LPG Cylinder Price: ಮತ್ತೆ ಎಲ್​ಪಿಜಿ ಸಿಲಿಂಡರ್​ ಬೆಲೆ ಏರಿಕೆ; ಜನಸಾಮಾನ್ಯರಿಗೆ ಶಾಕ್ ಕೊಟ್ಟ ಸರ್ಕಾರ..!

ಕಳೆದ 2 ತಿಂಗಳಲ್ಲಿ ಸತತ ನಾಲ್ಕನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಹೊಸ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಯಾಗಲಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ಅ.06): ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ಪೆಟ್ರೋಲ್​-ಡೀಸೆಲ್ (Petrol-Diesel Price) ಹಾಗೂ ಅಡುಗೆ ಎಣ್ಣೆ ಬೆಲೆ (Cooking Oil Price)ಯೂ ಹೆಚ್ಚಾಗುತ್ತಿದೆ. ದಿನಬಳಕೆಯ ಗ್ಯಾಸ್​ ಸಿಲಿಂಡರ್(LPG Cylinder Price)​ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಸರ್ಕಾರ(Union Government) ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಪ್ರತಿದಿನ ಬಳಸುವ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​(LPG Price Hike) ಬೆಲೆಯನ್ನು ಈ ತಿಂಗಳು 15 ರೂಪಾಯಿ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ.

ಬುಧವಾರ ಎಲ್​ಪಿಜಿ ಸಿಲಿಂಡರ್ ಬೆಲೆ 15 ರೂಪಾಯಿ ಹೆಚ್ಚಾಗಿದೆ. ಕಳೆದ 2 ತಿಂಗಳಲ್ಲಿ ಸತತ ನಾಲ್ಕನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಹೊಸ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಯಾಗಲಿವೆ.

ಎಎನ್ಐ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ 14.2 ಕೆಜಿಯ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್ ಬೆಲೆ​ 899.50 ರೂಪಾಯಿ ಆಗಿದೆ. ಈ ಮೊದಲು 884.50 ರೂ. ಇತ್ತು. 5 ಕೆಜಿಯ ಎಲ್​ಪಿಜಿ ಸಿಲಿಂಡರ್​​ ಬೆಲೆ 502 ರೂಪಾಯಿ ಆಗಿದೆ. ಕಳೆದ 2 ತಿಂಗಳಿಂದೀಚೆಗೆ 4ನೇ ಬಾರಿ ಸಿಲಿಂಡರ್ ಬೆಲೆ ಏರಿಕೆ ಕಂಡಿದೆ. ಇದೇ ಅಕ್ಟೋಬರ್ 1ರಂದು ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ಗೆ 25 ರೂಪಾಯಿ ಹೆಚ್ಚಾಗಿತ್ತು.

ಇದನ್ನೂ ಓದಿ:LPG Gas Price Hike: ಗ್ರಾಹಕರಿಗೆ ಶಾಕಿಂಗ್ ನ್ಯೂಸ್; ಮತ್ತೆ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ

ಈ ವರ್ಷದ ಜನವರಿ ತಿಂಗಳಿನಿಂದ ಇಲ್ಲಿವರೆಗೆ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆ ಸುಮಾರು 205 ರೂಪಾಯಿ ಏರಿಕೆ ಕಂಡಿದೆ. ಸೆಪ್ಟೆಂಬರ್ 1ರಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಲಾಗಿತ್ತು. ಆಗಸ್ಟ್​ 17ರಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. 15 ದಿನಗಳ ಅಂತರದಲ್ಲಿ 2 ಬಾರಿ ಗ್ಯಾಸ್​ ಸಿಲಿಂಡರ್ ಬೆಲೆ ಏರಿಕೆಯಾಗಿತ್ತು.

ಈ ವರ್ಷ ಮೊದಲ ಬಾರಿಗೆ ಫೆಬ್ರವರಿ 4ರಂದು ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗೆ 25 ರೂಪಾಯಿ ಏರಿಸಲಾಗಿತ್ತು. ಬಳಿಕ ಫೆಬ್ರವರಿ 15ರಂದು 50 ರೂಪಾಯಿ ಏರಿಕೆ ಮಾಡಲಾಗಿತ್ತು. ಫೆಬ್ರವರಿ 25 ಮತ್ತು ಮಾರ್ಚ್​ 1ರಂದು ಮತ್ತೆ 25 ರೂ. ಹೆಚ್ಚಿಸಲಾಗಿತ್ತು. ಇದರೊಂದಿಗೆ ಫೆಬ್ರವರಿ ತಿಂಗಳೊಂದರಲ್ಲೇ 3 ಬಾರಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆ ಏರಿಸಲಾಗಿತ್ತು.

ಪ್ರತಿ ಗ್ಯಾಸ್​ ಸಿಲಿಂಡರ್​ಗೆ 125 ರೂಪಾಯಿ ಏರಿಕೆಯಾದ ಬಳಿಕ, ಏಪ್ರಿಲ್​ 1ರಂದು ಪ್ರತೀ ಸಿಲಿಂಡರ್​​ಗೆ 10 ರೂಪಾಯಿ ಕಡಿತ ಮಾಡಲಾಗಿತ್ತು. ಜುಲೈ, ಆಗಸ್ಟ್​ ಮತ್ತು ಸೆಪ್ಟೆಂಬರ್ ಹೀಗೆ ಸತತ 3 ತಿಂಗಳೂ ಸಹ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ತಲಾ 25 ರೂಪಾಯಿ ಹೆಚ್ಚಿಸಲಾಗಿತ್ತು. ಒಟ್ಟು ತಿಂಗಳಲ್ಲಿ 75 ರೂಪಾಯಿ ಏರಿಕೆ ಕಂಡಿತ್ತು.

ವಿವಿಧ ನಗರಗಳಲ್ಲಿ ಈ ಹಿಂದೆ ಇದ್ದ ಎಲ್​ಪಿಜಿ ಸಿಲಿಂಡರ್ ಬೆಲೆ:

ನವದೆಹಲಿ- 884.50 ರೂ.
ಕೊಲ್ಕತ್ತಾ-911 ರೂ.
ಮುಂಬೈ-884.50 ರೂ.
ಚೆನ್ನೈ-900.50 ರೂ.

ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಪೆಟ್ರೋಲ್​-ಡೀಸೆಲ್ ಬೆಲೆಯೂ ಹೆಚ್ಚಾಗುತ್ತಿದೆ. ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್​​ಗೆ 30 ಪೈಸೆ ಹೆಚ್ಚಾಗಿದ್ದು, 102.94 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಅಂತೆಯೇ ಡೀಸೆಲ್​ ಬೆಲೆಯೂ 35 ಪೈಸೆ ಹೆಚ್ಚಳವಾಗಿದ್ದು, ಒಂದು ಲೀಟರ್​ ಡೀಸೆಲ್​ಗೆ 91.42 ರೂ. ಇದೆ.
Published by:Latha CG
First published: