ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಕುಂದಗೋಳ, ಚಿಂಚೋಳಿ ಉಪಚುನಾವಣೆಯತ್ತ ಕಾಂಗ್ರೆಸ್​​-ಬಿಜೆಪಿ ಚಿತ್ತ

ಈಗ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಪ್ರತಿಷ್ಠೆಯ ಸವಾಲಾಗಿದೆ. ಎರಡೂ ಕ್ಷೇತ್ರಗಳನ್ನ ಉಳಿಸಿಕೊಳ್ಳುವ ಒತ್ತಡದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಇವೆರಡನ್ನೂ ಗೆದ್ದು ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಹತಾಶೆಯಲ್ಲಿದೆ.

Ganesh Nachikethu | news18
Updated:April 24, 2019, 12:59 PM IST
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಅಂತ್ಯ: ಕುಂದಗೋಳ, ಚಿಂಚೋಳಿ ಉಪಚುನಾವಣೆಯತ್ತ ಕಾಂಗ್ರೆಸ್​​-ಬಿಜೆಪಿ ಚಿತ್ತ
ಸಿದ್ದರಾಮಯ್ಯ- ಯಡಿಯೂರಪ್ಪ
Ganesh Nachikethu | news18
Updated: April 24, 2019, 12:59 PM IST
ಬೆಂಗಳೂರು(ಏ.24): ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ಶಾಂತಿಯುತವಾಗಿ ಮುಕ್ತವಾಗಿದೆ. ಈ ಬೆನ್ನಲ್ಲೇ ಡಾ. ಉಮೇಶ್ ಜಾಧವ್ ಅವರ​​ ರಾಜೀನಾಮೆ ಕಾರಣದಿಂದಾಗಿ ತೆರವಾದ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರಗಳ ಉಪಚುನಾವಣೆ ಎದುರಾಗುತ್ತಿದೆ. ಏಕಕಾಲದಲ್ಲಿಯೇ ಮೇ 19ರಂದು ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್​​-ಬಿಜೆಪಿ ಮುಂದಾಗಿದೆ.

ಈಗಾಗಲೇ ಕುಂದಗೋಳದ ಜೊತೆ ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಈ ಎರಡೂ ಕ್ಷೇತ್ರಗಳಿಗೂ ಮೇ 19ರಂದು ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಮೇ 23ರಂದು ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಜೊತೆಗೆ ಈ ಎರಡೂ ವಿಧಾನಸಭಾ ಕ್ಷೇತ್ರಗಳ ಫಲಿತಾಂಶವೂ ಪ್ರಕಟವಾಗಲಿದೆ ಎನ್ನಲಾಗಿದೆ.

ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಬಳಿಕ ಅವರೇ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಕಾಂಗ್ರೆಸ್​ನ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ: ಕೊನೆ ಕ್ಷಣದವರೆಗೂ ಆಪ್ ಜತೆ ಮೈತ್ರಿಗೆ ಕಾಂಗ್ರೆಸ್​​​ ಸಿದ್ಧ: ರಾಹುಲ್ ಗಾಂಧಿ

ಇನ್ನು, ಕುಂದಗೋಳ ವಿಧಾನಸಭಾ ಕ್ಷೇತ್ರ ಕೂಡ ಹಾಲಿ ಕಾಂಗ್ರೆಸ್ ಶಾಸಕ ಸಿಎಸ್ ಶಿವಳ್ಳಿ ಅವರ ನಿಧನದಿಂದ ತೆರವಾಗಿದೆ.

ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭೆ ಉಪಚುನಾವಣೆಯ ದಿನಾಂಕಗಳು:ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 29
ನಾಮಪತ್ರ ಪರಿಶೀಲನೆ: ಏಪ್ರಿಲ್ 30
ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಮೇ 2
ಮತದಾನದ ದಿನ: ಮೇ 19
ಮತ ಎಣಿಕೆ: ಮೇ 23

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್​ನ  ಶಿವಳ್ಳಿ ಅವರು ಬಿಜೆಪಿಯ ಚಿಕ್ಕನಗೌಡ್ರ ವಿರುದ್ಧ 634 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ

ಚಿಂಚೋಳಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಅವರು 19 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದರು. ಬಿಜೆಪಿಯ ಸುನೀಲ್ ವಲ್ಯಾಪುರೆ ಅವರು 54,693 ಮತ ಪಡೆದು ಎರಡನೇ ಸ್ಥಾನ ಪಡೆದಿದ್ದರು.

ಈಗ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಪ್ರತಿಷ್ಠೆಯ ಸವಾಲಾಗಿದೆ. ಎರಡೂ ಕ್ಷೇತ್ರಗಳನ್ನ ಉಳಿಸಿಕೊಳ್ಳುವ ಒತ್ತಡದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಇವೆರಡನ್ನೂ ಗೆದ್ದು ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಹತಾಶೆಯಲ್ಲಿದೆ.
-------------
First published:April 24, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ