಿಂದ ಪತ್ರ

ಯಾವುದೇ ಕಾರಣಕ್ಕೂ ಪರಿಷ್ಕೃತ ಪಠ್ಯ ಪುಸ್ತಕ ಜಾರಿಗೆ ತರಬಾರದು ಅಂತ ಆಗ್ರಹಿಸಿ ನಾಡಿನ ಹಲವು ಸಾಹಿತಿಗಳು, ಪ್ರಗತಿಪರ ಚಿಂತಕರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. "ಇದೇ ರೀತಿ ಮುಂದುವರಿದರೆ ಮುಂದೆ ಗೋಡ್ಸೆ ಕುರಿತ ಅಧ್ಯಾಯವು ಪಠ್ಯಪುಸ್ತಕಗಳಲ್ಲಿ ಸೇರಿಸುವ ದಿನಗಳು ದೂರವಿಲ್ಲ" ಎಂದು ಸಾಹಿತಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳ (School Students) ಪರಿಷ್ಕೃತ ಪಠ್ಯ ಪುಸ್ತಕ (Text Book) ಈಗ ವಿವಾದಕ್ಕೆ (Controversy) ಕಾರಣವಾಗಿದೆ. ಪಠ್ಯ ಪುಸ್ತಕ ಮರು ಪರಿಷ್ಕರಣೆ (Revised) ಅಸಮರ್ಪಕವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಯಾವುದೇ ಕಾರಣಕ್ಕೂ ಪರಿಷ್ಕೃತ ಪಠ್ಯ ಪುಸ್ತಕ ಜಾರಿಗೆ ತರಬಾರದು ಅಂತ ಆಗ್ರಹಿಸಿ ನಾಡಿನ ಹಲವು ಸಾಹಿತಿಗಳು, ಪ್ರಗತಿಪರ ಚಿಂತಕರು ರಾಜ್ಯ ಸರ್ಕಾರಕ್ಕೆ (State Government) ಪತ್ರ (Letter) ಬರೆದಿದ್ದಾರೆ.  ‘ಶಿಕ್ಷಣ ಇಲಾಖೆ (Education Department) ಪಠ್ಯಪುಸ್ತಕ ಮರು ಪರಿಷ್ಕರಣೆ ಪ್ರಕ್ರಿಯೆ ಪೂರ್ವಗ್ರಹಪೀಡಿತವಾಗಿದೆ. ಇದೇ ಪದ್ಧತಿ ಮುಂದುವರಿದರೆ ಮುಂದೆ ಗೋಡ್ಸೆ (Nathuram Godse) ಕುರಿತ ಅಧ್ಯಾಯವು (Lesson) ಪಠ್ಯಪುಸ್ತಕಗಳಲ್ಲಿ ಸೇರಿಸುವ ದಿನಗಳು ದೂರವಿಲ್ಲ’ ಎಂದು ಸಾಹಿತಿಗಳು ಪತ್ರದಲ್ಲಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಸಾಹಿತಿಗಳು

ಪಠ್ಯಪುಸ್ತಕ ಮರು ಪರಿಷ್ಕರಣೆ ಜಾರಿಯಾಗಬಾರದು ಅಂತ ಆಗ್ರಹಿಸಿ ಸುಮಾರು 71ಕ್ಕೂ ಹೆಚ್ಚು ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕೆ.ಮರುಳಸಿದ್ದಪ್ಪ, ವಿಜಯಾ, ರಾಜೇಂದ್ರ ಚೆನ್ನಿ, ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಟಿ.ಆರ್.ಚಂದ್ರಶೇಖರ್, ಹಿ.ಶಿ. ರಾಮಚಂದ್ರೇಗೌಡ, ವಿ.ಪಿ. ನಿರಂಜನಾರಾಧ್ಯ, ಕಾಳೇಗೌಡ ನಾಗವಾರ, ಕುಂ.ವೀರಭದ್ರಪ್ಪ, ರಹಮತ್ ತರಿಕೆರೆ, ವಸಂತ ಬನ್ನಾಡಿ ಸೇರಿದಂತೆ 71 ಮಂದಿ ಒಪ್ಪಿಗೆ ಸೂಚಿಸಿದ್ದಾರೆ.

ಪತ್ರದಲ್ಲಿ ಸಾಹಿತಿಗಳ ಆರೋಪವೇನು?

ಕನ್ನಡ ನಾಡಿನ ಅಸ್ಮಿತೆ, ಕನ್ನಡ ಭಾಷೆಯ ಘನತೆಗಳನ್ನು ಗಾಳಿಗೆ ತೂರುವ ರೋಹಿತ್ ಚಕ್ರತೀರ್ಥರವರ ಸಮಿತಿ, ಅದಕ್ಕೆ ಬದಲಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಲ್ಲೊಬ್ಬರಾದ ಹಡಗೇವಾರ್‌ರವರ 'ನಿಜವಾದ ಆದರ್ಶ ಪುರುಷ ಯಾರಾಗಬೇಕು', ಬನ್ನಂಜೆ ಗೋವಿಂದಾಚಾರ್ಯರವರ 'ಶುಕನಾಸನ ಉಪದೇಶ' ಶತಾವಧಾನಿ ಗಣೇಶ್ ರವರ 'ಶ್ರೇಷ್ಠ ಭಾರತೀಯ ಚಿಂತನೆಗಳು, ಶಿವಾನಂದ ಕಳವೆಯವರ 'ಸ್ವದೇಶಿ ಸೂತ್ರದ ಸರಳ ಹಬ್ಬ' ಪಠ್ಯಗಳನ್ನು ಸೇರಿಸಲಾಗಿದೆ. ಯಾವ ಕಾರಣಕ್ಕೆ ಕನ್ನಡದ ಪ್ರಮುಖ ಲೇಖಕ, ಲೇಖಕಿಯರ ಪಠ್ಯಗಳನ್ನು ಕೈ ಬಿಟ್ಟಿದ್ದಾರೆ ಎನ್ನುವುದಕ್ಕೆ ಯಾವುದೇ ಕಾರಣಗಳನ್ನು ಕೊಟ್ಟಿಲ್ಲ ಅಂತ ಪತ್ರದಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: Karnataka School Textbook: ನಾರಾಯಣ ಗುರು ಅವರನ್ನು ಪಠ್ಯ ಪುಸ್ತಕದಿಂದ ತೆಗೆದಿಲ್ಲ: ಗೊಂದಲಗಳಿಗೆ ತೆರೆ ಎಳೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹೆಗಡೆವಾರ್ ಭಾಷಣ ಸೇರ್ಪಡೆಗೆ ವಿರೋಧ

ಶಿಕ್ಷಣ ತಜ್ಞರಲ್ಲದ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಸಂಶೋಧನೆ ಕೈಗೊಳ್ಳದ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡದಲ್ಲಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ? ಈ ಪ್ರಶ್ನೆಗೆ ಸಂಬಂಧಪಟ್ಟವರು ಉತ್ತರ ನೀಡಿಲ್ಲ. ಈ ಸಮಿತಿ ಏಕಪಕ್ಷೀಯವಾಗಿ 10ನೇ ತರಗತಿಯ ಪಠ್ಯ ಪರಿಷ್ಕರಿಸಲಾಗಿದೆ’ ಎಂದಿದ್ದಾರೆ. ಹೆಡಗೇವಾರ್ ಅವರ ಭಾಷಣವನ್ನು ಸೇರಿಸುವುದರ ಕಾರಣ ಮಾತ್ರ ಹೇಳದೇ ಹೋದರೂ ಅರ್ಥವಾಗುತ್ತದೆ. ಒಟ್ಟಾರೆಯಾಗಿ ಇಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಕಂಡು ಬರುತ್ತಿಲ್ಲ ಅಂತ ಸಾಹಿತಿಗಳು ಆರೋಪಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರ ವಿರುದ್ಧ ಆಕ್ರೋಶ

ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡಗೇವಾರ್ ಅವರ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದನ್ನು ಸಮರ್ಥಿಸಿಕೊಂಡಿರುವ ಸಚಿವರು, ಜವಾಬ್ದಾರಿಯುತ ಮತ್ತು ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಂಡಿಲ್ಲ ಅಂತ ಸಾಹಿತಿಗಳು ಆರೋಪಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಉಡಾಫೆಯಿಂದ ಮಾತನಾಡಿದ್ದಾರೆ ಪತ್ರದಲ್ಲಿ ದೂರಿದ್ದಾರೆ.

ಇದನ್ನೂ ಓದಿ: 2nd PUC ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್! ಶಿಕ್ಷಣ ಸಚಿವ ನಾಗೇಶ್ ಕೊಟ್ರು ಮಾಹಿತಿ

“ಯಾವುದೇ ಕಾರಣಕ್ಕೂ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡಬಾರದು”

ಯಾವುದೇ ಕಾರಣಕ್ಕೂ ಪಠ್ಯಪುಸ್ತಕದಲ್ಲಿ ಬದಲಾವಣೆ ಮಾಡಬಾರದು’ ಎಂದು ಪತ್ರದಲ್ಲಿ ಆಗ್ರಹಿಸಿರುವ ಸಾಹಿತಿಗಳು, ಪಠ್ಯಪುಸ್ತಕಗಳ ರಚನೆ ಮತ್ತು ಪರಿಷ್ಕರಣೆ ಶಿಕ್ಷಣ ತಜ್ಞರ ಮೂಲಕವೇ ನಡೆಯಬೇಕು. ಚುನಾವಣಾ ಆಯೋಗದಂತೆ ಪಠ್ಯ ಪುಸ್ತಕಗಳ ರಚನೆ ಮತ್ತು ಪರಿಶೀಲನೆಗೆ ಒಂದು ಸ್ವಾಯತ್ತ ಆಯೋಗ ರಚಿಸಬೇಕು ’ ಎಂದು ಸಲಹೆ ನೀಡಿದ್ದಾರೆ.
Published by:Annappa Achari
First published: