ತುಮಕೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Channagiri BJP MLA Madal Virupakshappa) ಅರೆಸ್ಟ್ (Arrest) ಆಗಿದ್ದಾರೆ. ಇಂದು ಹೈಕೋರ್ಟ್ (High Court) ಮಾಡಾಳ್ ವಿರೂಪಾಕ್ಷಪ್ಪಗೆ ನಿರೀಕ್ಷಣಾ ಜಾಮೀನು (anticipatory bail) ನಿರಾಕರಿಸಿತ್ತು. ಇಷ್ಟಾಗುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಿಂದ (Channagiri) ಬೆಂಗಳೂರಿಗೆ (Benagluru) ಬರುವ ಯತ್ನ ಮಾಡಿದ್ದರು. ಅತ್ತ ಲೋಕಾಯುಕ್ತ ಪೊಲೀಸರು (Lokayukta Police) ಅವರನ್ನು ಬಂಧಿಸುವ ಉದ್ದೇಶದಿಂದ ಮಾಡಾಳ್ ನಿವಾಸಕ್ಕೆ ಹೊರಟಿದ್ದರು. ಈ ಮಧ್ಯೆ ಬೆಂಗಳೂರಿಗೆ ಬರುತ್ತಿದ್ದ ವೇಳೆ ತುಮಕೂರಿನ (Tumkur) ಕ್ಯಾತಸಂದ್ರ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದ್ದಾರೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿರೀಕ್ಷಣಾ ಜಾಮೀನು ತಿರಸ್ಕಾರಗೊಂಡ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಿಸುತ್ತಾ ಇದ್ದರು. ಇದೀಗ ಅವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತುಮಕೂರು ಬಳಿ ಅರೆಸ್ಟ್ ಮಾಡಿದ ಲೋಕಾಯುಕ್ತ ಪೊಲೀಸ್
ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಅರೆಸ್ಟ್ ಮಾಡಿದ್ದಾರೆ. ಚನ್ನಗಿರಿಯ ತಮ್ಮ ನಿವಾಸದಿಂದ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನ ಕಡೆ ಬರುತ್ತಾ ಇದ್ದರು. ಈ ವೇಳೆ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗಲೇ ಮಾರ್ಗಮಧ್ಯೆ ಲೋಕಾಯುಕ್ತ ಪೊಲೀಸರು ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: Madal Virupakshappa: ಬಂಧನ ಭೀತಿಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ, ಪೊಲೀಸರು ಬರುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ಎಸ್ಕೇಪ್!
ಮಾಡಾಳ್ ಪುತ್ರನ ಕಚೇರಿಯಲ್ಲಿ ಸಿಕ್ಕಿತ್ತು ಕೋಟಿ ಕೋಟಿ ಹಣ
ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದರು. ಅವರ ಪುತ್ರ ಬಿಡಬ್ಲ್ಯೂಎಸ್‌ಎಸ್‌ಬಿಯಲ್ಲಿ ಚೀಫ್ ಅಕೌಂಟೆಂಟ್ ಆಗಿದ್ದು, ತಂದೆಯ ನಿಗಮದಲ್ಲಿ ಟೆಂಡರ್ ನೀಡಲು ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದು ಹಣದೊಂದಿಗೆ ಮಾಡಾಳ್ ಪ್ರಶಾಂತ್‌ನನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದರು.
ಈ ಹಿಂದೆಯೂ ಎಸ್ಕೇಪ್ ಆಗಿದ್ದ ಶಾಸಕ
ಈ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಎ1 ಆರೋಪಿ ಅಂತ ಹೆಸರಿಸಲಾಗಿತ್ತು. ಇಷ್ಟೆಲ್ಲಾ ಆಗುತ್ತಿದ್ದಂತೆ ಯಾರ ಸಂಪರ್ಕಕ್ಕೂ ಸಿಗದೇ ಮಾಡಾಳ್ ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಬಳಿಕ ಕೋರ್ಟ್ ಜಾಮೀನು ನೀಡುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದರು.
ಎ1 ಆರೋಪಿಯಾಗಿರುವ ಮಾಡಾಳ್
ಪುತ್ರ ಮಾಡಾಳು ಪ್ರಶಾಂತ್ ಕೋಟಿ ಕೋಟಿ ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಆತನನ್ನು ಲೋಕಾಯುಕ್ತರು ಬಂಧಿಸಿ, ಎಫ್ಐಆರ್ ದಾಖಲಿಸಿದ್ದರು. ಇದರಲ್ಲಿ ಎ1 ಆರೋಪಿಯಾಗಿ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಹೆಸರಿಸಲಾಗಿತ್ತು. ಇದಾಗುತ್ತಿದ್ದಂತೆ ಚನ್ನಗಿರಿಯ ಮಾಡಾಳು ಗ್ರಾಮದಿಂದ ಬೆಂಗಳೂರಿಗೆ ಬಂದಿದ್ದ ಮಾಡಾಳು ವಿರೂಪಾಕ್ಷಪ್ಪ, ಸಿಎಂ ಕಚೇರಿಗೆ ತೆರಳಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನಾಪತ್ತೆಯಾಗಿದ್ದರು.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಈ ನಡುವೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದ್ದು, ನ್ಯಾಯಪೀಠ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: Madalu Prashant: ಬಗೆದಷ್ಟು ಹೊರ ಬರುತ್ತಿದೆ ಮಾಡಾಳು ಮಗನ ಭ್ರಷ್ಟಾಚಾರ! ಡೀಲ್ ನಡೆಸ್ತಿದ್ದನಾ ಪ್ರಶಾಂತ್?
ಬೆಳಗ್ಗೆ ಕಾರ್ಯಕ್ರಮಕ್ಕೆ ಹಾಜರ್, ಸಂಜೆ ಎಸ್ಕೇಪ್
ಇನ್ನು ಬೆಳಗ್ಗೆಯಿಂದ ಸರ್ಕಾರಿ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಕೋರ್ಟ್ ನಿಂದ ಜಾಮೀನು ಅರ್ಜಿ ತಿರಸ್ಕರಿಸಿದ ಸುದ್ದಿ ಬರುತ್ತಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಇಂದು ಬೆಳಗ್ಗೆ ವಿವಿಧ ಕಾಮಗಾರಿ, ಶಂಕುಸ್ಥಾಪನೆಗೆ ಚಾಲನೆ ನೀಡಿದ್ದ ವಿರೂಪಾಕ್ಷಪ್ಪ, ಇದೀಗ ಬಂಧನ ಭೀತಿಯಿಂದ ಅಲ್ಲಿಂದ ಎಸ್ಕೇಪ್ ಆಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ