9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ


Updated:February 28, 2018, 1:55 PM IST
9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ
  • Share this:
- ನ್ಯೂಸ್ 18 ಕನ್ನಡ

ಬೆಂಗಳೂರು(ಫೆ.28): 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ 54ನೇ ಸಿಟಿ ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 29 ವರ್ಷದ ಬಾಲಕೊಂಡಯ್ಯ ಶಿಕ್ಷೆಗೊಳಗಾದ ಅಪರಾಧಿ.

ಬಾಲಕೊಂಡಯ್ಯ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶೆ ಲತಾ ಕುಮಾರಿ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಜೀವಾವಧಿ ಶಿಕ್ಷೆ ಜೊತೆಗೆ 3 ಲಕ್ಷ ರೂ. ದಂಡ ಸಹ ವಿಧಿಸಲಾಗಿದೆ.

2017ರ ಆಗಸ್ಟ್ ತಿಂಗಳಲ್ಲಿ 9 ವರ್ಷದ ಬಾಲಕಿ ಮೇಲೆ ಬಾಲಕೊಂಡಯ್ಯ ಅತ್ಯಾಚಾರ ಎಸಗಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಆರು ತಿಂಗಳಲ್ಲೇ ಅಪರಾಧಿಗೆ ಜೀವಾವಧಿ ಶಿಕ್ಷೆಯಾಗಿದೆ.
First published:February 28, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ