• Home
  • »
  • News
  • »
  • state
  • »
  • SS Mallikarjun: ಮಾಜಿ ಸಚಿವರ ಫಾರ್ಮ್​ಹೌಸ್​​ನಲ್ಲಿ ಜೀವಂತ ಜಿಂಕೆ, ನರಿ, ಮುಂಗುಸಿ, ನರಿಗಳು ಪತ್ತೆ

SS Mallikarjun: ಮಾಜಿ ಸಚಿವರ ಫಾರ್ಮ್​ಹೌಸ್​​ನಲ್ಲಿ ಜೀವಂತ ಜಿಂಕೆ, ನರಿ, ಮುಂಗುಸಿ, ನರಿಗಳು ಪತ್ತೆ

ಎಸ್​.ಎಸ್​.ಮಲ್ಲಿಕಾರ್ಜುನ್, ಮಾಜಿ ಸಚಿವ

ಎಸ್​.ಎಸ್​.ಮಲ್ಲಿಕಾರ್ಜುನ್, ಮಾಜಿ ಸಚಿವ

ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಎಸ್​.ಎಸ್.ಮಲ್ಲಿಕಾರ್ಜುನ್ ಒಡೆತನದ ಫಾರ್ಮ್​ಹೌಸ್​ನಲ್ಲಿ ಜೀವಂತ ವನ್ಯಪ್ರಾಣಿಗಳು ಪತ್ತಯಾಗಿವೆ.

  • News18 Kannada
  • 2-MIN READ
  • Last Updated :
  • Davanagere, India
  • Share this:

ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ (Former Minister SS Mallikarjun) ಫಾರ್ಮ್‌ ಹೌಸ್‌ ಮೇಲೆ ಸಿಸಿಬಿ ಪೊಲೀಸರು (CCB Police) ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ (Forest Officers) ದಾಳಿ ನಡೆಸಿದ್ದಾರೆ. ಎಸ್​.ಎಸ್.ಮಲ್ಲಿಕಾರ್ಜುನ್ ದಾವಣಗೆರೆಯ ಕಲ್ಲೇಶ್ವರ ಮಿಲ್‌ ಹಿಂಭಾಗದ ಫಾರ್ಮ್‌ ಹೌಸ್‌ ಹೊಂದಿದ್ದು, ಇಲ್ಲಿ ಪ್ರಾಣಿ ಸಾಕಾಣಿಕೆ ಮಾಡಿಕೊಂಡಿದ್ದಾರೆ. ಆದ್ರೆ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿರೋದು ಸಿಸಿಬಿ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಸಿಸಿಬಿ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ ಎಂದು ತಿಳಿದು ಬಂದಿದೆ. ಸಿಸಿಬಿ ಪೊಲೀಸರು ವನ್ಯಜೀವಿಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.


ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?


ಬೆಂಗಳೂರಿನ ಹೆಬ್ಬಾಳದಲ್ಲಿ ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್‌ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ವೇಳೆ ಬಂಧಿತನನ್ನ ವಿಚಾರಣೆಗೆ ಒಳಪಡಿಸಿದಾಗ ದಾವಣಗೆರೆಯಿಂದ ಚರ್ಮ ಹಾಗೂ ಕೊಂಬು ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದನು.


ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಎಸ್​.ಎಸ್.ಮಲ್ಲಿಕಾರ್ಜುನ್ ಒಡೆತನದ ಫಾರ್ಮ್​ಹೌಸ್​ನಲ್ಲಿ ಜೀವಂತ ವನ್ಯಪ್ರಾಣಿಗಳು ಪತ್ತಯಾಗಿವೆ. ಸಿಸಿಬಿ ಪೊಲೀಸರು ಸೆಂಥಿಲ್‌ನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿ, ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.


ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಅರಣ್ಯ ಇಲಾಖೆ ನ್ಯಾಯಾಲಯಕ್ಕೆ ಕೇಳಿಕೊಂಡಿದೆ. ಆದೇಶದ ಪ್ರತಿ ಸಿಗುತ್ತಿದ್ದಂತೆಯೇ ತನಿಖಾಧಿಕಾರಿಯನ್ನು ನೇಮಿಸಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.


ಇದನ್ನೂ ಓದಿ: Exclusive |Davanagere: ರಾತ್ರಿ 2ರವರೆಗೂ ಯುವಕ, ಯುವತಿಯರ ಲೇಟ್ ನೈಟ್ ಪಾರ್ಟಿ; ಇಲ್ಲಿ ಜೋಡಿಗಳಿಗೆ ಮಾತ್ರ ಎಂಟ್ರಿ


ಎಸ್​ಎಸ್​ ಮಲ್ಲಿಕಾರ್ಜುನ್ ಪ್ರತಿಕ್ರಿಯೆ


ನಾವು ಅನುಮತಿ ಪಡೆದುಕೊಂಡು ಪ್ರಾಣಿಗಳನ್ನು ಸಾಕಿದ್ದೇವೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರಂತೆ. ಈ ಬಗ್ಗೆ ಅರಣ್ಯ ಇಲಾಖೆ ಈ ಬಗ್ಗೆ ಮಾಹಿತಿ ನೀಡಿಲ್ಲ.

Published by:Mahmadrafik K
First published: