LKG, UKG ಆರಂಭಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್: ಷರತ್ತುಗಳು ಅನ್ವಯ
ಶಾಲೆಗೆ ಹಾಜರಾಗುವ ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಶಿಕ್ಷಕರು ಕಡ್ಡಾಯವಾಗಿ ಗಮನ ನೀಡಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶದ ಜೊತೆ ಶಾಲೆಗಳು ಮತ್ತು ಪೋಷಕರು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಸಹ ಸರ್ಕಾರ ಬಿಡುಗಡೆಗೊಳಿಸಿದೆ.
ಬೆಂಗಳೂರು: LKG ಮತ್ತು UKGಯ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ತರಗತಿ ನಡೆಸಲು ಸರ್ಕಾರ ಸಮ್ಮತಿ ನೀಡಿದ್ದು, ವಾರದಲ್ಲಿ ಎರಡು ದಿನ ಮಕ್ಕಳಿಗೆ ರಜೆ ನೀಡಬೇಕು. ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ಅವಧಿಗೆ ವೇಳಾಪಟ್ಟಿ ನಿಗಧಿ ಮಾಡಿಕೊಳ್ಳುವಂತೆ ಹೇಳಲಾಗಿದೆ. ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಕಂಡು ಬಂದಲ್ಲಿ ಶಾಲೆಯನ್ನು ಮುಚ್ಚಿ ಸ್ಯಾನಿಟೈಸ್ ಮಾಡಿ ಸ್ಥಳೀಯ ಆರೋಗ್ಯಾಧಿಕಾರಿಗಳ ಮಾರ್ಗದರ್ಶನದಂತೆ ಶಾಲೆ ಆರಂಭಿಸಬೇಕು. ಶಾಲೆಗೆ ಹಾಜರಾಗುವ ಪ್ರತಿ ಮಗುವಿನ ಆರೋಗ್ಯದ ಬಗ್ಗೆ ಶಿಕ್ಷಕರು ಕಡ್ಡಾಯವಾಗಿ ಗಮನ ನೀಡಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶದ ಜೊತೆ ಶಾಲೆಗಳು ಮತ್ತು ಪೋಷಕರು ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಸಹ ಸರ್ಕಾರ ಬಿಡುಗಡೆಗೊಳಿಸಿದೆ.
ಶಾಲೆ ಆರಂಭಕ್ಕೆ ಮಾರ್ಗಸೂಚಿಗಳು
ದಿನಾಂಕ ನವೆಂಬರ್ 8, 2021 ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ LKG ಮತ್ತು UKG ತರಗತಿಗಳಿಗೆ ಅರ್ಧ ದಿನ ಭೌತಿಕ ತರಗತಿ ಆರಂಭಿಸುವುದು.
ಕೋವಿಡ್-19 ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲುಕೂಗಳಲ್ಲಿ ಮಾತ್ರ ಶಾಲೆ ಆರಂಭಕ್ಕೆ ಅನುಮತಿ
ಸರ್ಕಾರದ ಮಾರ್ಗಸೂಚಿಯಂತೆ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವುದು
ಶಾಲೆಗೆ ಹಾಜರಾಗುವ ಎಲ್ಲ LKG ಮತ್ತು UKG ವಿದ್ಯಾರ್ಥಿಗಳು ಪೋಷಕರಿಗೆ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
ಶಾಲೆಗೆ ಹಾಜರಾಗುವ ಶಿಕ್ಷಕರು ಮತ್ತು ಮಕ್ಕಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ಸಹ ಎರಡು ಡೋಸ್ ಲಸಿಕೆ ಪಡೆದಿರಬೇಕು. 50 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರು ಹೆಚ್ಚುವರಿಯಾಗಿ ಫೇಸ್ ಶೀಲ್ಡ್ ಧರಿಸಬೇಕು.
ಮಕ್ಕಳಿಗೆ ಮನೆಯಿಂದಲೇ ಉಪಹಾರ ಮತ್ತು ಕುಡಿಯುವ ನೀರನ್ನು ಕಳುಹಿಸುವಂತೆ ಪೋಷಕರಿಗೆ ಕಡ್ಡಾಯವಾಗಿ ತಿಳಿಸುವುದು.
ಅವಶ್ಯಕತೆ ಅನುಸಾರ ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡುವುದು.
ಮಕ್ಕಳ ಭೌತಿಕ ಹಾಜರಾತಿಯನ್ನು ಪರಿಗಣಿಸಿ ಪ್ರತಿ ತರಗತಿಯಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡೋದರ ಜೊತೆಗೆ ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದು.
ಶಾಲೆಯ ಪ್ರವೇಶದ್ವಾರದ ಬಳಿ ಕೋವಿಡ್-19 ಲಕ್ಷಣದ ಪರೀಕ್ಷೆಯ ಕುರಿತು ತಪಾಸಣೆ.
ಮಕ್ಕಳಲ್ಲಿ ಕೋವಿಡ್-19 ಲಕ್ಷಣಗಳು ಕಂಡು ಬಂದ್ರೆ, ಕೂಡಲೇ ಅವರನ್ನು ಪ್ರತ್ಯೇಕವಾಗಿರಿಸಿ ಪೋಷಕರಿಗೆ ಮಾಹಿತಿ ನೀಡುವುದು.
ಮಕ್ಕಳು ಕೆಮ್ಮುವಾಗು ಅಥವಾ ಸೀನುವಾಗ ಕರವಸ್ತ್ರದಿಂದ ಬಾಯಿ, ಮೂಗನ್ನು ಮುಚ್ಚಿಕೊಳ್ಳಲು ತಿಳಿಸುವುದು.
ಮಗುವಿನ ಕುಟುಂಬದಲ್ಲಿ ಯಾರಾದ್ರೂ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ರೋಗ ಲಕ್ಷಣಗಳಾದ ಕೆಮ್ಮು, ನೆಗಡಿ, ಗಂಟಲು ನೋವು ಅಥವಾ ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದರೆ ಅಂತಹ ಮಕ್ಕಳನ್ನು ಶಾಲೆಗೆ ಕರೆತದಂತೆ ನೋಡಿಕೊಳ್ಳುವುದು.
ಯಾವುದಾದರೂ ಮಗುವಿಗೆ ಕೋವಿಡ್ ಪಾಸಿಟಿವ್ ಕಾಣಿಸಿದ್ರೆ, ಕಡ್ಡಾಯವಾಗಿ ಎಲ್ಲ ಮಕ್ಕಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು.
ನೆಲ ಮತ್ತು ಕೈ ತೊಳೆಯುವ ಸ್ಥಳದಲ್ಲಿ ನೈರ್ಮಲ್ಯ ಕಾಪಾಡುವುದು, ನಿಯಮಿತವಾಗಿ ಸೋಂಕು ನಿವಾರಕ/ ಸಾಮಾನ್ಯವಾಗಿ ಬಳಸುವ ಡಿಟರ್ಜೆಂಟ್ ನಿಂದ / 1% ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಬಳಸಿ ಸರ್ಕಾರದ ಮಾರ್ಗಸೂಚಿಯಂತೆ ಶುದ್ಧೀಕರಿಸುವುದು.
ಶಾಲೆ ಆರಂಭಕ್ಕೆ ಬಹುತೇಕ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ತಿಂಗಳು ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿತ್ತು. ಇದೀಗ LKG ಹಾಗೂ UKG ಸಹ ಆರಂಭಿಸಲು ಅನುಮತಿ ನೀಡಿದೆ. ಶಾಲೆಗಳ ಜೊತೆಯಲ್ಲಿ ಪೋಷಕರು ಸಹ ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಬೇಕು. ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಾಣಿಸುತ್ತಲೇ ವೈದ್ಯರ ಸಲಹೆ ಪಡೆದುಕೊಳ್ಳಿ.
Published by:Mahmadrafik K
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ