ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ರದ್ದು: ಹೈಕೋರ್ಟ್​​ ಆದೇಶ

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್

ಕರ್ನಾಟಕ ಹೈಕೋರ್ಟ್

  • Share this:
ಬೆಂಗಳೂರು(ನವೆಂಬರ್​.19): ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್​ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗೆ ಸರ್ಕಾರ ಹೊರಡಿಸಿದ್ದ ಮೀಸಲಾತಿಯ ಅಧಿಸೂಚನೆಯನ್ನ ಹೈಕೋರ್ಟ್ ರದ್ದುಪಡಿಸಿದೆ. ಅಕ್ಟೋಬರ್ 8ರಂದು ರಾಜ್ಯದ ಒಟ್ಟು 277 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಬಹಳಷ್ಟು ಕಡೆ ಚುನಾವಣೆ ನಡೆದು ಅಧ್ಯಕ್ಷ - ಉಪಾಧ್ಯಕ್ಷರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಈ ಆದೇಶದಿಂದ ಈ ಚುನಾವಣಾ ಫಲಿತಾಂಶಗಳು ಅಮಾನತು ಸ್ಥಿತಿಯಲ್ಲಿರುತ್ತದೆ. ಅಂದರೆ ಅಧ್ಯಕ್ಷ ಉಪಾಧ್ಯಕ್ಷರು ಯಾವುದೇ ಅಧಿಕಾರ ನಡೆಸುವಂತಿಲ್ಲ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ : BTS 2020 - ಡಿಜಿಟಲ್ ಮೂಲಸೌಕರ್ಯ ವೃದ್ಧಿಗೆ ಕೇಂದ್ರದ ಒತ್ತು ; ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ. ಆಪ್ಟಿಕ್ ಫೈಬರ್ ಜಾಲ ; ರವಿಶಂಕರ್ ಪ್ರಸಾದ್

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ದಿನಾಂಕವೂ ಫಿಕ್ಸ್ ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, 4 ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಇದರೊಂದಿಗೆ ಇತ್ತೀಚೆಗೆ ರಾಜ್ಯ ಸರ್ಕಾರದ ಮೀಸಲಾತಿಯಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್​ಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದವರಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ.
Published by:G Hareeshkumar
First published: