• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ರಾಜ್ಯ ಹೆದ್ದಾರಿಯಲ್ಲಿ ಭತ್ತ ನಾಟಿ ಮಾಡಿ ರಸ್ತೆ ಸರಿಪಡಿಸುವಂತೆ ಪ್ರತಿಭಟನೆ

ರಾಜ್ಯ ಹೆದ್ದಾರಿಯಲ್ಲಿ ಭತ್ತ ನಾಟಿ ಮಾಡಿ ರಸ್ತೆ ಸರಿಪಡಿಸುವಂತೆ ಪ್ರತಿಭಟನೆ

ರಾಜ್ಯ ಹೆದ್ದಾರಿಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ

ರಾಜ್ಯ ಹೆದ್ದಾರಿಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ

ಗುಂಡಿಗಳು ನೀರಿನಲ್ಲಿ ಮುಚ್ಚಿಹೋಗಿರುವುದರಿಂದ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡೇ ಸಂಚರಿಸಬೇಕಾಗಿದೆ. ಆದರೂ ಕಳೆದ ನಾಲ್ಕು ವರ್ಷಗಳಿಂದ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಈ ಸ್ಥಿತಿ ನಿರ್ಮಾಣವಾಗುವುದರಿಂದ ಜನಪ್ರತಿನಿಧಿಗಳಿಗೆ ಹಾಗೂ  ಅಧಿಕಾರಗಳಿಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಮುಂದೆ ಓದಿ ...
  • Share this:

ಹಾವೇರಿ(ಆ.14): ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತುಮ್ಮಿನಕಟ್ಟಿ, ಹಳ್ಳೂರು, ಹೊನ್ನಾಳಿ, ಶಿವಮೊಗ್ಗ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಕೆಸರು ಗದ್ದೆಯಾಗಿದ್ದು, ಹಳ್ಳೂರು ಗ್ರಾಮಸ್ಥರು ರಸ್ತೆ ನಡುವೆ ಭತ್ತ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು. 


ರಟ್ಟೀಹಳ್ಳಿಯಿಂದ ಕಡೂರು ಮಾರ್ಗವಾಗಿ ಹಳ್ಳೂರು ಹೊನ್ನಾಳಿ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯಲ್ಲಿ ಗುಂಡಿಗಳು ನಿರ್ಮಾಣವಾಗಿರುವುದರಿಂದ ಈ ರಸ್ತೆಯಲ್ಲಿಸಂಚಾರ ಮಾಡುವ ಪ್ರಯಾಣಿಕರು, ವಾಹನ ಸವಾರರು ಈ ರಸ್ತೆ ಯಾವಾಗ ದುರಸ್ತಿ ಕಾಣುತ್ತದೆಯೊ ಎಂದು ಪ್ರಶ್ನೆ ಮಾಡುತ್ತಿದ್ದಾರೆ.


ಈ ರಸ್ತೆ ಕೃಷಿ ಸಚಿವರು ತವರು ಕ್ಷೇತ್ರದಿಂದ ಮುಖ್ಯಮಂತ್ರಿಗಳ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಪ್ರತಿನಿತ್ಯ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಜನರು ಶಿವಮೊಗ್ಗ ಜಿಲ್ಲೆಗೆ ಪ್ರಯಾಣ ಬೆಳಸಬೇಕಾದರೆ ಇದೇ ರಸ್ತೆಯನ್ನೇ ಉಪಯೋಗಿಸಬೇಕು. ಹೀಗಾಗಿ ಈ ರಸ್ತೆ ದುರಸ್ತಿ ಮಾಡಲು ಹಲವಾರು ಬಾರಿ ಮನವಿ ಮಾಡಿದ್ದಾರೆ ಆದರೂ ರಸ್ತೆ ಮಾತ್ರ ದುರಸ್ತಿಯಾಗಿಲ್ಲ. ಇನ್ನೂ ಮಳೆಗಾಲದಲ್ಲಿ ಈ ರಸ್ತೆ ಮೇಲೆ ಸಂಚರಿಸಿದರೆ ಕೆಸರು ಗದ್ದೆಯಲ್ಲಿ ಸಂಚರಿಸಿದ ಅನುಭವ ಆಗುತ್ತದೆ.


‘ಹಾಸನದಲ್ಲಿ ಭಾರೀ ಮಳೆಗೆ ಬೆಳೆ ಹಾನಿ; ಹೆಚ್ಚುವರಿ ಪರಿಹಾರಕ್ಕಾಗಿ ಸರ್ಕಾರಕ್ಕೆ ವಿಶೇಷ ಪ್ರಸ್ತಾಪ‘ - ಜಿಲ್ಲಾಧಿಕಾರಿ


ಗುಂಡಿಗಳು ನೀರಿನಲ್ಲಿ ಮುಚ್ಚಿಹೋಗಿರುವುದರಿಂದ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡೇ ಸಂಚರಿಸಬೇಕಾಗಿದೆ. ಆದರೂ ಕಳೆದ ನಾಲ್ಕು ವರ್ಷಗಳಿಂದ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಈ ಸ್ಥಿತಿ ನಿರ್ಮಾಣವಾಗುವುದರಿಂದ ಜನಪ್ರತಿನಿಧಿಗಳಿಗೆ ಹಾಗೂ  ಅಧಿಕಾರಗಳಿಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

top videos


    ರಸ್ತೆ ಮಾತ್ರ ದುರಸ್ತಿ ಕಾಣದೆ ಮತ್ತಷ್ಟು ಹಾಳಾಗಿ ಹೋಗುತ್ತಿದೆ. ಈ ಹಿಂದೆ ಚುನಾವಣೆ ಸಂಧರ್ಭದಲ್ಲಿ ಮುಖ್ಯಮಂತ್ರಿಗಳು ಸಚಿವರು ಇದೇ ಮಾರ್ಗವಾಗಿ ಸಂಚಾರ ಮಾಡುವಾಗ ಅಧಿಕಾರಿಗಳು ರಸ್ತೆಗೆ ತೇಪೆ ಹಚ್ಚಿ ಎಲ್ಲವೂ ಸರಿಯಾಗಿದೆ ಎನ್ನುವ ರೀತಿ ನೋಡಿಕೊಂಡಿದ್ದರು.


    ಈ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ದುರಸ್ತಿ ಕಂಡಿಲ್ಲ. ಇನ್ನು ಮುಂದಾದರೂ ಸರಕಾರ, ಜನಪ್ರತಿನಿಧಿಗಳು ಸಂಬಂಧಪಟ್ಟ ಅಧಿಕಾರಿಗಳು ರಸ್ತೆಗಳ ಕಡೆಗೆ ಗಮನ ಹರಿಸಿ, ದುರಸ್ತಿ ಮಾಡಿ ಜನರಿಗೆ ಅನುಕೂಲಮಾಡಿಕೊಡಬೇಕೆಂದು ಹಳ್ಳೂರು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    First published: