News18 India World Cup 2019

ಪ್ರೀತಿಸಿ ಮದುವೆಯಾದ ಜೋಡಿಗೆ ಜೀವ ಭಯ.. ಎಸ್ಪಿ ಮೊರೆ...!

news18
Updated:June 27, 2018, 9:38 PM IST
ಪ್ರೀತಿಸಿ ಮದುವೆಯಾದ ಜೋಡಿಗೆ ಜೀವ ಭಯ.. ಎಸ್ಪಿ ಮೊರೆ...!
news18
Updated: June 27, 2018, 9:38 PM IST
- ಚಂದ್ರಕಾತ್ ಸುಗಂಧಿ, ನ್ಯೂಸ್ 18 ಕನ್ನಡ 

ಬೆಳಗಾವಿ ( ಜೂನ್ 27) :  ಕುಟುಂಬಸ್ಥರ ವಿರೋಧದ ನಡುವೆಯೂ ಬೆಂಗಳೂರಿಗೆ ಹೋಗಿ ಮದುವೆಯಾದ ನವ ಜೋಡಿ ಇದೀಗ ಭದ್ರತೆ ನೀಡುವಂತೆ ಕೋರಿ ಬೆಳಗಾವಿ ಎಸ್‍ಪಿ ಕಚೇರಿ ಮೆಟ್ಟಿಲು ಏರಿದೆ.

ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಳಗಿ ಗ್ರಾಮದ ಸಂದೀಪ ಕರೆಪ್ಪಗೋಳ ಹಾಗೂ ಗೌರಿ ಪಾಟೀಲ ಮದುವೆಯಾದ ನವಜೋಡಿ. ಕಳೆದ ಎರಡು ವರ್ಷಗಳಿಂದ ಪ್ರಿತಿಸುತ್ತಿದ್ದ ಈ ಜೋಡಿ, ತಮ್ಮ ಪ್ರೀತಿ ಹಾಗೂ ಮದುವೆಯಾಗುವ ವಿಷಯವನ್ನು ಮನೆಯಲ್ಲಿ ಹೇಳಿಕೊಂಡಿದ್ದರು. ಆದರೆ ಇದಕ್ಕೆ ಇಬ್ಬರ ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಹೀಗಾಗಿ ಇದೇ 23 ರಂದು ಈ ಜೋಡಿ ಬೆಂಗಳೂರಿಗೆ ಹೋಗಿ ಮದುವೆಯಾಗಿದೆ. ಆದರೆ ಹುಡುಗಿಯ ತಂದೆ ಅಣ್ಣಾಸಾಬ್ ಪಾಟೀಲ ತಮ್ಮ ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹೀಗಾಗಿ ಪೊಲೀಸರು ಹುಡುಗನ ಸಹೋದರ ಪ್ರದೀಪನನ್ನು ಠಾಣೆಗೆ ಕರೆಸಿ ಥಳಿಸಿದ್ದಾರೆ.

ಬೆಂಗಳೂರಲ್ಲಿ ಮದುವೆ ಮಾಡಿಕೊಂಡಿದ್ದ ಸಂದೀಪ-ಗೌರಿ ನಿನ್ನೆ ಬೆಳಗ್ಗೆ ತಮ್ಮ ಗ್ರಾಮಕ್ಕೆ ಮರಳಿದ್ದಾರೆ. ಮಗ ಮನೆಗೆ ಬರುತ್ತಿದ್ದಂತೆ ಪಾಲಕರು ಇಬ್ಬರನ್ನೂ ಮನೆ ತುಂಬಿಸಿಕೊಂಡಿದ್ದಾರೆ.

ಇತ್ತ ಹುಡುಗಿಯ ಪಾಲಕರ ಕಿರುಕುಳ ಹೆಚ್ಚಾಗುತ್ತಿದ್ದಂತೆ ಸಂದೀಪ ತನ್ನ ಪತ್ನಿ, ತಂದೆ-ತಾಯಿ ಹಾಗೂ ಸಹೋದರನ ಸಮೇತ ಬೆಳಗಾವಿ ಎಸ್‍ಪಿ ಕಚೇರಿಗೆ ಬಂದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀಂದ್ರಕುಮಾರ ರೆಡ್ಡಿ ಅವರನ್ನು ಭೇಟಿ ಮಾಡಿ ಭದ್ರತೆ ನೀಡುವಂತೆ ಕೋರಿದರು.
Loading...

 

 
First published:June 27, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...