Lorry strike: ನಾಳೆ ರಾಜ್ಯಾದ್ಯಂತ ಲಾರಿ ಮುಷ್ಕರ; ಡಿಸೇಲ್​ ಸೆಸ್ ದ​ರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

ನಾಳೆ ಒಂದು ದಿನ ಸಾಕೇಂತಿಕ ಮುಷ್ಕರ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ. ಸರ್ಕಾರ ಮಾತುಕತೆ ನಡೆಸಲಿಲ್ಲ ಎಂದರೆ ಮಾರ್ಚ್ 15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು (ಫೆ. 25): ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ನಾಳೆ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ,  ಒಂದು ಕಿಲೋಮೀಟರ್ ಗೆ ಲಾರಿ ಓಡಿಸಲು ಮಾಲೀಕರಿಗೆ 36 ರೂ. ವೆಚ್ಚವಾಗುತ್ತಿದೆ. ರಾಜ್ಯದಿಂದ 40 ಸಾವಿರ ಲಾರಿಗಳು ಬೇರೆ ರಾಜ್ಯಗಳಿಗೆ ಹೋಗುತ್ತಿವೆ. ಹೊರ ರಾಜ್ಯದಲ್ಲಿ ಡಿಸೇಲ್ ಕಡಿಮೆ ಇದೆ. ಕಡಿಮೆ ಇರುವ ರಾಜ್ಯಗಳಿಂದ ಮಾಲೀಕರು ಡಿಸೇಲ್ ಹಾಕಿಸಿಕೊಂಡು ಬರುತ್ತಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ. ಈ ಹಿನ್ನಲೆ ಪ್ರತಿ ಲೀಟರ್ ಡಿಸೇಲ್ ಗೆ 3 ರೂ ಸೆಸ್ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಅವರು ಮನವಿ ಮಾಡಿದರು. 

    ಅಷ್ಟೇ ಅಲ್ಲದೇ ,ಟೋಲ್, ವಿಮೆ ಹೆಚ್ಚಳದಿಂದ ಟ್ರಕ್ಕಿಂಗ್ ಉದ್ಯಮದಲ್ಲಿ ನಾವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಸ್ಕ್ರಾಪಿಂಗ್ ನೀತಿ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್6 ವಾಹನಗಳ ವೆಚ್ಚ, ವಾಹನಗಳ ಬಿಡಿಭಾಗಗಳ ದರ ಹೆಚ್ಚಳದಿಂದ ಸಮಸ್ಯೆಯಾಗಿದೆ. ಈ ಹಿನ್ನಲೆ ನಾಳೆ ಒಂದು ದಿನ ಸಾಕೇಂತಿಕ ಮುಷ್ಕರ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ.  ಈ ಬಗ್ಗೆ ಕೂಡಲೇ ಸರ್ಕಾರ ಮಾತುಕತೆಗೆ ಕರೆಯಬೇಕು. ಸರ್ಕಾರ ಮಾತುಕತೆ ನಡೆಸಲಿಲ್ಲ ಎಂದರೆ ಮಾರ್ಚ್ 15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಇದನ್ನು ಓದಿ: ಇನ್ಮೇಲೆ ಲೋಕಲ್ ಪ್ಯಾಸೆಂಜರ್ ರೈಲು ಪ್ರಯಾಣ ಕೂಡ ದುಬಾರಿ: ಅನಗತ್ಯ ಪ್ರಯಾಣ ತಡೆಗೆ ಈ ಕ್ರಮ ಎಂದ ರೈಲ್ವೆ ಇಲಾಖೆ

    ದ್ದಾರಿಗಳಲ್ಲಿ ಟೋಲ್ ಲೂಟಿ ನಡೆಯುತ್ತಿದೆ. ಅವ ಮುಗಿದರೂ ಟೋಲ್ ಸಂಗ್ರಹ ನಡೆಯುತ್ತಿದೆ. ರಾಜ್ಯದಲ್ಲಿ 11 ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಅವ ಮುಗಿದರೂ ನಿರ್ವಹಣೆ ಹೆಸರಲ್ಲಿ ಸಂಗ್ರಹ ಮಾಡಲಾಗುತ್ತಿದೆ. ನೈಸ್ ರಸ್ತೆಯಲ್ಲಿ ಫಾಸ್ಟ್ ಟ್ಯಾಗ್ ಮಾಡಿಲ್ಲ. ಇದರಿಂದ ಕಿಲೋ ಮೀಟರ್ ಗಟ್ಟಲೇ ಸಾಲು ನಿಲ್ಲುತ್ತಿವೆ. ಕೂಡಲೇ ರಾಜ್ಯ ನೈಸ್ ರಸ್ತೆಯ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಸುವಂತೆ ಸೂಚಿಸಲು ಆಗ್ರಹಿಸಿದರು.



    ನಾಳಿನ ಲಾರಿ ಬಂದ್​ಗೆ ರಾಷ್ಟ್ರೀಯ ಟ್ರೇಡರ್ಸ್ ಯೂನಿಯನ್​ ವತಿಯಿಂದ ಬೆಂಬಲ ಸೂಚಿಸಿದ್ದಾರೆ. ನಾಳೆ ರಾಜ್ಯದಲ್ಲಿ ಲಾರಿಗಳು ಸಂಪೂರ್ಣ ಸಂಚಾರ ಬಂದ್​ ಮಾಡಲಿದೆ. ಆರು ಲಕ್ಷ ಲಾರಿಗಳು ರಸ್ತೆಗಳಿಗೆ ಇಳಿಯುವುದಿಲ್ಲ. ಲಾರಿ ಮಾಲೀಕರು ತಮ್ಮ ವಹಿವಾಟು ಸ್ಥಗಿತಗೊಳಿಸಿ ಬಂದ್ ಮಾಡಲಿದ್ದಾರೆ. ಇದರಿಂದ ಅಗತ್ಯ ವಸ್ತುಗಳ ಪೂರೈಕೆ ವ್ಯತ್ಯಯವಾಗುವ ಸಾಧ್ಯತೆ ಇದೆ.
    Published by:Seema R
    First published: